Sun,May12,2024
ಕನ್ನಡ / English

ಜೂನ್.14ರ ನಂತರ ಕರ್ನಾಟಕದಲ್ಲಿ 4 ರಿಂದ 5 ಹಂತದಲ್ಲಿ ಅನ್​ಲಾಕ್ ಪ್ರಕ್ರಿಯೆ ಆರಂಭ: ಸಚಿವ ಆರ್​. ಅಶೋಕ್ | ಜನತಾ ನ್ಯೂಸ್

09 Jun 2021
1153

ಬೆಂಗಳೂರು : COVID-19 ಪ್ರೇರಿತ ಲಾಕ್‌ಡೌನ್ ಅಂತ್ಯಗೊಳ್ಳುವು ದರಿಂದ ಜೂನ್ 14 ರ ನಂತರ ರಾಜ್ಯದಲ್ಲಿ ನಾಲ್ಕರಿಂದ ಐದು ಹಂತಗಳಲ್ಲಿ ಅನ್ಲಾಕ್ ಮಾಡುವ ಸಾಧ್ಯತೆ ಇದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಜೂನ್ 14ಕ್ಕೆ ಲಾಕ್‌ಡೌನ್ ಮುಕ್ತಾಯವಾಗಿ ಏಕಾಏಕಿ ಒಂದೇ ಸಲಕ್ಕೆ ಅನ್‌ಲಾಕ್ ಮಾಡುವುದಿಲ್ಲ. 5 ಹಂತಗಳಲ್ಲಿ ರಾಜ್ಯದಲ್ಲಿ ಅನ್‌ಲಾಕ್ ಪ್ರಕ್ರಿಯೆ ನಡೆಯಲಿದೆ ಎಂದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಕೊರೋನಾ ಸಾವುಗಳು ಹಾಗೂ ಹೊಸ ಪ್ರಕರಣಗಳ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, COVID ಸೋಂಕಿನ ಪ್ರಮಾಣವನ್ನು ಮತ್ತಷ್ಟು ತಗ್ಗಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದ್ದು, ಒಂದೇ ಸಮಯದಲ್ಲಿ ಲಾಕ್‌ಡೌನ್ ಅನ್ನು ಸಡಿಲಿಸುವುದು ಸಾಧ್ಯವಿಲ್ಲ. ಈ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಕೆ.ಸುಧಾಕರ್ ಮತ್ತು ನಾನು ಮುಖ್ಯಮಂತ್ರಿಯೊಂದಿಗೆ ವಿವರವಾದ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

ಆದರೆ, ಜೂನ್ 14ರ ನಂತರ ರಾಜ್ಯದಲ್ಲಿ ಅನ್​ಲಾಕ್​ ಪ್ರಕ್ರಿಯೆ ಆರಂಭಗೊಳ್ಳಲಿದೆ. ಬಹುಶಃ ಇದನ್ನು ನಾಲ್ಕರಿಂದ ಐದು ಹಂತಗಳಲ್ಲಿ ಮಾಡಬಹುದು. ಮೊದಲ ಹಂತದಲ್ಲಿ ಈಗ ಬೆಳಿಗ್ಗೆ 6 ರಿಂದ 10 ರ ನಡುವೆ ಇರುವ ಶಾಪಿಂಗ್‌ಗಾಗಿ ಸಮಯವನ್ನು ಇನ್ನಷ್ಟು ವಿಸ್ತರಿಸಬಹುದು. ವ್ಯಾಯಾಮ ಮತ್ತು ವಾಯುವಿಹಾರಕ್ಕಾಗಿ ಉದ್ಯಾನಗಳಿಗೆ ಭೇಟಿ ನೀಡಲು ಅವಕಾಶ ನೀಡುವ ಬಗ್ಗೆ ಕೂಡ ಸರ್ಕಾರದ ಮಟ್ಟದಲ್ಲಿ ಚಿಂತನೆಗಳು ನಡೆಯುತ್ತಿವೆ.

ಲಾಕ್‌ಡೌನ್ ಯಾವ ರೀತಿ ತೆರೆಯಬೇಕು, ಮೊದಲ ಹಂತದಿಂದ ಯಾವುದಕ್ಕೆಲ್ಲಾ ವಿನಾಯಿತಿ ನೀಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ, ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಅನ್ ಲಾಕ್ ನಡೆಸಲಾಗುವುದು. ಅಂತರ್ ಜಿಲ್ಲೆ, ಸಾರಿಗೆ ವ್ಯವಸ್ಥೆ ಓಡಾಟ ಆರಂಭ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದರು.

RELATED TOPICS:
English summary :R.Ashok

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...