Mon,May06,2024
ಕನ್ನಡ / English

ರಾಜ್ಯದಲ್ಲಿ 300ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ! | ಜನತಾ ನ್ಯೂಸ್

24 May 2021
1748

ಬೆಂಗಳೂರು : ರಾಜ್ಯದಲ್ಲಿ 300ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಇರುವ ಬಗ್ಗೆ ಕಪ್ಪು ಶಿಲೀಂದ್ರ ಸಮಿತಿ ನೀಡಿದ ಪ್ರಾಥಮಿಕ ವರದಿಯಲ್ಲಿ ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಲ್ಲ ಜಿಲ್ಲೆಗಳಲ್ಲೂ ಚಿಕಿತ್ಸೆಯ ಅನುಕೂಲ ಇದೆ. ಆದರೆ ಔಷಧಿಗೆ ಸ್ವಲ್ಪ ಕೊರತೆ ಇದೆ. ಈ ಬಗ್ಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಜೊತೆ ಚರ್ಚಿಸಲಾಗಿದ್ದು, ಹೆಚ್ಚಿನ ಔಷಧಿ ಲಭಿಸುವ ನಿರೀಕ್ಷೆ ಇದೆ ಎಂದರು.

ಸೋಂಕು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಮಾಡಲು ಸಮಿತಿ ರಚಿಸಿದ್ದು, ಈ ಸಮಿತಿ ವರದಿ ನೀಡಿದೆ. ಸ್ಟೀರಾಯಿಡ್ ಜೊತೆಗೆ ಹ್ಯುಮಿಡಿಫೈರ್ ನಲ್ಲಿ ನಲ್ಲಿ ನೀರು ಬಳಕೆ, ಐಸಿಯು ವೆಂಟಿಲೇಟರ್ ಅನ್ನು ಇನ್ನೊಬ್ಬರಿಗೆ ಬಳಸುವಾಗ, ಒಂದೇ ಮಾಸ್ಕ್ ದೀರ್ಘಕಾಲ ಬಳಕೆ, ಟ್ಯೂಬ್, ಹಾಸಿಗೆ ಮೊದಲಾದ ಮೂಲಗಳಿಂದ ಸೋಂಕು ಬರುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನು ತಡಗಟ್ಟುವ ಬಗೆಯನ್ನೂ ಇದರಲ್ಲಿ ತಿಳಿಸಲಾಗಿದೆ ಎಂದರು.

ಬ್ಲ್ಯಾಕ್​ ಫಂಗಸ್​ಅನ್ನು ತಡೆಗಟ್ಟುವ ಬಗೆಯನ್ನೂ ವರದಿಯಲ್ಲಿ ತಿಳಿಸಲಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ಕಟ್ಟಡ ನವೀಕರಣ ಕಾಮಗಾರಿ ನಡೆಸಬಾರದು, ಹೊರಗಿನವರು ವಾರ್ಡ್‍ಗೆ ಬರಬಾರದು, ಪ್ರತಿ ಪಾಳಿ ಮುಗಿದ ಮೇಲೆ ಸ್ವಚ್ಛತೆ ಮಾಡಬೇಕು, ಎಲ್ಲಾ ಉಪಕರಣಗಳನ್ನು ಸ್ವಚ್ಛವಾಗಿಡಬೇಕು ಎಂದು ಸೂಚಿಸಲಾಗಿದೆ ಎಂದರು.

ಪ್ರತಿ ಉಪಕರಣಗಳನ್ನು ಸ್ವಚ್ಛವಾಗಿಡಬೇಕು ಹಾಗೂ ಕೋವಿಡ್ ನಿಂದ ಗುಣಮುಖರಾದವರಿಗೆ ಇಎನ್ ಟಿ ವೈದ್ಯರು 3, 7, 21ನೇ ದಿನ ತಪಾಸಣೆ ಮಾಡುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

RELATED TOPICS:
English summary :Black fungus

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...