ಅಧಿಕಾರವಿಲ್ಲದೆ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ತಿಕ್ಕಾಟ ನಡೆದಿರುವುದು ಹಾಸ್ಯಾಸ್ಪದ: ಪ್ರಹ್ಲಾದ್ ಜೋಶಿ | ಜನತಾ ನ್ಯೂಸ್
ಹುಬ್ಬಳ್ಳಿ : ಕೇರಳದ ಕಾಸರಗೋಡು ಜಿಲ್ಲೆಯ ಊರುಗಳ ಕನ್ನಡ ಹೆಸರಿನ ಬದಲಾವಣೆ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೆ ತರಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಕನ್ನಡದ ಹೆಸರುಗಳ ಬದಲಾವಣೆ ಕುರಿತು ಕೇಂದ್ರ ಗೃಹ ಸಚಿವರ ಗಮನಕ್ಕೆ ತಂದರೆ, ಅವರು ಕೇರಳ ರಾಜ್ಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಲಿದ್ದಾರೆ. ಕನ್ನಡದ ಹೆಸರುಗಳನ್ನು ಬದಲಾವಣೆಗೆ ಮುಂದಾಗಿರುವ ಕೇರಳ ಸರಕಾರದ ಕ್ರಮ ಸರಿಯಲ್ಲ ಎಂದು ಆಕ್ಷೇಪಿಸಿದರು.
ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರ ಅಸ್ತಿತ್ವದಲ್ಲಿದೆ. ಹೀಗಾಗಿ ಅಧಿಕಾರಕ್ಕಾಗಿ ಮುಖಂಡರ ಮಧ್ಯೆ ಪೈಪೋಟಿ ಸಹಜ. ಆದರೆ, ಅಧಿಕಾರವಿಲ್ಲದೆ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ತಿಕ್ಕಾಟ ನಡೆದಿರುವುದು ಹಾಸ್ಯಾಸ್ಪದ ಎಂದು ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.