Sun,May19,2024
ಕನ್ನಡ / English

ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ ಬನ್ನಿ: ಬಿಜೆಪಿಗೆ ಡಿ.ಕೆ. ಶಿವಕುಮಾರ್ ಸವಾಲು | ಜನತಾ ನ್ಯೂಸ್

25 Jul 2021
1355

ಬೆಂಗಳೂರು : ರಾಜ್ಯದ ಜನ ನೆರೆ, ಕೋವಿಡ್ ನಿಂದ ತತ್ತರಿಸಿ ಜೀವ ಹಾಗೂ ಜೀವನ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ರಕ್ಷಣೆ ಮಾಡಲು ಸರ್ಕಾರ ವಿಫಲವಾಗಿದೆ. ಹೀಗಾಗಿ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ, ಅವರ ತೀರ್ಪಿನ ಪ್ರಕಾರ ಹೊಸ ಆಡಳಿತ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಸರಕಾರಕ್ಕೆ ಸವಾಲೆಸೆದಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿಸರ್ಜಿಸಿ, ಚುನಾವಣೆ ಎದುರಿಸೋಣ. ಜನರ ಬಳಿ ಹೋಗೋಣ. ಅವರು ಯಾವ ತೀರ್ಮಾನ ಮಾಡುತ್ತಾರೋ ಅದರ ಆಧಾರದ ಮೇಲೆ ಹೊಸ ಆಡಳಿತ ನೀಡೋಣ ಎಂದು ಹೇಳಿದರು.

ಮುಖ್ಯಮಂತ್ರಿಗಳು ನೆರೆ ಪರಿಶೀಲನೆಗೆ ಇಂದು ಪ್ರವಾಸ ಮಾಡುತ್ತಿದ್ದಾರೆ. ಅವರ ಸ್ಥಾನ ಏನಾಗುತ್ತದೋ ಆ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಳೆದ ಮೂರು ವರ್ಷಗಳಿಂದ ಈ ರೀತಿ ಮಳೆ-ನೆರೆ ಬರುತ್ತಿದೆ. ನಮ್ಮ ಪಕ್ಷದಿಂದ ಆರ್.ವಿ. ದೇಶಪಾಂಡೆ ಹಾಗೂ ಸತೀಶ್ ಜಾರಕಿಹೊಳಿ ಅವರ ನೇತೃತ್ವದ ತಂಡಗಳು ನೆರೆ ಪರಿಶೀಲನೆಗೆ ತೆರಳಿವೆ.

ಬೆಳಗಾವಿಯಲ್ಲಿ ನಿಮ್ಮದೇ ಪಕ್ಷದ 10 ಕ್ಕೂ ಹೆಚ್ಚು ಶಾಸಕರಿದ್ದಾರೆ. ಸರ್ಕಾರವೂ ನಿಮ್ಮದೇ ಇದೆ. ಆದರೂ ಕಳೆದ ವರ್ಷದ ನೆರೆಗೆ ಪರಿಹಾರ ನೀಡಲು ನಿಮಗೆ ಸಾಧ್ಯವಾಗಿಲ್ಲ ಏಕೆ? ಮನೆ ಕಟ್ಟಿಕೊಡಲು ಆಗಿಲ್ಲ ಯಾಕೆ? ಈ ವರ್ಷದ ನೆರೆ ಪಕ್ಕಕ್ಕಿಡಿ, ಒಂದೇ ದಿನದಲ್ಲಿ ಮ್ಯಾಜಿಕ್ ಮಾಡಲು ಸಾಧ್ಯವಿಲ್ಲ. ಕಳೆದ ಎರಡು ವರ್ಷಗಳ ನೆರೆ ಸಂತ್ರಸ್ತರಿಗೆ ಪರಿಹಾರ ಕೊಟ್ಟಿಲ್ಲ ಯಾಕೆ? ಇದನ್ನು ಕೊಡಲು ಆಗಿಲ್ಲ ಎಂದರೆ ಈ ಸರ್ಕಾರ ಯಾಕಿರಬೇಕು? ಯಾವ ಕಾರಣಕ್ಕೆ ನಿಮಗೆ ಅಧಿಕಾರ ಬೇಕು?

