Sun,May12,2024
ಕನ್ನಡ / English

ಇಂದಿನಿಂದ ಮೆಟ್ರೋದಲ್ಲಿ ಶೇ.100ರಷ್ಟು ಪ್ರಯಾಣಿಕರಿಗೆ ಅವಕಾಶ | ಜನತಾ ನ್ಯೂಸ್

05 Jul 2021
1627

ಬೆಂಗಳೂರು : ನಗರದಲ್ಲಿ ಇಂದಿನಿಂದ ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕ ಸಾರಿಗೆ ಸೇವೆ ಆರಂಭವಾಗಿದೆ‌. ಬಸ್ ಹಾಗೂ ಮೆಟ್ರೊ ರೈಲಿನಲ್ಲಿ ಎಲ್ಲ ಆಸನಗಳ ಭರ್ತಿಗೆ ಅವಕಾಶವಿದ್ದು, ಎಲ್ಲ ದಿನಗಳಲ್ಲಿಯೂ ಕಾರ್ಯಾಚರಣೆ ನಡೆಸಲಿವೆ.

ಮೆಟ್ರೊ ರೈಲು ಬೆಳಿಗ್ಗೆ 7ರಿಂದ ರಾತ್ರಿ 8ರವರೆಗೆ, ಬಿಎಂಟಿಸಿ ಬಸ್ ಗಳು ಬೆಳಿಗ್ಗೆ 5ರಿಂದ ರಾತ್ರಿ 9ರವರೆಗೆ ಸೇವೆಗೆ ಲಭ್ಯವಾಗಲಿವೆ. ಹಸಿರು, ನೇರಳೆ ಎರಡೂ ಮಾರ್ಗದಲ್ಲಿ ರಾತ್ರಿ 8ರವರೆಗೆ ಸೇವೆ ಒದಗಿಸುವುದಾಗಿ ಬಿಎಂಆರ್​ಸಿಎಲ್​ (BMRCL) ಮಾಹಿತಿ ನೀಡಿದೆ.

ಜುಲೈ 1 ರಿಂದ ನಮ್ಮ ಮೆಟ್ರೋ ಸೋಮವಾರದಿಂದ ಶುಕ್ರವಾರದವರೆಗೆ ಸಂಚಾರ ಮಾಡಲಿದೆ ಎಂದು ಬಿಎಂಆರ್​ಸಿಎಲ್​ ಕಳೆದ ವಾರ ತಿಳಿಸಿತ್ತು. ಆದರೆ, ಈಗ ಅನ್​ಲಾಕ್​ ಹಿನ್ನೆಲೆ ವಾರಾಂತ್ಯದಲ್ಲೂ ಅವಕಾಶ ಕಲ್ಪಿಸಲಾಗಿದ್ದು, ಶನಿವಾರ, ಭಾನುವಾರ ಸಹ ಇತರೆ ದಿನಗಳಂತೆಯೇ ಬೆಳಗ್ಗೆ 7ರಿಂದ ರಾತ್ರಿ 8 ಗಂಟೆವರೆಗೆ ಪ್ರಯಾಣಿಕರು ಮೆಟ್ರೋ ಅನುಕೂಲ ಪಡೆಯಬಹುದಾಗಿದೆ. ಜತೆಗೆ, ಜನದಟ್ಟಣೆ ಅವಧಿಯಲ್ಲಿ 5 ನಿಮಿಷಕ್ಕೊಂದು ರೈಲು ಸಂಚಾರ ಮಾಡಲಿದೆ ಎಂದು ಬಿಎಂಆರ್​ಸಿಎಲ್ ಹೇಳಿದೆ.

ಬೆಳಗ್ಗೆ 7 ರಿಂದ ರಾತ್ರಿ 8ರವರೆಗೆ ಮೆಟ್ರೋ ಸಂಚರಿಸಲಿದೆ
ಜನ ದಟ್ಟಣೆ ಅವಧಿಯಲ್ಲಿ 5 ನಿಮಿಷಕ್ಕೊಂದು ರೈಲು, ಉಳಿದ ಸಮಯದಲ್ಲಿ 15 ನಿಮಿಷಕ್ಕೊಂದು ರೈಲು
ವಾರಪೂರ್ತಿ ನಮ್ಮ ಮೆಟ್ರೋ ಸಂಚಾರ
ಕಾರ್ಡ್​ ಇಲ್ಲದವರು ಟೋಕನ್​ ಪಡೆದು ಪಯಣಿಸಬಹುದು
ಮಾಸ್ಕ್​ ಧರಿಸುವುದು ಕಡ್ಡಾಯ
ಶೇ.100ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದ್ದರೂ ಕೊರೊನಾ ನಿಯಮಾವಳಿ ಪಾಲಿಸುವುದು ಕಡ್ಡಾಯ

RELATED TOPICS:
English summary :Bangalore

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...