Sat,May04,2024
ಕನ್ನಡ / English

ಬಿಎಸ್ಸಿಗೆ ಸಿಇಟಿ ಮೂಲಕ ಪ್ರವೇಶ ಇಲ್ಲ : ಡಿಸಿಎಂ ಅಶ್ವತ್ಥ್​ ನಾರಾಯಣ | ಜನತಾ ನ್ಯೂಸ್

15 Jun 2021
1312

ಬೆಂಗಳೂರು : ಬಿಎಸ್ಸಿಗೆ ಸಿಇಟಿ ಮೂಲಕ ಪ್ರವೇಶ ನೀಡುವ ಚಿಂತನೆಯನ್ನು ಸರ್ಕಾರ ಕೈಬಿಟ್ಟಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥ್​ ನಾರಾಯಣ ತಿಳಿಸಿದ್ದಾರೆ.

2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಎಲ್ಲ ಕುಲಪತಿಗಳ ಜತೆ ವಿಕಾಸಸೌಧದಲ್ಲಿ ಇಂದು ವರ್ಚುಯಲ್‌ ಚರ್ಚೆ ನಡೆಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ವಿಜ್ಞಾನ ಬೋಧನೆ ಮತ್ತು ಕಲಿಕೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪದವಿ ವಿಜ್ಞಾನ ಪ್ರವೇಶಕ್ಕೂ ಸಿಇಟಿ ತರುವ ಯೋಚನೆ ಇತ್ತು. ಆದರೆ, ಸದ್ಯಕ್ಕೆ ಕೈಬಿಡಲಾಗಿದೆ ಎಂದು ಹೇಳಿದರು.

ಅಕ್ಟೋಬರ್‌ನಿಂದ ಪದವಿ ತರಗತಿಗಳ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಎಲ್ಲ ವಿವಿಗಳ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆದಿದೆ. ಪದವಿ ಹಂತದ ಶೈಕ್ಷಣಿಕ ವರ್ಷದ ಆರಂಭಕ್ಕೆ ಸಿದ್ಧತೆ ನಡೆಸಬೇಕು. ಮೊದಲ ವರ್ಷದ ಪದವಿಗೆ ಅಕ್ಟೋಬರ್‌ ಮೊದಲ ವಾರದಿಂದಲೇ ದಾಖಲಾತಿ ಆರಂಭಕ್ಕೆ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಸೂಚನೆ ನೀಡಿದರು.

ಬಿಎಸ್ಸಿ ಕೋರ್ಸ್‌ಗೆ ಈ ಬಾರಿ ಸಿಇಟಿ ಅಂಕ ಪರಿಗಣಿಸುವುದಿಲ್ಲ. ಯಾವ ಯುನಿವರ್ಸಿಟಿ ಗಳಲ್ಲಿ ಪದವಿ ಕೋರ್ಸ್ ಗಳಿಗೆ ಪರೀಕ್ಷೆ ನಡೆದಿಲ್ಲವೋ ಅವುಗಳ ಮಾಹಿತಿ ಪಡೆದುಕೊಂಡಿದ್ದೇವೆ. ರೆಗ್ಯುಲರ್ ಸೆಮಿಸ್ಟರ್ ಕೂಡ ರೆಗ್ಯುಲರ್ ಟೈಂ ಟೇಬಲ್ ಪ್ರಕಾರವೇ ನಡೆಸಬೇಕಾ ಎಂಬ ಬಗ್ಗೆ ಕೂಡ ಚರ್ಚೆ ಮಾಡಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ಕೊವಿಡ್​ ಕಾರಣಕ್ಕೆ ಈ ವರ್ಷ ಪಿಯುಸಿಯ ಎಲ್ಲ ವಿದ್ಯಾರ್ಥಿಗಳೂ ತೇರ್ಗಡೆ ಹೊಂದಿದ್ದಾರೆ. ಹೀಗಾಗಿ ವಿವಿಧ ಕೋರ್ಸ್​​ಗಳಿಗೆ ಬಹಳ ಬೇಡಿಕೆ ಬರುತ್ತಿದೆ. ವಿಶ್ವವಿದ್ಯಾಲಯಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, 4 ವರ್ಷದ ಪದವಿ ತರಗತಿ ಆರಂಭ ಮಾಡುವ ಮೂಲಕ ಪದವಿ ವ್ಯಾಸಂಗದ ಅಭಿಲಾಶೆಯುಳ್ಳವರನ್ನು ಸೇರಿಸಿಕೊಳ್ಳಿ ಎಂದು ಉಪ ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​ ನಾರಾಯಣ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚಿಸಿದರು.

