Fri,May03,2024
ಕನ್ನಡ / English

ಮಾಜಿ ಸಚಿವ, ಹಾನಗಲ್ ಶಾಸಕ ಸಿ.ಎಂ.ಉದಾಸಿ ಇನ್ನಿಲ್ಲ: ಮುಖ್ಯ ಮಂತ್ರಿಗಳ ಸಂತಾಪ | ಜನತಾ ನ್ಯೂಸ್

08 Jun 2021
1508

ಬೆಂಗಳೂರು : ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ ಅವರು ಮಂಗಳವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಉದಾಸಿ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ನಿಧನರಾಗಿದ್ದಾರೆ‌.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸಿಎಂ ಉದಾಸಿ ಅವರನ್ನು 15 ದಿನದ ಹಿಂದೆ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೆಲ್ತ್​ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದು, ನಾಳೆ ಹುಟ್ಟೂರಿಗೆ ಪಾರ್ಥಿವ ಶರೀರವನ್ನು ತರಲಾಗುವುದು. ಸಂಜೆ 5ಕ್ಕೆ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಸಿಎಂ ಉದಾಸಿ ಪುತ್ರ, ಸಂಸದ ಶಿವಕುಮಾರ್ ಉದಾಸಿ ಅವರು ತಿಳಿಸಿದ್ದಾರೆ.

ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿ.ಎಂ.ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು.

ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ.ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಮಾಜಿ ಸಚಿವ, ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡ ಸಹ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಸಿ.ಎಂ.ಉದಾಸಿ ಅವರು ಇಂದಿಲ್ಲಿ ಉಪಸ್ಥಿತರಿರಬೇಕಿತ್ತು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ನೆನೆದಿದ್ದರು. ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಹ ಸಂತಾಪ ಸೂಚಿಸಿದ್ದಾರೆ.

RELATED TOPICS:
English summary :BSYediyurappa

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...