Sun,May19,2024
ಕನ್ನಡ / English

ವಿವಿಧ ರಾಜ್ಯ ನೌಕರ ಸಂಘಗಳಿಂದ ವೇತನ ಪರಿಷ್ಕರಣೆ ಬಗ್ಗೆ ಪ್ರತಿಭಟನೆ

11 Feb 2018
781

ಬೆಂಗಳೂರು : ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ, ಸಚಿವಾಲಯ ನೌಕರ ಸಂಘ, ವಿಧಾನಪರಿಷತ್ ಸಚಿವಾಲಯ ನೌಕರ ಸಂಘ, NPS, ನೌಕರರ ಸಂಘ ಸೇರಿದಂತೆ ವಿವಿಧ ವೃಂದ ಸಂಘಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕೇಂದ್ರ ಸರ್ಕಾರದ ನೌಕರರ ವೇತನಕ್ಕೆ ಸರಿ ಸಮಾನವಾದ ವೇತನವನ್ನು ರಾಜ್ಯ ನೌಕರರಿಗೂ ನೀಡಲು ಒತ್ತಾಯಿಸಿದವು. ಕರ್ನಾಟಕ ರಾಜ್ಯ 6ನೇ ವೇತನ ಆಯೋಗ ಮಾಡಿರುವ ಶಿಪಾರಸುಗಳು ಕೇಂದ್ರ ಸರ್ಕಾರದ ನೌಕರರ ವೇತನಕ್ಕೆ ಸರಿಸಮನಾದ ವೇತನ ಭತ್ಯೆಗಳನ್ನು ಶಿಫಾರಸ್ಸು ಮಾಡುವಲ್ಲಿ ವಿಫಲವಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧ ಕಛೇರಿಗಳ ಮುಂದೆ ದಿನಾಂಕ 9 ಫೆಬ್ರುವರಿ 2018ರಿಂದ ನೌಕರರ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿತ್ತು.

ದಿನಾಂಕ ಫೆಬ್ರುವರಿ 15 2018 ರಂದು ಗುರುವಾರ ಬೆಂಗಳೂರಿನ ಆನಂದರಾವ್ ಸರ್ಕಲ್ ನ, ಗಾಂಧಿಪ್ರತಿಮೆ ಎದುರು ಒಂದು ದಿನದ ಧರಣಿ ಸತ್ಯಾಗ್ರಹ ವನ್ನು ಏರ್ಪಡಿಸಲಾಗಿದೆ. ಈ ಧರಣಿಯು ಬೆಳಿಗ್ಗೆ 11ಗಂಟೆಯಿಂದ ಸಂಜೆ 5ಗಂಟೆಯ ವರೆಗೂ ನಡೆಯಲಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧ ಸಂಘಟನೆಗಳು ಮತ್ತು ವಿವಿಧ ಇಲಾಖಾ ವೃಂದಗಳ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಈ ಕುರಿತು ಸೂಚನೆ ಹೊರಿಡಿಸಿದ್ದು, ನೌಕರ ಬಾಂದವರಲ್ಲಿ ಭಾಗವಹಿಸುವಂತೆ ವಿನಂತಿಸಿಕೊಂಡಿದೆ.

1998ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ನೌಕರರ ಹೋರಾಟವಿಲ್ಲದೆ, ಕೇಂದ್ರ ನೌಕರರ ವೇತನ ಪಡೆಯಲು ಸಾದ್ಯವಾಗಲಿಲ್ಲ. ಪ್ರತಿವರ್ಷ ರಾಜ್ಯ ನೌಕರರು ಸರಾಸರಿ ರೂ 7000/- ಕೋಟಿಯಷ್ಟು ವೇತನ ಭತ್ಯೇ ಸೌಲಭ್ಯವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದ್ದು. ಈ ಸ್ಥಿತಿ ಮುಂದುವರೆದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರರ ವೇತನ-ಭತ್ಯೆ ವ್ಯತ್ಯಾಸ ಇನ್ನೂ ಹೆಚ್ಚಲಿದ್ದು, ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿವಿಧ ನೌಕರರ ಸಂಘಗಳು ಜಂಟಿ ಕ್ರಿಯಾ ಸಮಿತಿ ಅಡಿಯಲ್ಲಿ ಹೋರಾಟಕ್ಕೆ ಮುಂದಾಗಿದೆ.

ಕೇಂದ್ರ ನೌಕರರ ವೇತನವು ದಿನೇ ದಿನೇ ಗಣನೀಯವಾಗಿ ಹೆಚ್ಚುತ್ತಿದ್ದು, ರಾಜ್ಯ ನೌಕರರ ವೇತನ ಪರಿಷ್ಕರಣೆಯ ಬಗ್ಗೆ ರಾಜ್ಯ ಸರ್ಕಾರ ಮೀನಮೇಷ ಎನಿಸುತ್ತಿತ್ತು. ಈಗ ಚುನಾವಣೆ ಸಮೀಪಿಸುತ್ತಿದ್ದಂತೆ 6ನೇ ವೇತನ ಆಯೋಗದ ಶಿಪಾರಸ್ಸು ಪರಿಗಣಿಸುವ ಬಗ್ಗೆ ಹೇಳಲಾಗುತ್ತಿತ್ತು ಎನ್ನಲಾಗಿದೆ. ಆದರೆ ಇಷ್ಟು ದಿನಗಳಿಂದ ತಮ್ಮ ಬೇಡಿಕೆ ಈಡೆರಿಕೆಯಾಗುವ ಬಗ್ಗೆ ಜಾತಕದ ಪಕ್ಷಿಯ ಹಾಗೆ ಕಾಯುತ್ತಿದ್ದ ನೌಕರ ಆಸೆಗೆ, ಆಯೋಗದ ಶಿಪಾರಸ್ಸು ತಣ್ಣೀರೆರಸಿದಂತೆ ತೋರುತ್ತಿದೆ. ಈ ಮೂಲಕ ನೌಕರರ ವೇತನ ಪರಿಷ್ಕರಣೆಯು, ಚುನಾವಣೆ ಸಂದರ್ಭದಲ್ಲಿ ಒಂದು ತೋರಿಕೆಯ ತಂತ್ರ ಎಂದು ಅಭಿಪ್ರಾಯ ವ್ಯಕ್ತವಾಗಿದೆ.

English summary :Protests from various Karnataka State Employees associations regarding salary revision

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...