ಬೆಳಗಾವಿಯಲ್ಲಿ ಮಳೆ ಅಬ್ಬರ, ನದಿ ನೀರಲ್ಲಿ ಕೊಚ್ಚಿಹೋದ ರೈತ | ಜನತಾ ನ್ಯೂಸ್
ಬೆಳಗಾವಿ : ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ವರುಣನ ಅಬ್ಬರ ಮುಂದುವರೆದಿದ್ದು, ನದಿಗಳು ಅಪಾಯದ ಮಟ್ಟಮೀರಿ ಹರಿಯುತ್ತಿವೆ. ನದಿ ಪಾತ್ರದ ಜನರಲ್ಲಿ ಪ್ರವಾಹದ ಭೀತಿ ಆವರಿಸಿದೆ. ಜಿಲ್ಲೆಯಲ್ಲಿ ರೈತರೊಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.
ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಕಾಕತಿ ಗ್ರಾಮದ ರೈತ ಸಿದ್ರಾಯಿ ದೊಡ್ಡರಾಮ ಸುತಗಟ್ಟಿ (65) ಮಾರ್ಕಂಡೇಯ ನದಿಯ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ.
ಶುಕ್ರವಾರ ಕೃಷಿ ಕೆಲಸ ಮುಗಿಸಿ ಬರುವಾಗ ನದಿಯಲ್ಲಿ ಕೈ ಕಾಲು ತೊಳೆಯಲು ಹೋದಾಗ ಕಾಲು ಜಾರಿ ಬಿದ್ದು ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ.
ರೈತನ ಚಪ್ಪಲಿಗಳು ನದಿ ತೀರದಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಕೈ ಕಾಲು ತೊಳೆದುಕೊಳ್ಳಲು ಹೋದಾಗ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕಾಕತಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.