ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಆಸ್ಪತ್ರೆಗೆ ದಾಖಲು! | ಜನತಾ ನ್ಯೂಸ್
ಚಿಕ್ಕಮಗಳೂರು : ಖಾಸಗಿ ಆಸ್ಪತ್ರೆ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಬೆಳಿಗ್ಗೆ ಆಸ್ಪತ್ರೆಗೆ ಬಂದಿದ್ದ ವೈದ್ಯ ದೀಪಕ್ ಮಧ್ಯಾಹ್ನ ಊಟಕ್ಕೆ ಮನೆಗೆ ತೆರಳುತ್ತಿದ್ದಾಗ ಪಟ್ಟಣದ ಕಮರ್ಷಿಯಲ್ ಟ್ಯಾಕ್ಸ್ ಆಫೀಸ್ ಹತ್ತಿರದ ನಿರ್ಜನ ಪ್ರದೇಶದಲ್ಲಿ ಯಾರೋ ಅಪರಿಚಿತರು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಮಚ್ಚಿನಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು ಅವರನ್ನು ಅಲ್ಲೇ ರಸ್ತೆ ಬದಿ ತಳ್ಳಿ ಹೋಗಿದ್ದರು.
ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ಠಾಣೆಗೆ ಸಮೀಪದಲ್ಲೇ ಈ ಘಟನೆ ನಡೆದಿದ್ದು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವೈದ್ಯರನ್ನು ಸಾರ್ವಜನಿಕರು ರಕ್ಷಿಸಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತರೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.