Sat,May04,2024
ಕನ್ನಡ / English

ಇದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆ ನಿರ್ಧಾರ, ಪಿಯುಸಿ ಪರೀಕ್ಷೆ ರದ್ದುಪಡಿಸಿದ್ದಕ್ಕೆ ಪ್ರಧಾನಮಂತ್ರಿಯ "ಗುಮ್ಮ" ಕಾರಣ ಎಂದ ಕುಮಾರಸ್ವಾಮಿ | ಜನತಾ ನ್ಯೂಸ್

04 Jun 2021
941

ಬೆಂಗಳೂರು : ಕೋವಿಡ್‌ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸೆಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ. ಮತಿಗೆಟ್ಟಂತೆ ವರ್ತಿಸುತ್ತಿರುವ ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗಾಡುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿದ್ದಕ್ಕೆ ಪ್ರಧಾನಮಂತ್ರಿಯ "ಗುಮ್ಮ" ಕಾರಣ. ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ಬೃಹಸ್ಪತಿ ಶಿಕ್ಷಣ ಸಚಿವರೋ? ಪೋಷಕರು, ವಿದ್ಯಾರ್ಥಿಗಳ ತಾಳ್ಮೆ ಕೆಣಕುವ ಪರೀಕ್ಷಾ ಮಂತ್ರಿಯೋ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಪಿಯುಸಿ ರದ್ದು ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದಾಗಿ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿಕೆ, ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‍ಎಸ್ ಎಲ್‍ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ. ಮತಿಗೆಟ್ಟಂತೆ ವರ್ತಿಸುತ್ತಿರುವ ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗಾಡುವಂತಾಗಿದೆ.

ಸರ್ಕಾರ ತಕ್ಷಣ ಇಂತಹ ಮತಿ ಹೀನ ನಿರ್ಧಾರದಿಂದ ಹಿಂದೆ ಸರಿಯಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ. ಎಸ್ ಎಸ್ ಎಲ್ ಸಿ ಮಕ್ಕಳಿಗೆ ಸೀಮಿತ ವಿಷಯಗಳ ಪರೀಕ್ಷೆ ಎಂಬ ಮೊಂಡುತನವನ್ನು ಸರ್ಕಾರ ಕೈಬಿಡಬೇಕು. ಮಕ್ಕಳ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಬಿಟ್ಟು, ಶಿಕ್ಷಣ ಸಚಿವರು ಎಡಬಿಡಂಗಿ ನಿರ್ಧಾರ ತೆಗೆದು ಕೊಂಡಿರುವುದಕ್ಕೆ ಮುಖ್ಯಮಂತ್ರಿಗಳು ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಎಸೆಸೆಲ್ಸಿ ಮತ್ತು ಪಿಯುಸಿ ಮಕ್ಕಳಿಗೆ ಏಕರೂಪ ಪರೀಕ್ಷಾ ಪದ್ಧತಿಯನ್ನು ಜಾರಿಗೆ ತರಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ ಎಂದಾದರೆ ಅದು ಅವರಿಗಿಂತ ಕಿರಿಯರಾದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೂ ಅನ್ವಯಿಸಬೇಕು.

ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ವಿಷಯದಲ್ಲಿ ಮೌನಿ ಆಗಿರುವ ಶಿಕ್ಷಣ ಸಚಿವರು ಬಿಸಿ ಊಟ ಸಿಗದೆ ಕಂಗಾಲಾಗಿರುವ ಬಡ ವಿದ್ಯಾರ್ಥಿಗಳ ಬಗ್ಗೆ ಮಾತನಾಡುವುದಿಲ್ಲ.

ಪರೀಕ್ಷೆಯಲ್ಲಿ ಪಾಸಾಗುವ ಏಳೆಂಟು ಲಕ್ಷ ಮಂದಿ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನಾಯಸವಾಗಿ ಸೀಟು ದಕ್ಕಿಸಿಕೊಳ್ಳಲು ವ್ಯವಸ್ಥೆ ಮಾಡುವ ಕಡೆ ಚಿತ್ತ ಹರಿಸಲಿ ಎಂದು ಆಗ್ರಹಿಸಿದ್ದಾರೆ.

RELATED TOPICS:
English summary :HD Kumaraswamy

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...