ಕೆಲ ಕಡೆ ಪರೀಕ್ಷೆಗಳು ನಡೆದಿವೆ. ಇನ್ನು ಕೆಲವೆಡೆ ಆಗಿಲ್ಲ. ಈ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು. ಇನ್ನು, ಈಗಾಗಲೇ ದೈನಂದಿನ ತರಗತಿಗಳು ಶುರುವಾಗಿದ್ದು, ಅವುಗಳನ್ನು ಕೂಡ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಆಧಾರದಲ್ಲೇ ನಡೆಸಲಾಗುವುದು ಎಂದ ಅವರು, ಮುಂದಿನ ವರ್ಷದ ಪರೀಕ್ಷೆಗಳನ್ನು ಹೇಗೆ ನಡೆಸಬೇಕು ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಏನೆಲ್ಲ ಕ್ರಮಕೈಗೊಳ್ಳಬೇಕು ಎಂಬ ಬಗ್ಗೆ ವಿವರವಾಗಿ ಚರ್ಚಿಸಲಾಯಿತು.

ಜಾಗತಿಕ ಮಟ್ಟದಲ್ಲಿ ವಿದ್ಯಾರ್ಥಿಗಳು ಪೈಪೋಟಿ ನಡೆಸಬೇಕಾದರೆ ಕಲಿಕೆ ಮತ್ತು ಬೋಧನೆಯಲ್ಲಿ ಗುಣಮಟ್ಟ ಇರಬೇಕು ಎಂಬ ಬಗ್ಗೆ ವಿಸ್ತೃತವಾಗಿ ಸಮಾಲೋಚನೆ ನಡೆಸಲಾಯಿತು ಎಂದು ಹೇಳಿದರು. ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿಕೊಂಡು ವಿದ್ಯಾಭ್ಯಾಸ ನಡೆಸುವ ನಿಟ್ಟಿನಲ್ಲಿ ಎಲ್ಲರಿಗೂ ಟ್ಯಾಬ್‌ ನೀಡಲಾಗುತ್ತಿದೆ. ಸ್ಮಾರ್ಟ್‌ ಕ್ಲಾಸ್‌ಗಳು ಶುರುವಾಗುತ್ತಿವೆ. ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ ಜಾರಿಗೆ ಬಂದಿದೆ ಎಂದರು.

ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ ಜಾರಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಏಕೀಕೃತ ವಿವಿ– ಕಾಲೇಜು ನಿರ್ವಹಣಾ ವ್ಯವಸ್ಥೆ ಅನುಸಂಧಾನಗೊಳಿಸಲಾಗುವುದು. ಪ್ರತ್ಯೇಕ ಡಿಜಿಟಲ್‌ ಪೋರ್ಟಲ್‌ ಸಿದ್ಧವಾಗುತ್ತಿದ್ದು, ಅದನ್ನು ಇ–ಗವರ್ನೆನ್ಸ್‌ ಇಲಾಖೆ ಅಭಿವೃದ್ಧಿಪಡಿಸುತ್ತಿದೆ. ಜೂನ್‌ 25ರಿಂದ ಪ್ರಾಯೋಗಿಕವಾಗಿ ಇದನ್ನು ಬಳಸಲು ಸರಕಾರದಿಂದ ಅನುಮತಿ ದೊರೆತಿದೆ. ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳು ಇನ್ನು ಮುಂದೆ ಇ–ಆಫೀಸ್‌ ಮೂಲಕವೇ ನಡೆಯುತ್ತವೆ. ಯಾವುದೇ ಕಾಗದ ಪತ್ರಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಅವರು ಸೂಚಿಸಿದರು.

RELATED TOPICS:
English summary :Ashwath Narayan

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...