Wed,May01,2024
ಕನ್ನಡ / English

ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರ ಬಾಕಿ ಇರುವ ಗೌರವಧನ ತಕ್ಷಣ ಬಿಡುಗಡೆ ಮಾಡಿ! | ಜನತಾ ನ್ಯೂಸ್

23 May 2021
1439

ಬೆಂಗಳೂರು : ಕೋವಿಡ್ ನಿರ್ವಹಣೆಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ರಾಜ್ಯ ಸರ್ಕಾರ ಬಾಕಿ ಇರುವ ಗೌರವಧನವನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಇಂದಿನ ಪರಿಸ್ಥಿತಿ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಕುಮಾರಸ್ವಾಮಿ, "ಕೊರೋನಾ ವಾರಿಯರ್ಸ್ ಎಂದು ಹಣೆಪಟ್ಟಿ ಹಚ್ಚಿದ ಸರ್ಕಾರ ಒಬ್ಬ ಆಶಾ ಕಾರ್ಯಕರ್ತೆಗೆ ಮಾತ್ರ 50 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಉಳಿದ 15 ಮಂದಿಗೆ ಪರಿಹಾರ ಕೊಟ್ಟಿಲ್ಲ. ಸರ್ಕಾರದ ಇಂತಹ ಬೇಜವಾಬ್ದಾರಿಗಳಿಂದ ಬೇಸತ್ತು ಆಶಾ ಕಾರ್ಯಕರ್ತೆಯರು ದೂರ ಉಳಿದರೆ ಕೋವಿಡ್ 19 ನಿಯಂತ್ರಣ ಕೈ ಮೀರುತ್ತದೆ.

ಸರ್ಕಾರಕ್ಕೆ ಇದು ಎಚ್ಚರಿಕೆಯ ಗಂಟೆ ಕೂಡ" ಎಂದು ಎಚ್ಚರಿಕೆ ನೀಡಿದ್ದಾರೆ.ಮತ್ತೊಂದು ಟ್ವೀಟ್​ನಲ್ಲಿ, "ಕೋವಿಡ್ ನಿರ್ವಹಣೆಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ರಾಜ್ಯ ಸರ್ಕಾರ ಬಾಕಿ ಇರುವ ಗೌರವಧನವನ್ನು ಬಿಡುಗಡೆ ಮಾಡಬೇಕು.

3 ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಇಲ್ಲ. ಸಂಬಳವನ್ನೆ ನಂಬಿರುವ ಅವರ ಬದುಕು ದುಸ್ತರವಾಗಿದೆ. ಕೋವಿಡ್ ಮೊದಲ ಅಲೆಯಲ್ಲಿ ಜೀವಪಣಕ್ಕಿಟ್ಟು ದುಡಿದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನದ ಜೊತೆಗೆ ತಲಾ ₹3 ಸಾವಿರ ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದ್ದ ಸರ್ಕಾರ ಶೇಕಡಾ 50ರಷ್ಟು ಮಂದಿಗೆ ಕೊಟ್ಟು ಉಳಿದವರಿಗೆ ವಂಚಿಸಿದೆ.

ಕೋವಿಡ್ 19 ನಿಯಂತ್ರಣಕ್ಕಾಗಿ ಶ್ರಮಿಸಿದ 16 ಮಂದಿ ಆಶಾ ಕಾರ್ಯಕರ್ತೆಯರು ಈ ವರೆಗೆ ಸಾವನ್ನಪ್ಪಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಕೊರೋನಾ ವೈರಸ್‌ ಸೋಂಕಿತರಾಗಿದ್ದಾರೆ. ಮಾಸಿಕ ಗೌರವಧನ ಕೊಡುವಲ್ಲಿ ಸೋತಿರುವ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ.

ಕೊರೋನಾ ವಾರಿಯರ್ಸ್ ಎಂದು ಬಾಯಿಮಾತಿನಲ್ಲಿ ಹೇಳಿದ ಸರ್ಕಾರ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಸಕಾಲಕ್ಕೆ ಗೌರವಧನ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ದುಡಿದವರಿಗೆ ಗೌರವಧನ ಕೊಡಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ 1250 ಕೋಟಿ ರೂಗಳ ಪ್ಯಾಕೇಜನ್ನು ಅನುಷ್ಠಾನಗೊಳಿಸುತ್ತದೆ ಎಂಬುದು ಭ್ರಮೆ ಅಲ್ಲದೆ ಮತ್ತೇನು?" ಎಂದು ಪ್ರಶ್ನೆ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಬ್ಲಾಕ್​ ಫಂಗಸ್​ ಸೋಂಕಿನ ಸಾಂಕ್ರಾಮಿಕದ ಬಗ್ಗೆಯೂ ಉಲ್ಲೇಖಿಸಿರುವ ಕುಮಾರಸ್ವಾಮಿ, "ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ಅಗತ್ಯವಿರುವ ಔಷಧ ಪೂರೈಕೆಯಲ್ಲಿನ ಕೇಂದ್ರದ ತಾರತಮ್ಯ, ಔಷಧ ಸಂಗ್ರಹಿಸಲು ತೆಲಂಗಾಣ ಕೈಗೊಂಡ ಕ್ರಮಗಳ ಕುರಿತು 22-05-2021ರಂದು ಟ್ವೀಟ್‌ ಮಾಡಿ ಸರ್ಕಾರವನ್ನು ಎಚ್ಚರಿಸಿದ್ದೆ. ಅದು ವರದಿಯೂ ಆಗಿತ್ತು. ಅದರ ಮರುದಿನವೇ ಔಷಧ ಪೂರೈಕೆಗೆ ಸರ್ಕಾರ ಕಂಪನಿಗಳಿಂದ ದರ ಪಟ್ಟಿ ಆಹ್ವಾನಿಸಿದೆ. ಇದು ಸ್ವಾಗತಾರ್ಹ ಕ್ರಮ ಎಂದಿದ್ದಾರೆ.

RELATED TOPICS:
English summary :HD Kumaraswamy

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...