Thu,May09,2024
ಕನ್ನಡ / English

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂಸ್

17 Jun 2021
1341

ಬೆಂಗಳೂರು : ದೇಶದ ಏರೋಸ್ಪೇಸ್‌ ಹಾಗೂ ರಕ್ಷಣಾ ಉತ್ಪನ್ನಗಳ ಕ್ಷೇತ್ರದಲ್ಲಿ ಮೂಂಚೂಣಿ ಸ್ಥಾನದಲ್ಲಿರುವ ಕರ್ನಾಟಕ ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ಗಳನ್ನು ಘೋಷಿಸುವ ಮೂಲಕ ರಾಜ್ಯದ ಏರೋಸ್ಪೇಸ್‌ ಹಾಗೂ ರಕ್ಷಣಾ ಉತ್ಪಾದನಾ ಘಟಕಗಳಿಗೆ ಉತ್ತೇಜನ ನೀಡುವಂತೆ ರಕ್ಷಣಾ ಖಾತೆ ಸಚಿವರಾದ ರಾಜನಾಥ್‌ ಸಿಂಗ್‌ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇವೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್ ರೌಂಡ್ ಟೇಬಲ್ ವೆಬಿನಾರ್ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ದೇಶದಲ್ಲಿ ರಕ್ಷಣಾ ಹಾಗೂ ಏರೋಸ್ಪೇಸ್ ಗೆ ಸಂಬಂಧಿಸಿದಂತಹ ಕ್ಷೇತ್ರಗಳಿಗೆ ಹಲವಾರು ಯೋಜನೆಗಳ ಮೂಲಕ ಪ್ರೋತ್ಸಾಹ ನೀಡುತ್ತಿದೆ. ರಕ್ಷಣಾ ಉತ್ಪಾದನಾ ಕಾರಿಡಾರ್ ಯೋಜನೆಯ ಮೂಲಕ ಉತ್ತರ ಪ್ರದೇಶ ಹಾಗೂ ತಮಿಳುನಾಡುಗಳಲ್ಲಿ ಕ್ರಮವಾಗಿ 6 ಮತ್ತು 5 ನೋಡ್ ಗಳನ್ನು ಉತ್ತೇಜಿಸುವ ಕಾರ್ಯಕ್ಕೆ ಮುಂದಾಗಿದೆ.

ಹೊಸ ರಕ್ಷಣಾ ಕಾರಿಡಾರ್ ಗಳನ್ನು ನಿರ್ಮಿಸುವುದರ ಜೊತೆಯಲ್ಲೇ, ಈಗಾಗಲೇ ಅಸ್ತಿತ್ವದಲ್ಲಿರುವ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನಾ ಪರಿಸರವನ್ನು ಹೊಂದಿರುವ ಪ್ರದೇಶಗಳಿಗೂ ಉತ್ತೇಜನ ನೀಡಬೇಕು ಎಂಬುದು ನಮ್ಮ ಮನವಿಯಾಗಿದೆ.

ರಾಜ್ಯದಲ್ಲಿ ಘೋಷಣೆ ಆಗುವ ರಕ್ಷಣಾ ತಂತ್ರಜ್ಞಾನ ಹಬ್‌, ದೇಶದ ಡಿಫೆನ್ಸ್‌ ಆಫ್‌ಸೆಟ್‌ ಪಾಲಿಸಿ ಅಡಿಯಲ್ಲಿ ಡಿಫೆನ್ಸ್‌ ಕಾರಿಡಾರ್‌ನ ವರ್ಧಿತ ಗುಣಕಗಳು (enhanced multipliers) ಹಾಗೂ ರಕ್ಷಣಾ ವೇದಿಕೆ ಮತ್ತು ಉತ್ಪನ್ನಗಳ ಪರೀಕ್ಷೆ ಮತ್ತು ಪ್ರಮಾಣ ಪತ್ರ ಮತ್ತಿತರ ವಿಶೇಷ ಸೌಲಭ್ಯಗಳಿಂದ ರಾಜ್ಯದಲ್ಲಿ ಏರೋಸ್ಪೇಸ್‌ ಮತ್ತು ರಕ್ಷಣಾ ಕ್ಷೇತ್ರದ ಬೆಳವಣಿಗೆಗೆ ಮತ್ತಷ್ಟು ಪುಷ್ಟಿ ನೀಡುತ್ತದೆ.

ಅಲ್ಲದೆ, ಆತ್ಮನಿರ್ಭರ ಭಾರತ ಗುರಿಗೆ ಮತ್ತಷ್ಟು ಬಲ ತುಂಬಲಿದೆ. ಈ ಹೊಸ ಉಪಕ್ರಮಗಳಿಂದ ನಮ್ಮ ರಾಜ್ಯದ ವೈಜ್ಞಾನಿಕ ನಾಯಕತ್ವ ಹಾಗೂ ಈ ಕ್ಷೇತ್ರಕ್ಕೆ ನಮ್ಮ ರಾಜ್ಯದಿಂದ ನೀಡಿರುವ ಸಂಶೋಧನೆ ಮತ್ತು ಅಭಿವೃದ್ದಿಯ ಕೊಡುಗೆಗೆ ಸ್ವೀಕೃತಿ ನೀಡಿದಂತಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದೇವೆ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ಸತತ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.

ವೆಬಿನಾರ್‌ನಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜಕುಮಾರ್‌ ಖತ್ರಿ, ಕೈಗಾರಿಕಾ ಇಲಾಖೆಯ ತಾಂತ್ರಿಕ ನಿರ್ದೇಶಕರಾದ ರಮೇಶ್‌, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕರಾದ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಕೈಗಾರಿಕೋದ್ಯಮಿಗಳು ಪಾಲ್ಗೊಂಡಿದ್ದರು.

RELATED TOPICS:
English summary :JagadishShettar

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...