Sun,May12,2024
ಕನ್ನಡ / English

ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ನಿಲ್ಲುವುದಿಲ್ಲ: ಎಚ್‌ಡಿಕೆ ಟ್ವೀಟ್‌ಗೆ ಸುಮಲತಾ ಉತ್ತರ | ಜನತಾ ನ್ಯೂಸ್

10 Jul 2021
1746

ಬೆಂಗಳೂರು : ಸದ್ಯದಲ್ಲಿಯೇ ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮತ್ತು ಬೇಬಿ ಬೆಟ್ಟಕ್ಕೆ ಭೇಟಿ ನೀಡಿ ಅಕ್ರಮ ಗಣಿಗಾರಿಕೆ ಬಗ್ಗೆ ಪರಿಶೀಲಿಸುತ್ತೇನೆ ಎಂದು ಮಂಡ್ಯ ಸಂಸದ ಸುಮಲತಾ ಅಂಬರೀಷ್ ಹೇಳಿದ್ದಾರೆ.

ಕೆಆರ್‌ಎಸ್‌ ಅಣೆಕಟ್ಟೆ ಸಮೀಪದ‌ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆಗೆ ಸಂಬಂಧಿಸಿದಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಅವರೊಂದಿಗೆ ನಡೆಸುತ್ತಿದ್ದ ರಾಜಕೀಯ ಕದನಕ್ಕೆ ವಿರಾಮ ಹಾಕಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ.

ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ನಿಲ್ಲಲ್ಲ. ರವೀಂದ್ರ ಶ್ರೀಕಂಠಯ್ಯ ಹೇಳಿದಂತೆ ನಡೆದುಕೊಳ್ಳಲಾಗಲ್ಲ. ಒಬ್ಬ ಸಂಸದೆಯಾಗಿ ನನ್ನ ಜವಾಬ್ದಾರಿ ನನಗೆ ಗೊತ್ತಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ.

ಕೆಆರ್​ಎಸ್​ಗೆ ಭೇಟಿ ನೀಡಲು ಈವರೆಗೆ ಅನುಮತಿ ಇರಲಿಲ್ಲ. ಕಾವೇರಿ ನಿಗಮದ ಅನುಮತಿ ಪಡೆದು ಹೋಗುತ್ತೇನೆ. ಕೆಆರ್​ಎಸ್ ಜಲಾಶಯ ಪರಿಶೀಲನೆ ಮಾಡಲು ಹೋಗುತ್ತೇನೆ. ಹಾಗೆಯೇ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ಪರಿಶೀಲಿಸುವೆ.

ಸತ್ಯದ ಪರ ಹೋರಾಟ ಮಾಡುವಾಗ ಈ ರೀತಿ ಅಡೆತಡೆಗಳು, ಶತ್ರುಗಳು ಹುಟ್ಟಿಕೊಳ್ಳುವುದು ಸಹಜ, ಇದರಿಂದಲೇ ನಾನು ಸತ್ಯದ ಪರ ಹೋರಾಡುತ್ತಿದ್ದೇನೆ ಎಂದು ಗೊತ್ತಾಗುತ್ತದೆ ಎಂದು ತಮ್ಮ ನಡೆಯನ್ನು ಸುಮಲತಾ ಅಂಬರೀಷ್ ಸಮರ್ಥಿಸಿಕೊಂಡಿದ್ದಾರೆ.

ಅಧಿಕಾರಿಗಳು ಕೊಡುವುದು ಕೇವಲ ರಿಪೋರ್ಟ್ ಅಷ್ಟೇ. ಆದರೆ ನಮಗೆ ಬೇಕಾಗಿರುವುದು ಸರ್ಟಿಫಿಕೆಟ್. ಕೆಆರ್​ಎಸ್​ನಲ್ಲಿ ಬಿರುಕು ಬಿಟ್ಟಿಲ್ಲ ಎನ್ನುವುದಾದರೆ ಸಂತಸವೇ ಆಗುತ್ತದೆ. ಆ ಬಗ್ಗೆ ಮೊದಲು ಸಂತಸಪಡುವುದು ನಾನೇ ಎಂದು ಸುಮಲತಾ ಹೇಳಿಕೊಂಡಿದ್ದಾರೆ.

ಕೆಆರ್ ಎಸ್ ಜಲಾಶಯ ಬಿರುಕು ಬಿಟ್ಟಿಲ್ಲ ಎಂದು ಪ್ರಮಾಣಪತ್ರ ಸಿಕ್ಕಿದರೆ ಸಂತೋಷಪಡುವವಳು ನಾನು, ಅಲ್ಲಿನ ಜನರ ಜೀವನಕ್ಕೆ ಸುರಕ್ಷತೆ ಬೇಕಾಗಿದೆ. ಜಲಾಶಯದ ಭದ್ರತೆ ವಿಚಾರದಲ್ಲಿ ರಾಜಕೀಯವಾಗಿ ಏನೇ ಬಂದರೂ ನಾನು ನನ್ನ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ಜೆಡಿಎಸ್ ನಾಯಕರು ತಮ್ಮ ಅಪ್ರಬುದ್ಧ ಹೇಳಿಕೆಗಳನ್ನು ಮುಂದುವರಿಸುತ್ತಿದ್ದರೆ ಅವರ ನಿಜಸ್ವರೂಪ ಜನರಿಗೆ ಗೊತ್ತಾಗುತ್ತದೆ, ಮುಂದಿನ ದಿನಗಳಲ್ಲಿ ಅದಕ್ಕೆ ತಕ್ಕ ಬೆಲೆಯನ್ನು ಅವರು ತೆರಬೇಕಾಗುತ್ತದೆ. ಸಂಸದೆಯಾಗಿ ನನ್ನ ಜವಾಬ್ದಾರಿ ನನಗೆ ಗೊತ್ತಿದೆ ಎಂದು ಇಂದು ಸಹ ಜೆಡಿಎಸ್ ದಳಪತಿಗಳ ಮೇಲೆ ಸುಮಲತಾ ಅಂಬರೀಷ್ ಹರಿಹಾಯ್ದಿದ್ದಾರೆ.

RELATED TOPICS:
English summary :Sumalatha Ambareesh

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...