Sat,May04,2024
ಕನ್ನಡ / English

ರೋಹಿಣಿ ಸಿಂಧೂರಿಗೆ ಸಂಕಷ್ಟ: ಡಿಸಿ ಅಧಿಕೃತ ನಿವಾಸ ನವೀಕರಣ ಪ್ರಕರಣದ ತನಿಖೆಗೆ ಆದೇಶ | ಜನತಾ ನ್ಯೂಸ್

21 Jun 2021
2099

ಮೈಸೂರು : ವರ್ಗಾವಣೆಯಾದರೂ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ತಪ್ಪುತ್ತಿಲ್ಲ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ ಡಿಸಿ ಅಧಿಕೃತ ನಿವಾಸದಲ್ಲಿ ನವೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ನಡೆಸಿ ವರದಿ ನೀಡಲು ಕಂದಾಯ ಇಲಾಖೆಯು ಪ್ರಾದೇಶಿಕ ಆಯುಕ್ತರಿಗೆ ನಿರ್ದೇಶನ ನೀಡಿದೆ.

ಪ್ರಾದೇಶಿಕ ಆಯುಕ್ತರಿಗೆ 7 ದಿನಗಳ ಒಳಗಾಗಿ ವರದಿ ನೀಡುವಂತೆ ಆದೇಶ‌ ನೀಡಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಅಧಿಕೃತ ನಿವಾಸ, ಜಲಸನ್ನಿಧಿ ಪಾರಂಪರಿಕ ಕಟ್ಟಡವನ್ನು ಅನಧಿಕೃತವಾಗಿ ನವೀಕರಿಸಿರೋ ಆರೋಪ ರೋಹಿಣಿ ಸಿಂಧೂರಿ ಮೇಲೆ ಇದೆ.

ಶಾಸಕ ಸಾ.ರಾ. ಮಹೇಶ್ ದೂರು ಆಧರಿಸಿ ತನಿಖೆಗೆ ಆದೇಶ ನೀಡಲಾಗಿದೆ. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಂದ ಪ್ರಾದೇಶಿಕ ಆಯುಕ್ತರಿಗೆ ನಿರ್ದೇಶನ ಬಂದಿದೆ. ಮೈಸೂರು ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ಅವಧಿಯಲ್ಲಿ ನೆಲಹಾಸು ನವೀಕರಣ ನಡೆದಿತ್ತು. ಪಾರಂಪರಿಕ ಕಟ್ಟಡ ಸಂರಕ್ಷಣಾ ಸಮಿತಿಯಿಂದ ಅನುಮತಿ ಪಡೆಯದೇ ನೆಲಹಾಸು ನವೀಕರಣಕ್ಕೆ 16.50 ಲಕ್ಷ ಖರ್ಚು ಮಾಡಿರುವ ಆರೋಪ ಇದೆ.

ಮೈಸೂರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸ ಜಲಸನ್ನಿಧಿಯು ಪಾರಂಪರಿಕ ಕಟ್ಟಡವಾಗಿದೆ. ಈ ಕಟ್ಟಡದಲ್ಲಿ ನವೀಕರಣ ಮಾಡಬೇಕಾದರೆ ಪಾರಂಪರಿಕ ಕಟ್ಟಡ ಸಂರಕ್ಷಣಾ ಸಮಿತಿಯಿಂದ ಅನುಮತಿ ಪಡೆಯಬೇಕಾಗುತ್ತದೆ. ಆದರೆ ರೋಹಿಣಿ ಸಿಂಧೂರಿ ಅವರು ಯಾವುದೇ ಪೂರ್ವಾನುಮತಿ ಪಡೆಯದೆ ನವೀಕರಣ ಮಾಡಿಸಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಸಾ.ರಾ.ಮಹೇಶ್ ಆರೋಪಿಸಿದ್ದರು

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಾಮರಾಜನಗರ ಜಿಲ್ಲಾ ರೈತ ಮುಖಂಡ ಮಲ್ಲೇಶ್ ಎಂಬವರು ನ್ಯಾ. ಬಿ.ಎ. ಪಾಟೀಲ್​ ಸಮಿತಿಗೆ ದೂರು ನೀಡಿದ್ದಾರೆ. ಆಕ್ಸಿಜನ್ ದುರಂತದ ಬಗ್ಗೆ ತನಿಖೆಗಾಗಿ ನೇಮಿಸಿರುವ ಸಮಿತಿಗೆ ದೂರು ಸಲ್ಲಿಸಿದ್ದಾರೆ.

ಹೈಕೋರ್ಟ್​ಗೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದ ಆಯೋಗ, ವರದಿಯಲ್ಲಿ ರೋಹಿಣಿ ಸಿಂಧೂರಿ ತಪ್ಪಿಲ್ಲವೆಂದು ಉಲ್ಲೇಖಿಸಿತ್ತು. ಆದರೆ, ಸಮಿತಿ ಚಾಮರಾಜನಗರಕ್ಕೆ ಬಂದು ತನಿಖೆ ನಡೆಸಿಲ್ಲ. ಪ್ರತಿವಾದಿಗಳ ಹೇಳಿಕೆ ದಾಖಲಿಸಿಕೊಂಡಿಲ್ಲ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ.

ಸರ್ಕಾರ ನೇಮಿಸಿರುವ ನ್ಯಾ.ಬಿ.ಎ. ಪಾಟೀಲ್​ ನೇತೃತ್ವದ ಸಮಿತಿ ಹಾಗೂ ಶಿವಯೋಗಿ ಕಳಸದ್​ ಸಮಿತಿ ಕೂಡ ತನಿಖೆ ಪೂರ್ಣಗೊಳಿಸಿಲ್ಲ. ಘಟನೆಯಲ್ಲಿ ಆಮ್ಲಜನಕ​ ಖಾಲಿಯಾಗಿ 24 ರೋಗಿಗಳು ಮೃತಪಟ್ಟಿದ್ದರು. ಆದರೆ, 24 ರೋಗಿಗಳು ಸತ್ತಿಲ್ಲ, ಅದು ರೋಹಿಣಿ ಸಿಂಧೂರಿ ಮಾಡಿದ ಕೊಲೆ. ರೋಹಿಣಿ ಸಿಂಧೂರಿ ವಿರುದ್ಧ ಐಪಿಸಿ ಸೆಕ್ಷನ್​ 302ರಡಿ ಕೇಸ್ ಹಾಕಬೇಕು. ರೋಹಿಣಿ ಸಿಂಧೂರಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ದೂರುದಾರ ಹೇಳಿದ್ದಾರೆ.

ರೋಹಿಣಿ ಸಿಂಧೂರಿ ಸ್ವಂತ ಆಸ್ತಿ ಮುಟ್ಟುಗೋಲು ಹಾಕಬೇಕು. ಆಸ್ತಿ ಮಾರಿ ಮೃತರ ಕುಟುಂಬಗಳಿಗೆ ಪರಿಹಾರ ಕೊಡಬೇಕು ಎಂದು ಮೈಸೂರಿನಲ್ಲಿ ದೂರು ನೀಡಿದ ನಂತರ ಮಲ್ಲೇಶ್​ ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :Rohini Sindhuri

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...