Sat,Apr27,2024
ಕನ್ನಡ / English

ಸಂಸದೆ ಸುಮಲತಾ ಹೇಳಿಕೆಗೆ ಕಂದಾಯ ಸಚಿವ ಆರ್.ಅಶೋಕ್​ ತೀವ್ರ ಅಸಮಾಧಾನ | ಜನತಾ ನ್ಯೂಸ್

14 Jul 2021
1447

ಮೈಸೂರು : ಕೆಆರ್​ಎಸ್​​ ಡ್ಯಾಂ ಬಿರುಕಿನ ವಿಚಾರದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ನೀಡುತ್ತಿರುವ ಹೇಳಿಕೆಗಳ ಕುರಿತಂತೆ ಕಂದಾಯ ಸಚಿವ ಆರ್.ಅಶೋಕ್​ ತೀವ್ರ ಅಸಮಾಧಾನ ಹೊರ ಹಾಕಿದ್ದು, ನಮಗೆ ಯಾವ ವ್ಯಕ್ತಿಯೂ ಮುಖ್ಯ ಅಲ್ಲ, ಕೆಆರ್​​ಎಸ್​ ಡ್ಯಾಂ ಮುಖ್ಯ ಎಂದು ಹೇಳಿದ್ದಾರೆ.

ಅವರು ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಸರ್ಕಾರದ ಅಧಿಕಾರಿಗಳು, ಗಣಿ ಸಚಿವ ನಿರಾಣಿಯವರು, ನಾನು ಮತ್ತು ಜಿಲ್ಲಾಧಿಕಾರಿಗಳು ಕೂಡ ಕೆಆರ್ ಎಸ್ ಗೆ ಏನೂ ಅಪಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನೀರಾವರಿ ಇಲಾಖೆಯ ಎಂಜಿನಿಯರ್ ಗಳು ಸಹ ಪತ್ರಿಕಾಗೋಷ್ಠಿ ನಡೆಸಿ ಹೇಳಿದ್ದಾರೆ.

ಇಷ್ಟೆಲ್ಲ ಹೇಳಿದ ಮೇಲೂ ಕೆಆರ್ ಎಸ್ ಡ್ಯಾಂನ ಬಿರುಕಿನ ಬಗ್ಗೆ ಮಾತನಾಡಿದರೆ ಅಣೆಕಟ್ಟು ತೀರದ ಕೆಳಭಾಗಗಳಲ್ಲಿ ವಾಸಿಸುವ ಜನರಿಗೆ ಆತಂಕವಾಗುತ್ತದೆ, ಎಲ್ಲಿ ತಮ್ಮ ಮನೆಗಳಿಗೆ, ಜಮೀನುಗಳಿಗೆ ತೊಂದರೆಯಾಗುತ್ತದೋ ಎಂಬ ಭಯವಿರುತ್ತದೆ ಎಂದರು.

ಸರ್ಕಾರ ಈ ವಿಷಯದಲ್ಲಿ ಈಗಾಗಲೇ ಸ್ಪಷ್ಟನೆ ನೀಡಿದ್ದು ಮೌನವಾಗಿ ಕುಳಿತಿಲ್ಲ, ಹಿಂದೆ ಅದರ ರಿಪೇರಿ ಕೆಲಸಗಳು ನಡೆದಿವೆ. ನೀರಾವರಿ ಇಲಾಖೆಯ ತಜ್ಞರು ವರದಿ ಕೊಟ್ಟಿದ್ದಾರೆ. ಯಾವುದೇ ಬಿರುಕು ಇಲ್ಲ, ಇದನ್ನು ರಾಜಕೀಯ ಗಾಳವನ್ನಾಗಿ ಬಳಸಿಕೊಂಡು ಜನರ ಮನಸ್ಸಿಗೆ ನೋವುಂಟುಮಾಡಬೇಡಿ ಎಂದು ಸುಮಲತಾ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಇದೇ ವೇಳೆ ನಮಗೆ ಯಾವ ವ್ಯಕ್ತಿಯೂ ಮುಖ್ಯ ಅಲ್ಲ, ಕೆಆರ್‌ಎಸ್ ಡ್ಯಾಂ ಮುಖ್ಯ ಎಂದು ಸ್ಪಷ್ಟಪಡಿಸಿರುವ ಸಚಿವರು, ನಾನೂ ಇಂದು ಮಂಡ್ಯಕ್ಕೆ ಹೋಗುತ್ತಿದ್ದೇನೆ, ಜಿಲ್ಲಾಧಿಕಾರಿ ಭೇಟಿ ಮಾಡುತ್ತೇನೆ. ಕೆಆರ್‌ಎಸ್ ಡ್ಯಾಂ, ಬೇಬಿ ಬೆಟ್ಟದ ಸುತ್ತ ಏನಾಗಿದೆ ಅಂತ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡುತ್ತೇನೆ ಎಂದು ಹೇಳಿದರು.

RELATED TOPICS:
English summary :R.Ashok

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...