Sat,May04,2024
ಕನ್ನಡ / English

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್‌ಎಸ್‌ಎಲ್​ಸಿ ಪರೀಕ್ಷೆ ಮುಖ್ಯ, ಪರೀಕ್ಷೆ ನಡೆಸಲು ಹೈಕೋರ್ಟ್​ ಗ್ರೀನ್ ಸಿಗ್ನಲ್ | ಜನತಾ ನ್ಯೂಸ್

12 Jul 2021
1731

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್​ ತಿರಸ್ಕರಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಮುಖ್ಯ ಎಂದು ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ.

ಕರೊನಾ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಿ ಎರಡೇ ದಿನದಲ್ಲಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡುವಂತೆ ಕೋರಿ, ನಗರದ ಜ್ಞಾನಮಂದಿರ ಎಜುಕೇಷನ್ ಟ್ರಸ್ಟ್​ನ ಸಿಂಗ್ರೇಗೌಡ ಎಂಬುವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕೋವಿಡ್‌ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೂ ರದ್ದು ಮಾಡಿ, ಎಲ್ಲಾ ವಿದ್ಯಾರ್ಥಿಗಳನ್ನೂ ಉತ್ತೀರ್ಣಗೊಳಿಸುವಂತೆ ಕೋರಿದ್ದರು.

ಇಂದು ಅರ್ಜಿದಾರರ ಹಾಗೂ ಸರ್ಕಾರದ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಅರ್ಜಿಯನ್ನು ವಜಾ ಮಾಡಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದಕ್ಕೆ ಅನುವು ಮಾಡಿಕೊಟ್ಟಿದೆ.

ಜಸ್ಟೀಸ್ ಬಿವಿ ನಾಗರತ್ನ ಹಾಗೂ ಜಸ್ಟೀಸ್ ಎಚ್ ಸಂಜೀವ್ ಕುಮಾರ್ ಅವರಿದ್ದ ನ್ಯಾಯಪೀಠವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಸೂಕ್ತ, ಸರ್ಕಾರ ಕೈಗೊಂಡ ಮಾರ್ಗಸೂಚಿಗಳು ಸಮರ್ಪಕವಾಗಿದೆ ಎಂದು ಪರಿಗಣಿಸಿದೆ, 2ನೇ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದೆ ಎಂದು ಎಸ್‌ಎಸ್ ಎಲ್ ಸಿ ಪರೀಕ್ಷೆ ನಡೆಸಬಾರದು ಎಂಬ ವಾದವನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸುವುದಕ್ಕೆ ಕೊರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯದ ನಡೆಗೆ ಸಚಿವ ಸುರೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ನಿಜಕ್ಕೂ ಇದು ಭರವಸೆ ಮೂಡಿಸಿದ ತೀರ್ಪು. ಈ ವರ್ಷದ ಎಸ್‌ಎಸ್‌ಎಲ್​ಸಿ ಪರೀಕ್ಷೆ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಉಚ್ಚ ನ್ಯಾಯಾಲಯವು ಪಿಐಎಲ್ ಅನ್ನು ತಿರಸ್ಕರಿಸಿದೆ. ಅದರೊಂದಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ. ಇದರಿಂದ ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಂತಸ ಹಂಚಿಕೊಂಡಿದ್ದಾರೆ.

ಮೂರು ವಿಷಯಗಳಿಗೆ ಒಂದು ಪ್ರಶ್ನೆ ಪತ್ರಿಕೆಯಂತೆ ಜುಲೈ 19 ಮತ್ತು 22 ರಂದು ರಾಜ್ಯದ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ನ್ಯಾಯಾಲಯಕ್ಕೆ ಕರ್ನಾಟಕ ಸರ್ಕಾರ ತಿಳಿಸಿದೆ.

ಕಳೆದ ವರ್ಷ 8 ಲಕ್ಷ ಮಂದಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದರು. ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಳೆದ ವರ್ಷ 40 ಸಾವಿರ ಕೊಠಡಿಗಳನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಬಳಸಲಾಗಿತ್ತು. ಈ ಬಾರಿ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ಕೋವಿಡ್ 19 ಸುರಕ್ಷಿತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳ ಆತ್ಮವಿಶ್ವಾಸಕ್ಕೆ ಹೆಚ್ಚಿಸಲು ಅಣಕು ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಮಾರ್ಗಸೂಚಿ ಪ್ರಕಟಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

RELATED TOPICS:
English summary :Karnataka SSLC Exam 2021

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...