Mon,May06,2024
ಕನ್ನಡ / English

ಪದೇ ಪದೇ ನನ್ನ ತಂದೆಯ ಸಾವಿನ ವಿಚಾರ ತರಬೇಡಿ: ಅಭಿಷೇಕ್ ಅಂಬರೀಶ್ | ಜನತಾ ನ್ಯೂಸ್

09 Jul 2021
3003

ಬೆಂಗಳೂರು : ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರ ರಾಜಕೀಯ ಬೆಳವಣಿಗೆ ಸಹಿಸದೆ ಈ ರೀತಿಯಲ್ಲಿ ಟಾರ್ಗೆಟ್ ಮಾಡುತ್ತಿರಬಹುದು ಎಂದು ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಅವರು ಆರೋಪ ಮಾಡಿದ್ದಾರೆ.

ಅಂಬರೀಶ್ ಮೃತದೇಹವನ್ನು ಮಂಡ್ಯಕ್ಕೆ ಕೊಂಡೊಯ್ಯಲು ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದೀರು ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ತಲೆಗೆ ಗನ್ ಇಟ್ಟು ಬಾಡಿ ತೆಗೆದುಕೊಂಡು ಹೋಗಿದ್ದಾರಾ? ನಾವು ಒಪ್ಪಿಗೆ ನೀಡಿದ್ದಕ್ಕೆ ತಾನೆ ಮಂಡ್ಯಕ್ಕೆ ಕೊಂಡೊಯ್ದಿದ್ದು… ಸಾವಿನ ವಿಚಾರದಲ್ಲಿ ಪದೇಪದೆ ರಾಜಕೀಯ ನನಗೆ ಇಷ್ಟವಿಲ್ಲ ಎಂದು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಅವರ ಮನಸ್ಸಿನಲ್ಲಿ ಏನಿದೆ ಎಂದು ಗೊತ್ತಿಲ್ಲ. ಅವರೇ ಫೋನ್ ಟ್ಯಾಪ್​ ಮಾಡುವವರು ಎಂದು ಅಭಿಷೇಕ್ ಆರೋಪಿಸಿದ್ದಾರೆ. ಸಂಸದೆಯಾಗಿ ನನ್ನ ತಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮಗನಾಗಿ ಅವರ ಬೆನ್ನಿಗೆ ನಾನು ನಿಲ್ಲುತ್ತೇನೆ. ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಇಲ್ಲಿಗೆ ನಿಲ್ಲಿಸುವುದಿಲ್ಲ. ಮಂಡ್ಯ ಕ್ಷೇತ್ರದ ಜನತೆ ನಮ್ಮ ತಾಯಿಯ ಬೆನ್ನಿಗೆ ನಿಂತಿದ್ದಾರೆ ಎಂದರು.

ಒಬ್ಬ ಮಗನಾಗಿ ತಂದೆಯ ಸಾವಿನ ವಿಚಾರವನ್ನು ರಾಜಕೀಯ ಮಾಡುತ್ತಿರುವುದನ್ನು ನೋಡಿ ನನಗೆ ನೋವಾಗುತ್ತಿದೆ. ತಂದೆ ಮೃತಪಟ್ಟಾಗ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ಅವರು ಏನು ಹೇಳಿದ್ದರು ಎಂಬುದು ದಾಖಲೆ ಇದೆ. ಪದೇ ಪದೇ ನನ್ನ ತಂದೆಯ ಸಾವಿನ ವಿಚಾರ ತರಬೇಡಿ ಎಂದು ಹೆಚ್‍ಡಿಕೆಗೆ ಅಭಿಷೇಕ್ ಟಾಂಗ್ ನೀಡಿದ್ದಾರೆ.

ತಂದೆಯ ಸಾವಿನ ವಿಚಾರವಾಗಿ ಮತ್ತೆ ಮತ್ತೆ ಮಾತಾಡೋದು ಸರಿ ಹೋಗಲ್ಲ. ಅಕ್ರಮ ಗಣಿಗಾರಿಕೆ ಧ್ವನಿ ಎತ್ತಿದ್ದು ತಪ್ಪಾ? ನವೆಂಬರ್ 24, 2018 ಏನು ಮಾತಾಡಿದ್ರು ನೀವೇ ನೋಡಿ. ನಿಮ್ಮ ಮನೆಯಲ್ಲಿ ಯಾರನ್ನಾದರು ಕಳೆದುಕೊಂಡಾಗ ಮನೆಯವರು ಮಾತಾಡೋ ಪರಿಸ್ಥಿತಿಯಲ್ಲಿ ಇರ್ತಾರಾ? ಅವತ್ತು ನಮ್ಮಮ್ಮ ಗಂಡನನ್ನು ಕಳೆದುಕೊಂಡ ನೋವಿನಲ್ಲಿದ್ದರು. ಏನೂ ಮಾತಾಡಿಲ್ಲ ಅವತ್ತು. ಯಾಕೆ ಅವರು ನಮ್ಮನ್ನು ವಿರೋಧಿಸುತ್ತಿದ್ದಾರೆ ಅವರ ಮನಸ್ಸಲ್ಲಿ ಏನಿದೆ ನನಗೆ ಗೊತ್ತಿಲ್ಲ. ಅಕ್ರಮದ ಬಗ್ಗೆ ಮಾತಾಡೋದು ನಟೋರಿಯಸ್ ಆದರೆ ನಾವು ನಟೋರಿಯಸ್ ಹೌದು ಎಂದು ಹೆಚ್‍ಡಿಕೆ ವಿರುದ್ಧ ಕಿಡಿಕಾರಿದರು.

ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ವಿರೋಧ ವ್ಯಕ್ತವಾಗಿದ್ದಕ್ಕೆ ಉತ್ತರ ನೀಡಿದ ಅವರು, ಅಕ್ರಮ ಕೆಲಸ ಮಾಡುವವರು ಯಾರಾದರೂ ತನಿಖೆಗೆ ಹೋದ್ರೆ ರೆಡ್ ಕಾರ್ಪೆಟ್ ಹಾಕಿಕೊಡ್ತಾರಾ? ಮಾಜಿ ಸಿಎಂ ಅವರು ಹಿರಿಯರು. ನಾನು ಅವರ ಸಮಾನ ಅಲ್ಲ. ಅವರು ಹೇಗೆ ಮಾತನಾಡುತ್ತಾರೆ, ಯಾಕೆ ಮಾತನಾಡುತ್ತಾರೆ ಗೊತ್ತಿಲ್ಲ. ಜನರೇ ಅವರನ್ನು ನೋಡ್ತಿದ್ದಾರೆ. ಮಾತನಾಡಿ ಪ್ರಯೋಜನ ಇಲ್ಲ ಎಂದು ಅಭಿಷೇಕ್ ಹೇಳಿದರು.

RELATED TOPICS:
English summary :Abhishek Ambareesh On Hd Kumaraswamy

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...