Sun,May19,2024
ಕನ್ನಡ / English

ಮೃತ ಕರೊನಾ ವಾರಿಯರ್ಸ್‌ ಕುಟುಂಬಕ್ಕೆ ಪರಿಹಾರ ವಿಳಂಬ: ಮುಖ್ಯಮಂತ್ರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ | ಜನತಾ ನ್ಯೂಸ್

29 May 2021
1126

ಬೆಂಗಳೂರು : ಸರ್ಕಾರ ಕರೊನಾ ವಾರಿಯರ್ಸ್ ಎಂದು ಪರಿಗಣಿಸಿರುವ ಮತ್ತು ಕರ್ತವ್ಯದ ವೇಳೆ ಮರಣ ಹೊಂದಿರುವ ಆಶಾ, ಅಂಗನವಾಡಿ ಕಾರ್ಯಕರ್ತರ ಕುಟುಂಬಸ್ಥರಿಗೆ ಕೂಡಲೇ ಪರಿಹಾರ ವಿತರಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕರೊನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿಗಳ ತಳಮಟ್ಟದ ಸಿಬ್ಬಂದಿ, ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಸಾರಿಗೆ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ, ಪಶುವೈದ್ಯರು ಮುಂತಾದವರು ನೇರವಾಗಿ ಜನರ ಜತೆ ಇದ್ದು ಕೆಲಸ ಮಾಡುತ್ತಿದ್ದಾರೆ.

ಇವರುಗಳಿಗೆ ವಿಶೇಷ ರಕ್ಷಣೆಯನ್ನು ನೀಡಬೇಕಾದುದು ಸರ್ಕಾರದ ಪ್ರಧಾನ ಜವಾಬ್ದಾರಿ. ಆದರೆ ಸರ್ಕಾರ ಇನ್ನೂ ಹಲವು ಇಲಾಖೆಗಳ ಸಿಬ್ಬಂದಿಯನ್ನು ಕರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಿಲ್ಲ. ಈಗಾಗಲೇ ಕರೊನಾ ವಾರಿಯರ್ಸ್ ಎಂದು ಘೋಷಿಸಿರುವವರಿಗೆ ಕಳೆದ ಎರಡ್ಮೂರು ತಿಂಗಳಿಂದ ಸಂಬಳವನ್ನೂ ನೀಡಿಲ್ಲ.

ಆಶಾ ಕಾರ್ಯಕರ್ತೆಯರು ನೇರವಾಗಿ ರೋಗಿಗಳ ಸಂಪರ್ಕದಲ್ಲಿರುತ್ತಾರೆ. ಅವರಿಗೆ ಮಾಸ್ಕ್, ಸ್ಯಾನಿಟೈಸರ್, ಅಗತ್ಯ ಔಷಧಗಳು ಮುಂತಾದವುಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ನೀಡಬೇಕು ಎಂದು ಒತ್ತಾಯಿಸಿದ ಸಿದ್ದರಾಮಯ್ಯ, ಕೊರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಿದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಸಿಬ್ಬಂದಿಗಳಲ್ಲಿ ಹಲವರು ಮರಣ ಹೊಂದಿದ್ದಾರೆ. ಅವರಲ್ಲಿ ಬಹುತೇಕರ ಕುಟುಂಬಗಳಿಗೆ ಇನ್ನೂ ಪರಿಹಾರ ನೀಡಿಲ್ಲ. ಅವರೆಲ್ಲರಿಗೂ ಕೂಡಲೇ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ.

ಸಿಬ್ಬಂದಿಗಳಿಗೆ ಮಾರ್ಚ್ ತಿಂಗಳಿಂದ ಸಂಬಳವನ್ನೇ ನೀಡಿಲ್ಲ. ತಾಂತ್ರಿಕ ಕಾರಣಗಳನ್ನು ನೀಡಿ ಕೊರೊನಾ ಕಾಲದಲ್ಲೂ ಸಂಬಳ ನೀಡದಿರುವುದು ಅತ್ಯಂತ ಅಮಾನವೀಯ. ಕೂಡಲೇ ಎಲ್ಲರಿಗೆ ಸಂಬಳ ಬಿಡುಗಡೆ ಮಾಡಬೇಕು.

ದೇಶದ ರಾಜ್ಯಗಳಲ್ಲೇ ಆರ್ಥಿಕ ಸ್ಥಿತಿಯಲ್ಲಿ ಮೊದಲೆರಡು ಸ್ಥಾನಗಳಲ್ಲೇ ಇರುವ ಕರ್ನಾಟಕದಲ್ಲಿ ಕನಿಷ್ಠ ಮಾಸ್ಕ್​, ಸ್ಯಾನಿಟೈಸರ್ ನೀಡುವಷ್ಟು ಹೃದಯವಂತಿಕೆ, ಕರ್ತವ್ಯ ಪ್ರಜ್ಞೆ, ಉದಾರತೆಗಳನ್ನು ಆಡಳಿತ ನಡೆಸುವ ಸರ್ಕಾರ ಕಳೆದುಕೊಂಡಿರುವುದು ಅತ್ಯಂತ ಬೇಜವಾಬ್ದಾರಿಯುತವಾದ ಹಾಗೂ ಅವಮಾನಕರವಾದ ಸಂಗತಿ. ಆದ್ದರಿಂದ ಕೂಡಲೇ ಅವರ ಬೇಡಿಕೆ ಪರಿಗಣಿಸಿ ಈಡೇರಿಸಬೇಕು.

ಸೂಕ್ತವಾದ, ಗೌರವಯುತವಾದ ಸಂಬಳ, ಗೌರವಧನ, ಸಂಭಾವನೆಯನ್ನು ಹೆಚ್ಚಿಸಬೇಕು. ಕೊರೊನಾದಂಥ ಮಾರಣಾಂತಿಕ ಸೋಂಕನ್ನು ನಿಭಾಯಿಸುವಲ್ಲಿ ಮಾನವ ಸಂಪನ್ಮೂಲದ ಪಾತ್ರ ಬಹಳ ದೊಡ್ಡದು. ಅವರುಗಳನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳಬೇಕಾದುದು ಸರ್ಕಾರದ ಜವಾಬ್ದಾರಿ ಎಂದು ಭಾವಿಸಿ ಕೂಡಲೇ ಈಡೇರಿಸಬೇಕೆಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.

RELATED TOPICS:
English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...