Sun,May19,2024
ಕನ್ನಡ / English

ಕೇಂದ್ರ ಮಾಜಿ ಸಚಿವ ಬಾಬಾಗೌಡ ಪಾಟೀಲ ನಿಧನ, ಸಿಎಂ ಬಿಎಸ್ ವೈ ಸೇರಿದಂತೆ ಗಣ್ಯರಿಂದ ಸಂತಾಪ! | ಜನತಾ ನ್ಯೂಸ್

21 May 2021
1238

ಬೆಳಗಾವಿ : ಹಿರಿಯ ರೈತ ಮುಖಂಡ, ಕೇಂದ್ರದ ಮಾಜಿ ಸಚಿವ, ರೈತ ನಾಯಕ ಬಾಬಾಗೌಡ ಪಾಟೀಲ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ಬಾಬುಗೌಡ ಅವರಿಗೆ ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು. ಒಂದು ವಾರದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು. ಬೆಳಗಾವಿ ಜಿಲ್ಲೆಯ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬಾಬಾಗೌಡ ಪಾಟೀಲ್ ರೈತಪರ ಹೋರಾಟದಲ್ಲಿ ಸಕ್ರಿಯವಾಗಿದ್ದರು. ಬೆಳಗಾವಿ ಜಿಲ್ಲೆಯ ಚಿಕ್ಕಬಾಗೇವಾಡಿ ಗ್ರಾಮದವರಾದ ಬಾಬಾಗೌಡ ಪಾಟೀಲ್ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು.

1989ರಿಂದ 1994ರವರೆಗೆ ಶಾಸಕರಾಗಿದ್ದ ಇವರು 1998ರಲ್ಲಿ ಬೆಳಗಾವಿಯಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ಕ್ಷೇತ್ರದ ಅಭಿವೃದ್ಧಿಯಲ್ಲಿಯೂ ಅವರು ಗಣನೀಯ ಕೊಡುಗೆ ನೀಡಿದ್ದರು. ಅವರ ನಿಧನದಿಂದ ರೈತಪರ ಕಾಳಜಿ ಹೊಂದಿದ್ದ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ರೈತ ನಾಯಕ ಬಾಬುಗೌಡ ಪಾಟೀಲ್ ಅವರ ನಿಧನಕ್ಕೆ ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಕಂಬನಿ ಮಿಡಿದಿದ್ದಾರೆ.

ರೈತ ಹೋರಾಟದಿಂದ ಪ್ರಬಲ ನಾಯಕರಾಗಿದ್ದ ಬಾಬುಗೌಡರ ನಿಧನ ರಾಜ್ಯಕ್ಕೆ ಹಾಗೂ ರೈತ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ.ಮೃತರ ಆತ್ಮಕ್ಕೆ ಶಾಂತಿ ನಿಧನದ ದುಃಖ ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿಗಳಿಗೆ ನೀಡಲಿ ಎಂದು ಬಿ.ಸಿ.ಪಾಟೀಲ್‌ ಹೇಳಿದ್ದಾರೆ.

RELATED TOPICS:
English summary :Belagavi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...