ಅಪ್ಪ-ಅಮ್ಮ ಇಲ್ಲದ ಕಾಂಗ್ರೆಸ್ ಪಕ್ಷದಲ್ಲಿ ಜಾತಿಗೊಬ್ಬ ಮುಖ್ಯಮಂತ್ರಿ, ಅವರಿಗೆ ಸಿಎಂ ಸ್ಥಾನ ಕನಸೇ ಸರಿ; ಕೆಎಸ್ ಈಶ್ವರಪ್ಪ | ಜನತಾ ನ್ಯೂಸ್
ಬೆಂಗಳೂರು : ಕಾಂಗ್ರೆಸ್ ಅಪ್ಪ-ಅಮ್ಮ ಇಲ್ಲದ ಪಕ್ಷ. ರಾಜ್ಯ ಕಾಂಗ್ರೆಸ್‌ನಲ್ಲಿ ಈಗಾಗಲೇ ಜಾತಿಗೊಬ್ಬರಂತೆ ಐದು ಮಂದಿ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಈ ಜನ್ಮದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ರಾಜ್ಯದಲ್ಲಿ ಮುಂದೆಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಬೆಂಬಲಿಗ ಶಾಸಕರ ಬಾಯಿ ಮುಚ್ಚಿಸಲು ಸಿದ್ದರಾಮಯ್ಯ ಮುಂದಾಗಿಲ್ಲ. ಡಿ.ಕೆ. ಶಿವಕುಮಾರ್ ಕೂಡಾ ಯಾರ ಬಾಯಿಯನ್ನೂ ಮುಚ್ಚಿಸಿಲ್ಲ. ಎಂ.ಬಿ. ಪಾಟೀಲ ನಾನು ಸನ್ಯಾಸಿ ಅಲ್ಲ ಅಂತಿದ್ದಾರೆ. ದಲಿತ ಮುಖ್ಯಮಂತ್ರಿ ಎಂದು ಜಿ. ಪರಮೇಶ್ವರ, ನಾನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದು ತನ್ವೀರ್ ಸೇಠ್ ಹೇಳುತ್ತಿದ್ದಾರೆ. ಭಾವಿ ಮುಖ್ಯಮಂತ್ರಿ ವಿಷಯದಲ್ಲಿ ಕಾಂಗ್ರೆಸ್‌ನಲ್ಲಿ ಬಡಿದಾಟ ನಡೆಯುತ್ತಿದೆ ಎಂದರು.
ಇಂದು ಕಾಂಗ್ರೆಸ್ ಎಲ್ಲಿದೆ ಎಂದು ಹುಡುಕುವಂತಾಗಿದೆ. ರಾಜಸ್ಥಾನ, ಪಂಜಾಬ್‌ನಲ್ಲಿ ಸರಕಾರವಿರುವುದು ಬಿಟ್ಟರೆ ಕರ್ನಾಟಕದಲ್ಲಿ ಗೆದ್ದಿದ್ದ 70ಕ್ಕೂ ಹೆಚ್ಚು ಮಂದಿಯಲ್ಲಿ ಒಂದಿಷ್ಟು ಜನ ಬಿಟ್ಟು ಹೋಗಿದ್ದಾರೆ. ಕಾಂಗ್ರೆಸ್ ಜೀವವೇ ಹೋಗುತ್ತಿರುವ ಪರಿಸ್ಥಿತಿಯಲ್ಲಿ ಮುಂದಿನ ಸಿಎಂ ನಾನು ಎಂಬಂತೆ ಬಡಿದಾಡುಕೊಳ್ಳುತ್ತಿದ್ದಾರೆ. ಸಾಯುತ್ತಿರುವ ಕಾಂಗ್ರೆಸ್ ಉಳಿಸಲು ಯಾರಿಂದಲೂ ಸಾಧ್ಯವಿಲ್ಲ. ಇನ್ನು ಸಿಎಂ ಸ್ಥಾನ ಕನಸೇ ಸರಿ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಜೀವವೇ ಹೋಗುತ್ತಿರುವ ಪರಿಸ್ಥಿತಿಯಲ್ಲಿ ಮುಂದಿನ ಸಿಎಂ ನಾನು ಎಂಬಂತೆ ಬಡಿದಾಡುಕೊಳ್ಳುತ್ತಿದ್ದಾರೆ. ಸಾಯುತ್ತಿರುವ ಕಾಂಗ್ರೆಸ್ ಉಳಿಸಲು ಯಾರಿಂದಲೂ ಸಾಧ್ಯವಿಲ್ಲ. ಇನ್ನು ಸಿಎಂ ಸ್ಥಾನ ಕನಸೇ ಸರಿ ಎಂದು ಟೀಕಿಸಿದ್ದಾರೆ.