Mon,May06,2024
ಕನ್ನಡ / English

ಕೋವಿಡ್ ಗಾಯದ ಮೇಲೆ ಬರೆ : ಶುಲ್ಕ ಪಾವತಿಸಲು ಕೊನೆಯ ಗಡುವು ಪ್ರಕಟಿಸಿದ ಖಾಸಗಿ ಶಾಲೆಗಳು | ಜನತಾ ನ್ಯೂಸ್

11 Jun 2021
1390

ಬೆಂಗಳೂರು : ಕೋವಿಡ್ ಲಾಕ್ ಡೌನ್ ಇನ್ನೂ ತೆರವುಗೊಳ್ಳುವ ಮೊದಲೇ ರಾಜಧಾನಿಯ ಖಾಸಗಿ ಶಾಲೆಗಳು ಮಕ್ಕಳ ಪ್ರವೇಶ ಶುಲ್ಕವನ್ನು ಭರಿಸಲು ಪಾಲಕರು/ಪೋಷಕರ ಮೇಲೆ ಒತ್ತಡ ಹೇರುತ್ತಿರುವುದು ಪೋಷಕರನ್ನು ಇನ್ನೂ ಕಷ್ಟಕ್ಕೆ ತಳ್ಳುತ್ತಿದೆ. ಈಗಾಗಲೇ ಬಹುತೇಕ ಶಾಲೆಗಳು ಆನ್‌ಲೈನ್‌ ಶಿಕ್ಷಣ ಪ್ರಾರಂಭಿಸಲು ಕಳೆದ ಬಾರಿಯ ಮಾದರಿಯಲ್ಲಿ ಪೋಷಕರ ಸಮ್ಮತಿ ನೀಡುವಂತೆ ಕೇಳಿದೆ ಹಾಗೆಯೇ ಕಳೆದ ಬಾರಿಯ ಮಾದರಿಯಲ್ಲಿ ಹಲವು ಖಾಸಗಿ ಶಾಲೆಗಳು ಈಗಾಗಲೇ ಆನ್‌ಲೈನ್‌ ಶಿಕ್ಷಣವನ್ನು ಶುರು ಮಾಡಿವೆ.

ಕಳೆದ ವರ್ಷ ಶೇ.70ರಷ್ಟು ಶುಲ್ಕವನ್ನು ಸರ್ಕಾರ ನಿಗದಿಪಡಿಸಿತ್ತು ಆದರೂ, ಇದನ್ನು ಬಹುತೇಕ ಖಾಸಗಿ ಶಾಲೆಗಳು ಕಾರ್ಯರೂಪಕ್ಕೆ ತಂದಿಲ್ಲ, ಇನ್ನೂ ಕೆಲವು ಶಾಲೆಗಳು ಕಣ್ಣೊರೆಸುವ ರೀತಿ ಸ್ವಲ್ಪ ರಿಯಾಯಿತಿ ನೀಡಿ ಸುಮ್ಮನಾಗಿದೆ ಅಷ್ಟೇ.

ಈಗ ಖಾಸಗಿ ಶಾಲೆಗಳು, ಪ್ರಸ್ತುತ ಶೈಕ್ಷಣಿಕ ವರ್ಷದ ಶುಲ್ಕವನ್ನು ಭರಿಸಬೇಕೆಂದು ಪೋಷಕರಿಗೆ ಕಳೆದ 2 ತಿಂಗಳಿಂದಲೇ ಸಂದೇಶಗಳನ್ನು ಕಳುಹಿಸುತ್ತಿದ್ದು, ಈಗ ಈ ಸಂದೇಶಗಳು ಗಡುವಾಗಿ ಪರಿವರ್ತನೆಗೊಂಡಿದೆ. ಇದು ಆರ್ಥಿಕವಾಗಿ ತೊಂದರೆಯಲ್ಲಿರುವ ಪಾಲಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಈಗ ಖಾಸಗಿ ಶಾಲೆಗಳಂತೂ ಜೂನ್‌ 15ರೊಳಗೆ ಮೊದಲ ಕಂತು ತುಂಬಲು ಕೊನೆ ದಿನವನ್ನು ನಿಗದಿ ಮಾಡಿದ್ದರೂ, ರಾಜ್ಯ ಸರ್ಕಾರ ಈ ಕುರಿತು ಯಾವುದೇ ಕ್ರಮ ಪ್ರಕಟಿಸಿಲ್ಲ.

