Sat,May18,2024
ಕನ್ನಡ / English

ಭಟ್ಕಳದಲ್ಲಿ 8 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆ ಬಂಧನ! | ಜನತಾ ನ್ಯೂಸ್

10 Jun 2021
1566

ಕಾರವಾರ : ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ರಾಷ್ಟ್ರೀಯತೆಯನ್ನು ಹೊಂದಿರುವ ಮಹಿಳೆಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ.

ಪಾಕಿಸ್ತಾನದ ಖತೀಜಾ ಮೆಹರಿನ್ ಎಂಬಾಕೆಯೇ ಬಂಧಿತ ಮಹಿಳೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 8 ವರ್ಷದ ಹಿಂದೆ ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್‌ ಎಂಬುವವರನ್ನು ಖತೀಜಾ ದುಬೈನಲ್ಲಿ ವಿವಾಹವಾಗಿದ್ದಳು.

ದುಬೈನಲ್ಲಿ ಭಟ್ಕಳದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬಾತನ ಜತೆ ವಿವಾಹವಾಗಿದ್ದ ಈಕೆ ಯಾವುದೇ ದಾಖಲೆ ನೀಡದೇ 2015ರಲ್ಲಿ ಕಳ್ಳಮಾರ್ಗದ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಳು. 2014ರಲ್ಲಿ 3 ತಿಂಗಳ ವಿಸಿಟಿಂಗ್ ವೀಸಾದ ಮೇಲೆ ಭಾರತಕ್ಕೆ ಬಂದಿದ್ದ ಈಕೆ 2015ರಲ್ಲಿ ಕಳ್ಳ ಮಾರ್ಗ ಅನುಸರಿಸಿ ಭಾರತ ಪ್ರವೇಶಿದ್ದಳು.

ಭಟ್ಕಳದಲ್ಲಿ ಈಕೆಯು ಸುಳ್ಳು ದಾಖಲೆಗಳನ್ನು ಸ್ಥಳೀಯ ಸಂಸ್ಥೆಗಳಿಗೆ ನೀಡಿ ರೇಶನ್ ಕಾರ್ಡ್, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಪಡೆದುಕೊಂಡಿದ್ದಾಳೆ. ಪೊಲೀಸರು ಆಕೆಯನ್ನು ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಇವೆಲ್ಲ ದಾಖಲೆಗಳನ್ನು ಕೂಡ ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.

ಮಹಿಳೆಯು ಅಕ್ರಮವಾಗಿ ನೆಲೆಸಿರುವ ಖಚಿತ ಮಾಹಿತಿ ಲಭಿಸಿದ ಬಳಿಕ ಕೆಲವು ತಿಂಗಳಿನಿಂದ ಸ್ಥಳೀಯ ಪೊಲೀಸರು ವಿವಿಧ ತನಿಖಾ ಸಂಸ್ಥೆಗಳ ಸಹಕಾರದಿಂದ ತನಿಖೆ ಕೈಗೊಂಡಿದ್ದರು. ಕೊನೆಗೂ ಆಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆಕೆಯ ವಿರುದ್ಧ ವಿದೇಶಿಗರ ನೋಂದಣಿ ಕಾಯ್ದೆ ಉಲ್ಲಂಘನೆ ಮತ್ತು ಇತರ ಭಾರತೀಯ ದಂಡ ಸಂಹಿತೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಕುರಿತು ಖಚಿತ ಮಾಹಿತಿಯನ್ನು ಕಲೆ ಹಾಕಿದ ಪೊಲೀಸ್ ಇಲಾಖೆ ಅಕ್ರಮವಾಗಿ ನೆಲೆಸಿರುವುದನ್ನು ಖಚಿತಪಡಿಸಿಕೊಂಡು ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಮನೆಯನ್ನು ಶೋಧ ಮಾಡಿದಾಗ ಈಕೆಯು ಇರುವುದು ಖಚಿತವಾಗಿದ್ದು ಆಕೆಯನ್ನು ಬಂಧಿಸಿ ವಿದೇಶಿಯರ ಕಾಯ್ದೆ ಕಲಂ 14, 14 (ಎ)(ಬಿ), ಹಾಗೂ ಐ.ಪಿ.ಸಿ. ಕಲಂ 468 ಹಾಗೂ 471ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ವರದಿಯಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬದರಿನಾಥ, ಭಟ್ಕಳ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ ಕೆ.ಯು, ಸಿ.ಪಿ.ಐ ದಿವಾಕರ ಅವರ ಮಾರ್ಗದರ್ಶನದಂತೆ ಇನ್‌ಸ್ಪೆಕ್ಟರ್ ಬಿ.ಸುಮಾ, ಸಿಬ್ಬಂದಿ ನಾರಾಯಣ ನಾಯ್ಕ, ಮುಗ್ದುಂ ಪತ್ತೆಖಾನ್, ಲೋಕಪ್ಪ ಪತ್ತಿ, ಹೀನಾ.ಎಫ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

RELATED TOPICS:
English summary :Uttara kannada

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...