Sun,Apr28,2024
ಕನ್ನಡ / English

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪದಚ್ಯುತಿಗೆ ಮೈತ್ರಿ ಒಕ್ಕೂಟ ರಚಿಸಿದ ವಿರೋಧಿ ಬಣ | ಜನತಾ ನ್ಯೂಸ್

03 Jun 2021
1918

ಜೆರುಸಲೆ೦ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿರೋಧಿಗಳು ಹೊಸ ಆಡಳಿತ ಒಕ್ಕೂಟವನ್ನು ರಚಿಸುವ ಒಪ್ಪಂದಕ್ಕೆ ಬಂದಿರುವುದಾಗಿ ಘೋಷಿಸಿದ್ದು, ಇದು ದೀರ್ಘಕಾಲದ ಇಸ್ರೇಲಿ ನಾಯಕನನ್ನು ಪದಚ್ಯುತಿಗೊಳಿಸಲು ದಾರಿ ಮಾಡಿಕೊಟ್ಟಿದೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಪದಚ್ಯುತಿಗೊಳಿಸಲು ವಿಶಾಲ ಆಧಾರಿತ ಒಕ್ಕೂಟವನ್ನು ರಚಿಸುವಲ್ಲಿ ಯಶಸ್ವಿಯಾಗಿದ್ದೇವೆ, ಎಂದು ಇಸ್ರೇಲ್ ವಿರೋಧ ಪಕ್ಷದ ನಾಯಕ ಯೇರ್ ಲ್ಯಾಪಿಡ್ ಹೇಳಿದ್ದಾರೆ. ಇಸ್ರೇಲ್ ಇತಿಹಾಸದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೇಶದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ ನಾಯಕರಾಗಿದ್ದಾರೆ.

"ನಾನು ಯಶಸ್ವಿಯಾಗಿದ್ದೇನೆ" ಎಂದು ಮಾಜಿ ಟಿವಿ ಸುದ್ದಿ ನಿರೂಪಕ ಲ್ಯಾಪಿಡ್ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. "ಈ ಸರ್ಕಾರವು ಇಸ್ರೇಲ್ ನ ಎಲ್ಲಾ ನಾಗರಿಕರು, ಅದಕ್ಕೆ ಮತ ಹಾಕಿದವರು ಮತ್ತು ಮತ ಚಲಾಯಿಸದವರ ಸೇವೆಯಲ್ಲಿ ಕೆಲಸ ಮಾಡುತ್ತದೆ ಎಂದು ನಾನು ಭರವಸೆ ನೀಡುತ್ತೇನೆ", ಎಂದು ಹೇಳಿದ್ದಾರೆ.

ಬಲಪಂಥೀಯ ರಾಷ್ಟ್ರೀಯತಾವಾದಿ ಟೆಕ್ ಮಿಲಿಯನೇರ್ ನಫ್ತಾಲಿ ಬೆನೆಟ್(49) ಮೊದಲು ಪ್ರಧಾನ ಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದು, ಎರಡು ವರ್ಷಗಳ ನಂತರ ಲ್ಯಾಪಿಡ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಮುಂಬರುವ ದಿನಗಳಲ್ಲಿ ಇದನ್ನು 120 ಸದಸ್ಯರ ನೆಸ್ಸೆಟ್ ಶಾಸಕಾಂಗವು ದೃಡಪಡಿಸಿದಲ್ಲಿ, ಇಸ್ರೇಲಿ ರಾಜಕೀಯದಲ್ಲಿ ದೀರ್ಘಕಾಲ ಪ್ರಾಬಲ್ಯ ಹೊಂದಿರುವ ಹಾಕಿಶ್ ಬಲಪಂಥೀಯ ನಾಯಕನ ದೀರ್ಘ ಆಳ್ವಿಕೆಯನ್ನು ಇದು ಕೊನೆಗೊಳಿಸುತ್ತದೆ.

RELATED TOPICS:
English summary :Opponents forms coalition to oust Israeli PM Netanyahu

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...