ಈ ಹಿಂದೆ ಪಶ್ಚಿಮ ಬಂಗಾಳ ಮತ್ತಿತರ ರಾಜ್ಯಗಳಲ್ಲಿ ನೆರೆ ಬಂದಾಗ ಪ್ರಧಾನ ಮಂತ್ರಿಗಳು ಅಲ್ಲಿಗೆ ಭೇಟಿ ನೀಡಿದ್ದರು. ಆದರೆ ಕರ್ನಾಟಕಕ್ಕೆ ಯಾಕೆ ಬರಲಿಲ್ಲ?ನಮ್ಮ ರಾಜ್ಯಕ್ಕೆ ಯಾಕೆ ಸೂಕ್ತ ಪರಿಹಾರ ನೀಡಲಿಲ್ಲ? ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ? ಆದರೂ ಬಿಜೆಪಿ ಸಂಸದರು ಯಾಕೆ ಒತ್ತಡ ತರಲಿಲ್ಲ? ಲಸಿಕೆ ವಿಚಾರದಲ್ಲಿ ಗುಜರಾತಿಗೆಷ್ಟು ಕೊಟ್ಟಿದ್ದಾರೆ? ನಮ್ಮ ರಾಜ್ಯಕ್ಕೆಷ್ಟು ಕೊಟ್ಟಿದ್ದಾರೆ? ರಾಜ್ಯದಿಂದ 25 ಸಂಸದರನ್ನು ಗೆಲ್ಲಿಸಿ ಕಳುಹಿಸಿಲ್ಲವೇ? ಇದೇನಾ ಬಿಜೆಪಿ, ಎನ್ ಡಿಎ ಸಂಸ್ಕೃತಿ?

ಬಿಜೆಪಿಗೆ ಅಧಿಕಾರ ನಡೆಸಲು, ಜನರ ಸೇವೆ ಮಾಡಲು ಅರ್ಹತೆ ಇಲ್ಲ ಎಂಬುದಕ್ಕೆ ಇದೇ ಸಾಕ್ಷಿ. ಅಭಿವೃದ್ಧಿ ವಿಚಾರ ಪಕ್ಕಕ್ಕಿಡಿ. ಜನ ಕಷ್ಟದಲ್ಲಿರುವಾಗ, ಆಸ್ತಿ, ಜೀವ ಹಾಗೂ ಜೀವನ ಕಳೆದುಕೊಳ್ಳುತ್ತಿರುವಾಗ ಈ ಸರಕಾರ ಸ್ಪಂದಿಸಲಿಲ್ಲ. ಸಂಪೂರ್ಣ ವಿಫಲವಾಗಿದೆ.

ಯಡಿಯೂರಪ್ಪ ಅವರು ಅಧಿಕಾರ ತೆಗೆದುಕೊಂಡ ದಿನದಿಂದ ರಾಜಕೀಯ ಅನಿಶ್ಚಿತತೆ ಇದೆ ಎಂದು ಅವರೇ ಹೇಳಿದ್ದಾರೆ. ಅದೇ ಅವರ ಆಡಳಿತ. ಅದೇ ಜನರಿಗೆ ಕೊಟ್ಟಿರುವ ಕೊಡುಗೆ ಎಂದು ತಿಳಿಸಿದರು.

ಕೋವಿಡ್ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯವನ್ನು ಎಲ್ಲರೂ ಗಮನಿಸಿದ್ದಾರೆ. ಕೋವಿಡ್ ಆರಂಭವಾದಾಗ ಪಕ್ಷದ ಜವಾಬ್ದಾರಿ ಹೊತ್ತೆ. ಜನರ ಸೇವೆ ಮಾಡಲು ಅವಕಾಶ ಸಿಕ್ಕಿತು. ಮೊದಲ ಅಲೆಯಲ್ಲಿ ನಾವು ಅತ್ಯುತ್ತಮ ನಿಲುವು ತೆಗೆದುಕೊಂಡೆವು. ವಲಸೆ ಕಾರ್ಮಿಕರಿಗೆ ಕೊಟ್ಟ ರಕ್ಷಣೆ, ಅವರಿಗೆ ತುಂಬಿದ ಧೈರ್ಯ, ರೈತರಿಗೆ ಬೆಂಬಲವಾಗಿ ನಿಂತದ್ದು, ಅವರ ಬೆಳೆ ಖರೀದಿ ಮಾಡಿದ್ದನ್ನು ಎಲ್ಲರೂ ಗಮನಿಸಿದ್ದಾರೆ ಎಂದರು.

