Tue,May07,2024
ಕನ್ನಡ / English

ಮಲ್ಯ, ಚೋಕ್ಸಿ, ನೀರವ್ ಮೋದಿಗಳಿಂದ ವಶಪಡಿಸಿಕೊಂಡ ಆಸ್ತಿಯ 9,371.17 ಕೋಟಿ ಬ್ಯಾಂಕ್ ಗಳಿಗೆ ವರ್ಗಾಯಿಸಿದ ಇಡಿ | ಜನತಾ ನ್ಯೂಸ್

23 Jun 2021
1617

ನವದೆಹಲಿ : ದೇಶದಿಂದ ಪಲಾಯನ ಮಾಡಿದ್ದ ಕೋಟ್ಯಾಧಿಪತಿ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಲಗತ್ತಿಸಲಾದ ಅಥವಾ ವಶಪಡಿಸಿಕೊಂಡ ಆಸ್ತಿಯ ಒಂದು ಭಾಗವನ್ನು ಸರ್ಕಾರಿ ಬ್ಯಾಂಕುಗಳು ಮತ್ತು ಕೇಂದ್ರಕ್ಕೆ ವರ್ಗಾಯಿಸಲಾಗಿದೆ, ಎಂದು ಜಾರಿ ನಿರ್ದೇಶನಾಲಯ(ಇಡಿ) ಇಂದು ಜೂನ್ 23 ರಂದು ತಿಳಿಸಿದೆ.

ಭಾರತದ ಬ್ಯಾಂಕ್​ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿಗೆ ಸಂಬಂಧಿಸಿದ ವಶಪಡಿಸಿಕೊಂಡ / ಲಗತ್ತಿಸಲಾದ 18,170.02 ಕೋಟಿ ಮೌಲ್ಯದ ಆಸ್ತಿಯಲ್ಲಿ 9,371.17 ಕೋಟಿ ರೂಪಾಯಿಗಳನ್ನು ಸರ್ಕಾರಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ(ಪಿಎಸ್‌ಬಿ) ವರ್ಗಾಯಿಸಲಾಗಿದೆ, ಎಂದು ಇಡಿ ಹೇಳಿದೆ.

ಮೂವರು ಉದ್ಯಮಿ ಮಾಡಿರುವ ವಂಚನೆಯಿಂದಾಗಿ ಬ್ಯಾಂಕ್​ಗಳಿಗೆ 22,586 ಕೋಟಿ ರೂಪಾಯಿ ನಷ್ಟವಾಗಿದೆ, ಎಂದು ಜಾರಿ ನಿರ್ದೇಶನಾಲಯ ನೀಡಿರುವ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಪಿಎಂಎಲ್ ಕಾಯ್ದೆ ಅಡಿ ಮುಂಬೈನ ವಿಶೇಷ ನ್ಯಾಯಾಲಯದ ಆದೇಶದ ಪ್ರಕಾರ ಜಾರಿ ನಿರ್ದೇಶನಾಲಯವು ಅದಕ್ಕೆ ಲಗತ್ತಿಸಲಾದ ಷೇರುಗಳನ್ನು(6,600 ಕೋಟಿ ರೂ.) ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟಕ್ಕೆ ವರ್ಗಾಯಿಸಿದೆ.

ಕೇಂದ್ರ ತನಿಖಾ ತಂಡದ(ಸಿಬಿಐ) ಅಧಿಕಾರಿಗಳು ದಾಖಲಿಸಿಕೊಂಡಿರುವ ಎಫ್ಐಆರ್ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ವೇಳೆ ದೇಶೀಯ ಹಾಗೂ ಅಂತಾರಾಷ್ಟ್ರೀಯ ವಹಿವಾಟಿನ ಜೊತೆಗೆ ವಿದೇಶಗಳಲ್ಲಿ ಆಸ್ತಿ ಸಂಗ್ರಹಿಸಿರುವ ಬಗ್ಗೆ ಮಾಹಿತಿ ಕಲೆ ಹಾಕಿದೆ. ಅಲ್ಲದೇ, ವಿಜಯ್ ಮಲ್ಯ, ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿ ತಮ್ಮ ನಿಯಂತ್ರಣದಲ್ಲಿ ಇರುವ ನಕಲಿ ಕಂಪನಿಗಳನ್ನು ತೋರಿಸಿ ಸಾರ್ವಜನಿಕ ಬ್ಯಾಂಕ್​ಗಳಿಂದ ಸಾಲ ಪಡೆದಿರುವುದು ತನಿಖೆ ವೇಳೆ ಬಯಲಾಗಿದೆ.

ಭಾರತೀಯ ಬ್ಯಾಂಕ್​ಗಳಿಗೆ ನಕಲಿ ಕಂಪನಿಗಳ ದಾಖಲೆಯನ್ನು ತೋರಿಸಿ ಉದ್ಯಮಿ ವಿಜಯ್ ಮಲ್ಯ, ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿ 22585.83 ಕೋಟಿ ರೂಪಾಯಿ ವಂಚಿಸಿದ್ದಾರೆ. ಈ ಪೈಕಿ ಇದುವರೆಗೂ ಶೇ.80.45ರಷ್ಟು ಅಂದರೆ 18,170.02 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮತ್ತು ಷೇರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

RELATED TOPICS:
English summary :ED transfers 9,317.17Cr of assets seized in Mallya, Choksi, Nirav Modi cases to banks

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...