Sat,May04,2024
ಕನ್ನಡ / English

ಸುಮಲತಾ ವಿರುದ್ಧ ನಾನು ತಪ್ಪು ಪದ ಬಳಕೆ ಮಾಡಿಲ್ಲ, ನಾನೇಕೆ ಕ್ಷಮೆ ಕೇಳಬೇಕು: ಕುಮಾರಸ್ವಾಮಿ | ಜನತಾ ನ್ಯೂಸ್

07 Jul 2021
2278

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಂಸದೆ ಸಮಲತಾ ಅವರ ಮಧ್ಯೆ ಕೆ.ಆರ್.ಎಸ್ ಜಲಾಶಯದ ವಿಚಾರದಲ್ಲಿ ವಾಕ್ಸಮರ ಮುಂದುವರಿದಿದೆ.

ಸುಮಲತಾ ಅವರು ಸಂಸದರಾದ ಮೇಲೆ ಅಲ್ಲಿ ಗಣಿಗಾರಿಕೆ ನಡೆಯುತ್ತಿದೆಯೇ, 50-60 ವರ್ಷಗಳಿಂದ ಗಣಿಗಾರಿಕೆ ಆಗುತ್ತಿದೆ. "ಗಣಿಗಾರಿಕೆಯಿಂದ ಕೆಆರ್ ಎಸ್ ಅಣೆಕಟ್ಟು ಬಿರುಕು ಬಿಟ್ಟಿದೆ" ಎಂದು ಹೇಳಿದ್ದ ಸಂಸದೆ ಸುಮಲತಾ ಇದೀಗ ಬಿರುಕು ತೋರಿಸುವುದನ್ನು ಬಿಟ್ಟು ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಹೋಗಿದ್ದಾರೆ. ಅವರು ಅಲ್ಲಿಗೆ ಹೋಗಿದ್ದೇಕೆ? ಮಾಲಕರನ್ನು ಬೆದರಿಸಿ ಹಣ ವಸೂಲಿ ಮಾಡಲು ಹೋಗಿರಬಹುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ರಾಜ್ಯದಲ್ಲಿ ದೀರ್ಘಕಾಲದಿಂದ ಗಣಿಗಾರಿಕೆ ನಡೆಯುತ್ತಿದೆ. ಎಲ್ಲ ಗಣಿಗಾರಿಕೆಗಳ ಬಗ್ಗೆಯೂ ಸಿಬಿಐ ಅಥವಾ ಸಿಐಡಿಯಿಂದ ತನಿಖೆ ಮಾಡಿಸಲಿ. ತಪ್ಪು ಮಾಡಿದವರ ವಿರುದ್ಧ ಕ್ರಮ ಜರುಗಿಸಲಿ. ಅದಕ್ಕೆ ನಮ್ಮದೇನು ತಕರಾರಿಲ್ಲ ಎಂದರು.

ಸುಮಲತಾ ವಿರುದ್ಧ ನಾನು ಯಾವುದೇ ಕೆಟ್ಟ ಪದ ಬಳಸಿಲ್ಲ. ಹೀಗಿರುವಾಗ ನಾನೇಕೆ ಕ್ಷಮೆ ಕೇಳಬೇಕು. ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಅದನ್ನು ನಾನು ಬೇರೆಯವರಿಂದ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದರು.

ಅವರಲ್ಲಿ ಕ್ಷಮೆ ಕೇಳುವಂತಹ ಪದವನ್ನು ನಾನು ಬಳಕೆ ಮಾಡಿಲ್ಲ. ಸುಮಲತಾ ಅವರು ಯಾವ ಸಂಸ್ಕೃತಿಯಲ್ಲಿ ಬೆಳೆದಿದ್ದಾರೆ, ಅವರೇನು ಮಾಡುತ್ತಿದ್ದಾರೆ ಎಂದು ನನಗೆ ಗೊತ್ತಿದೆ ಎಂದು ಕುಮಾರಸ್ವಾಮಿ ಹರಿಹಾಯ್ದರು.

ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನೋಡಿ ಕಲಿಯಬೇಕು ಎಂಬ ಹೇಳಿಕೆ ನೀಡುವ ಮೂಲಕ ಸುಮಲತಾ ಅವರು ನಮ್ಮ ಕುಟುಂಬ ಒಡೆಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಕುಟುಂಬ ಒಡೆಯಲು, ನನ್ನ ರಾಜಕೀಯ ಭವಿಷ್ಯ ಮುಗಿಸಲು ಬಹಳ ಜನ ಪ್ರಯತ್ನಿಸಿ, ಸೋತಿದ್ದಾರೆ ಎಂದ ಕುಮಾರಸ್ವಾಮಿ, ನಡವಳಿಕೆಯ ಬಗ್ಗೆಯೂ ನನಗೆ ಗೊತ್ತಿದೆ. ಆ ಹೆಣ್ಣು ಮಗಳ ನಡವಳಿಕೆ ಬಗ್ಗೆ ಎಲ್ಲ ಗೊತ್ತಿದೆ ಎಂದು ಹೇಳಿದರು.

RELATED TOPICS:
English summary :HD Kumaraswamy

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...