Sun,May19,2024
ಕನ್ನಡ / English

ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂಸ್

20 Jun 2021
1307

ಬೆಂಗಳೂರು : ಮೇಕೆದಾಟು ಡ್ಯಾಂಗೆ ಅನುಮತಿ ನೀಡಬಾರದೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿರುವ ತಮಿಳುನಾಡು ಮಾಜಿ ಸಿಎಂ ಪಳನಿಸ್ವಾಮಿ ಯೋಜನೆ ತಡೆಯಲು ಪ್ರಧಾನಿ ಮೇಲೆ ಒತ್ತಡ ಹೇರುತ್ತಾ ಬಂದಿರುವುದಾಗಿ ಹೇಳಿದ್ದಾರೆ. ಕೇಂದ್ರವು ತಮಿಳುನಾಡಿನ ಒತ್ತಡಕ್ಕೆ ಮಣಿದು ಅನುಮತಿ ಮುಂದೂಡತ್ತಾ ಬಂದಿದ್ದೇ ಆದರೆ ಅದು ಕನ್ನಡಿಗರಿಗೆ ಬಗೆದ ದ್ರೋಹ, ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ತಂದು ನನ್ನ ಸರ್ಕಾರ ಧೈರ್ಯ ಪ್ರದರ್ಶಿಸಿತ್ತು. ಪರಿಸರ ಅನುಮತಿ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈ ವರೆಗೆ ಅನುಮತಿ ಸಿಕ್ಕಿಲ್ಲ. ಇತ್ತ, ಯೋಜನೆ ವಿರುದ್ಧ ಅರ್ಜಿಗಳು ಸಲ್ಲಿಕೆಯಾಗುತ್ತಾ ಬಂದವು. ಇದೆಲ್ಲ ಗಮನಿಸಿದರೆ ಯೋಜನೆ ತಡೆಯಲು ತಮಿಳುನಾಡು–ಕೇಂದ್ರ ಷಡ್ಯಂತ್ರ ಹೆಣೆದ ಅನುಮಾನ ಮೂಡುತ್ತಿದೆ, ಎಂದು ಹೇಳಿದ್ದಾರೆ.

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಒತ್ತಡ ಹೇರಿತ್ತೇ? ಅದರ ಮಾತು ಕೇಳಿ ಅನುಮತಿ ವಿಳಂಬ ಮಾಡಲಾಯಿತೇ? ಈ ಬಗ್ಗೆ ಪ್ರಧಾನಿ ಸ್ಪಷ್ಟನೆ ನೀಡಬೇಕು. ಇಲ್ಲವೇ ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ "ಭಾಷಾ ದುರಭಿಮಾನಿ ಬಿಜೆಪಿ ಸಂಸದರು" ಪ್ರಶ್ನೆ ಮಾಡಿ ಉತ್ತರ ಪಡೆದುಕೊಂಡು ಬರಬೇಕು. ಇಲ್ಲವೇ ಬಾಕಿ ಇರುವ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು, ಎಂದು ಜೆಡಿಎಸ್ ಹಿರಿಯ ನಾಯಕ ಎಚ್‌ಡಿಕೆ ಅವರು ರಾಜ್ಯ ಬಿಜೆಪಿ ಸಂಸದರನ್ನು ಒತ್ತಾಯಿಸಿ ಸಾಮಾಜಿಕ ಮದ್ಯಮಗಳಲ್ಲಿ ಹೇಳಿದ್ದಾರೆ.

RELATED TOPICS:
English summary :Mekedatu project : BJP MP should get answer from PM - HDK

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...