ರಾಜ್ಯದ ಉದ್ದಗಲಕ್ಕೂ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಈ ಕೆಲಸ ಮಾಡಿದ್ದಾರೆ. ಬಿಜೆಪಿಯವರು ಸರ್ಕಾರದ ದುಡ್ಡಲ್ಲಿ ತಮ್ಮ ಫೋಟೋ ಹಾಕಿಕೊಂಡು ಆಹಾರ ಕಿಟ್ ಕೊಟ್ಟರೆ, ನಮ್ಮ ನಾಯಕರು ತಮ್ಮ ಸ್ವಂತ ದುಡ್ಡಿನಲ್ಲಿ ಆಹಾರ ಕಿಟ್, ಆಕ್ಸಿಜನ್, ದಿನಸಿ ಕಿಟ್, ಸ್ಯಾನಿಟೈಸರ್ ಕೊಟ್ಟಿದ್ದಾರೆ.

ನಾವು ಸರ್ಕಾರಕ್ಕೆ ಪರ್ಯಾಯವಾಗಿ ಜನರಿಗೆ 1225 ಆಂಬುಲೆನ್ಸ್ ಸೇವೆ ಒದಗಿಸಿದ್ದೇವೆ. 12,53,000 ಮೆಡಿಕಲ್ ಕಿಟ್ ಹಂಚಿದ್ದೇವೆ. 93,47,867 ಆಹಾರ ಕಿಟ್ ನೀಡಿದ್ದೇವೆ. 24,654 ಆಕ್ಸಿಜನ್ ಸಿಲಿಂಡರ್ ನೀಡಿದ್ದೇವೆ. ಇದಕ್ಕೆ ದಾಖಲೆಗಳಿವೆ ಎಂದು ಹೇಳಿದರು.

ಅಧಿಕಾರದ ಜಂಜಾಟ ನಮಗೆ ಬೇಡ. ಆಸ್ಪತ್ರೆಯ ದುಬಾರಿ ಬಿಲ್ ಕಟ್ಟಲು ಜನ ತಮ್ಮ ಆಸ್ತಿ, ಚಿನ್ನವನ್ನು ಅಡವಿಟ್ಟಿದ್ದಾರೆ, ಮಾರಿಕೊಂಡಿದ್ದಾರೆ. ಈ ಬಗ್ಗೆ ನಮಗೆ ಮಧ್ಯಂತರ ವರದಿ ಬಂದಿದ್ದು, ಎಐಸಿಸಿಗೆ ಈ ವರದಿ ಕಳುಹಿಸಲಾಗುತ್ತದೆ. ಮುಂದೆ ಅಂತಿಮ ವರದಿ ಬರಲಿದೆ. ಈ ಕೆಲಸಕ್ಕಾಗಿ ನಮ್ಮ ತಂಡವನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳೇ ಆಕ್ಸಿಜನ್ ಇಲ್ಲದೆ ಯಾರೂ ಸತ್ತಿಲ್ಲ ಎಂದು ಕೇಂದ್ರ ಸರ್ಕಾರದ ಸಚಿವಾಲಯಕ್ಕೆ ಮಾಹಿತಿ ನೀಡಿದ ಮೇಲೆ ಚಾಮರಾಜನಗರದಲ್ಲಿ ಸತ್ತ 24 ಜನರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡಿರುವುದೇಕೇ..? 36 ಜನ ಆಕ್ಸಿಜನ್ ಇಲ್ಲದೆ ಸತ್ತಿದ್ದಾರೆ ಎಂದು ಹೈಕೋರ್ಟ್ ನೇಮಕ ಮಾಡಿದ ಸಮಿತಿ ವರದಿ ತಿಳಿಸಿದೆ. ಅವರಿಗೆ ಕೋವಿಡ್ ನಿಂದ ಸತ್ತಿದ್ದಾರೆ ಎಂಬ ಪ್ರಮಾಣ ಪತ್ರವನ್ನೂ ನೀಡಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಮನೆ ಮನೆಗೂ ತೆರಳಿ ಅವರ ಕುಟುಂಬದವರ ರಕ್ಷಣೆಗೆ ನಿಲ್ಲಲಿದೆ ಎಂದರು.

RELATED TOPICS:
English summary :DK shivakumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...