Fri,May17,2024
ಕನ್ನಡ / English

ಸರ್ಕಾರದ ಅಕ್ರಮಗಳನ್ನು ಚರ್ಚೆ ಮಾಡಲು ಬಿಎಸ್‌ವೈಗೆ ಭಯವಿಲ್ಲದಿದ್ದರೆ ಅಧಿವೇಶನ ಕರೆಯಬೇಕು: ಎಚ್‌ಡಿಕೆ | ಜನತಾ ನ್ಯೂಸ್

22 Jun 2021
1947

ಬೆಂಗಳೂರು : ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರನ್ನು ಒತ್ತಾಯಿಸಿದ್ದಾರೆ.

ನೀರಾವರಿ ಇಲಾಖೆಯ 20,000 ಕೋಟಿ ಯೋಜನೆಯಲ್ಲಿ ಶೇ.10 ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ 5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ.

"2 ಸಾವಿರ ಕೋಟಿ ಕಿಕ್‌ ಬ್ಯಾಕ್‌ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಈಗಾಗಲೇ ನಾನು ಆಗ್ರಹಿಸಿದ್ದೇನೆ. ಅದರಲ್ಲಿನ ಯಡಿಯೂರಪ್ಪ ಕುಟುಂಬದ ಪಾತ್ರದ ಬಗ್ಗೆ ತನಿಖೆಯಾಗಲಿ ಎಂದು ಹೇಳಿದ್ದೇನೆ. ಅದರ ಜೊತೆಗೆ ಅಬಕಾರಿ ಇಲಾಖೆಯಲ್ಲಿನ ಈ ಪ್ರಕರಣದ ಬಗ್ಗೆಯೂ ತನಿಖೆಯಾಗಬೇಕು. ಸರ್ಕಾರ ಈ ಪ್ರಕರಣವನ್ನು ಕೂಡಲೇ ಸೂಕ್ತ ತನಿಖಾ ಸಂಸ್ಥೆಗೆ ವಹಿಸಬೇಕು" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

"ಕೋವಿಡ್‌ ಮತ್ತು ಬ್ಲಾಕ್‌ ಫಂಗಸ್‌ ಸ್ಥಿತಿಗತಿಗಳು, ಕೈಗೊಂಡ ಕ್ರಮಗಳು, ಕೊಟ್ಟ ಪರಿಹಾರ, ಅಕ್ರಮ ಆರೋಪಗಳ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕೆಂದು ನಾನು ಆಗ್ರಹಿಸಿದ್ದೇನೆ. ಅದರ ಬಗ್ಗೆ ಸಿಎಂ ಈ ವರೆಗೆ ಮಾತನಾಡಿಲ್ಲ. ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು" ಎಂದು ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

RELATED TOPICS:
English summary :Bangalore

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...