ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕರಾಮುವಿ ಸಹಾಯಕ ಕುಲಸಚಿವರು! | ಜನತಾ ನ್ಯೂಸ್
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನ ಚಾಮುಂಡಿಪುರಂ ನಿವಾಸಿ ಮಂಜುಪ್ರಸಾದ್ (55) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದವರು.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವ ಮಂಜು ಪ್ರಸಾದ್ ಅದಕ್ಕಾಗಿ ನಿವೇಶನವೊಂದನ್ನು ಖರೀದಿ ಮಾಡಿದ್ದರು. ಮೈಸೂರಿನ ರಿಯಾಜ್ ಮತ್ತು ಜಾವಿದ್ ಎಂಬುವರಿಂದ ಜಯಲಕ್ಷ್ಮಿಪುರಂನ ನಿವೇಶನವೊಂದನ್ನು ಖರೀದಿ ಮಾಡಿದ್ದರು. ಎಲ್ಲವೂ ಸರಿಯಾಗಿಯೇ ಇತ್ತು ಆದರೆ ಕೊರೊನಾ ಸಂಕಷ್ಟ ಕಾಲದಲ್ಲಿ ಮನೆ ಕಟ್ಟಲು ಸಾಧ್ಯವಾಗಲಿಲ್ಲ.
ಆದ್ದರಿಂದ ಆ ನಿವೇಶನವನ್ನು ಮಾರಾಟ ಮಾಡಲು ಮಂಜುಪ್ರಸಾದ್ ನಿರ್ಧರಿಸಿದ್ದರು. ಈ ವೇಳೆ ಒಬ್ಬರು ನಿವೇಶನ ಖರೀದಿ ಮಾಡಲು ಬಂದಿದ್ದರು. ಇವರ ಬಳಿ ಇದ್ದ ನಿವೇಶನದ ದಾಖಲೆ ಪಡೆದಕೊಂಡು ಪರಿಶೀಲಿಸಿದಾಗ ಅವು ನಕಲಿ ದಾಖಲೆ ಅನ್ನೋದು ಗೊತ್ತಾಗಿದೆ. ಕಷ್ಟಪಟ್ಟು ದುಡಿದ ಹಣ ಮೋಸಗಾರರ ಪಾಲಾಯ್ತಲ್ಲ ಅಂತಾ ಮನನೊಂದು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್ನೋಟ್ನಲ್ಲಿ ಏನಿದೆ:
ರಿಯಾಜ್ ಮತ್ತು ಜಾವಿದ್ ಎಂಬುವರಿಂದ ನಾನು ಜಯಲಕ್ಷ್ಮೀಪುರಂನಲ್ಲಿ ನಿವೇಶನ ಖರೀದಿಸಿದ್ದೆ. ಬಳಿಕ ನಿವೇಶನವನ್ನು ಬೇರೆಯವರಿಗೆ ಮಾರಾಟ ಮಾಡಿದಾಗ, ಅವರಿಬ್ಬರು ನನಗೆ ನೀಡಿರುವ ದಾಖಲೆಗಳು ಸುಳ್ಳು ಎಂದು ತಿಳಿದು ಬಂದಿದೆ. ಅಲ್ಲದೇ, ಈ ಸಂಬಂಧ ದೂರು ಕೂಡ ದಾಖಲಾಗಿದೆ ಎಂದು ಡೆತ್ನೋಟ್ನಲ್ಲಿ ಬರೆದಿಟ್ಟಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ನಗರದ ಕೆ.ಆರ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