ಕಳೆದ 2020-21 ಶೈಕ್ಷಣಿಕ ವರ್ಷವೂ ಕೂಡ ಕೋವಿಡ್‌ ಹಿನ್ನೆಲೆಯಲ್ಲಿ, ಸಂಪೂರ್ಣವಾಗಿ ಶಾಲೆಗಳು ಆನ್ಲೈನ್ ಮೂಲಕ ನಡೆದಿದ್ದು, ವಿದ್ಯಾರ್ಥಿಗಳು ಶಾಲೆಯ ಸೌಲಭ್ಯಗಳಾದ ಆಟದ ಮೈದಾನ, ಲ್ಯಾಬ್, ಗ್ರಂಥಾಲಯ, ಕಾರ್ಯಕ್ರಮ, ಕಂಪ್ಯೂಟರ್ ಇತ್ಯಾದಿ ಸೇರಿದಂತೆ ಯಾವುದೇ ರೀತಿಯ ಸೌಲಭ್ಯ ಬಳಸಿರುವುದಿಲ್ಲ. ಬದಲಿಗೆ ಪೋಷಕರು, ಮನೆಯಲ್ಲಿ ಕಂಪ್ಯೂಟರ್, ಲ್ಯಾಪ್ಟಾಪ್, ಟ್ಯಾಬ್, ಮೊಬೈಲ್ ಜೊತೆಗೆ ಡಾಟಾ ಕನೆಕ್ಷನ್, ಪ್ರಿಂಟರ್ ಇತ್ಯಾದಿ ಅಧಿಕ ಖರ್ಚುಗಳನ್ನೂ ಸಹ ಹೊರುವ ಪರಿಸ್ಥಿತಿ ಎದುರಿಸಿದ್ದಾರೆ.

ಆನ್‌ಲೈನ್‌ ಶಿಕ್ಷಣ ನೀಡಿದ್ದರೂ ಸಹ, ಇದೊಂದೇ ಬಾರಿಗೆ ಎಂದು ತಿಳಿದು, ಶಾಲೆಗಳ ಆಡಳಿತ ಮಂಡಳಿ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿದ್ದರು. ಆದರೆ ಈಗ, ಈ ಬಾರಿಯ ಪರಿಸ್ಥಿತಿ ನೋಡಿದರೆ ಶಾಲೆಗಳು ಅದರಲ್ಲೂ ಪ್ರಾಥಮಿಕ ಶಾಲೆಗಳು ಬಾಗಿಲು ತೆರೆಯುವುದು ಕಷ್ಟಸಾಧ್ಯ. ಮೊದಲೇ ಕೋವಿಡ್‌ನಿಂದ ಒಂದು ವರ್ಷದಿಂದ ಕಡಿಮೆ ಆದಾಯದ ತೊಂದರೆಯಲ್ಲಿರುವಾಗ, ಈ ರೀತಿಯ ಶುಲ್ಕ ತುಂಬಲು ಗಡುವು ಪೋಷಕರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.

ಕಳೆದ ವರ್ಷದ ಲಾಕ್‌ಡೌನ್‌ ನಿಂದ ಇಲ್ಲಿಯವರೆಗೆ ಕೋವಿಡ್ ಕಾರಣ ಖಾಸಗಿ ಉದ್ಯೋಗಿಗಳಿಗೆ ಸಂಬಳದಲ್ಲಿ ಕಡಿತ ಮಾಡಲಾಗಿದೆ, ವ್ಯಾಪಾರ-ವಹಿವಾಟು ಬಹುತೇಕ ಬಂದ್‌ ಆಗಿದೆ. ಕಳೆದ ವರ್ಷ ಕೇಂದ್ರ ಸರ್ಕಾರ ಸಾಲದ ಕಂತುಗಳನ್ನು 6 ತಿಂಗಳಗಳ ಕಾಲ ಬಡ್ಡಿರಹಿತ ಮುಂದೂಡಿಕೆ ಮಾಡಿತ್ತು. ಆದರೆ, ಈ ವರ್ಷ ಆ ಪರಿಹಾರ ಕೂಡ ಮದ್ಯಮ ವರ್ಗದವರಿಗೆ ಸಿಕ್ಕಿಲ್ಲ, ಹೀಗಾಗಿ ಬಹುತೇಕರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಇಂತಹ ಸಮಯದಲ್ಲಿ ಖಾಸಗಿ ಶಾಲೆಗಳು ಸಂಪೂರ್ಣ ಅಥವಾ ಹೆಚ್ಚುವರಿ ಶುಲ್ಕವನ್ನು ಇಷ್ಟೇ ದಿನಾಂಕದೊಳಗೆ ತುಂಬಬೇಕು ಎಂಬುದು ಸರಿಯಲ್ಲ. ಕೇವಲ ಬೋಧನಾ ಶುಲ್ಕ ಮಾತ್ರ ತುಂಬುವಂತೆ ಸರ್ಕಾರ ಆದೇಶ ಹೊರಡಿಸಬೇಕು ಎಂದು ಪಾಲಕರು ಮನವಿ ಮಾಡುತ್ತಿದ್ದಾರೆ.

RELATED TOPICS:
English summary :More burden in COVID situation : Pvt school announces last date for fees

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...