Thu,May02,2024
ಕನ್ನಡ / English

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ಪ್ರಮಾಣ ವಚನ ಸ್ವೀಕಾರ! | ಜನತಾ ನ್ಯೂಸ್

28 Jul 2021
2268

ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.

ಬಿ. ಶ್ರೀರಾಮುಲು, ಆರ್. ಅಶೋಕ ಹಾಗೂ ಗೋವಿಂದ ಕಾರಜೋಳ ಅವರಿಗೆ ಡಿಸಿಎಂ ಹುದ್ದೆ ಒಲಿದು ಬಂದಿದೆ. ಒಕ್ಕಲಿಗ ಸಮುದಾಯದ ಡಾ. ಸಿ.ಎನ್ ಅಶ್ವಥ ನಾರಾಯಣ ಅವರು ತಮ್ಮ ಸ್ಥಾನವನ್ನು ಅದೇ ಸಮುದಾಯದ ಅಶೋಕ ಅವರಿಗೆ ಬಿಟ್ಟುಕೊಡಲಿದ್ದಾರೆ. ದಲಿತ ಕೋಟಾದಡಿ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ವಾಲ್ಮೀಕಿ ಸಮುದಾಯದ ಬಿ ಶ್ರೀರಾಮುಲುರನ್ನು ಡಿಸಿಎಂ ಪಟ್ಟಕ್ಕೇರಿಸಲಾಗಿದೆ ಎನ್ನಲಾಗಿದೆ.

ಬಸವರಾಜ ಬೊಮ್ಮಾಯಿ ಅವರು ಮಾತ್ರ ಪ್ರಮಾಣ ವಚನ ಸ್ವೀಕರಿಸಲು ಸದ್ಯ ಕಾರ್ಯಕ್ರಮ ನಿಗದಿಯಾಗಿದೆ. ಆದರೆ ದೆಹಲಿಯಿಂದ ಸೂಚನೆ ಬಂದಲ್ಲಿ ಉಪ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾಗಿರುವ ಗೋವಿಂದ ಕಾರಜೋಳ, ಬಿ. ಶ್ರೀರಾಮುಲು ಹಾಗೂ ಆರ್. ಅಶೋಕ್ ಅವರೂ ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಂಪುಟ ವಿಸ್ತರಣೆಯತ್ತ ಗಮನ ಹರಿಸಲಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಒಂದೇ ಬಾರಿಗೆ ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬರಲಿದೆ ಎನ್ನಲಾಗಿದೆ.

ದೆಹಲಿ ನಾಯಕರ ಜೊತೆ ಸಂಪರ್ಕ ಹೊಂದಿರುವ ಹಲವು ಬಿಜೆಪಿ ಮುಖಂಡರು ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಕಸರತ್ತು ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಿಂದ ನಾಲ್ಕು ಬಾರಿ ಶಾಸಕರಾಗಿರುವ ಅರಗ ಜ್ಞಾನೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ, ಮತ್ತು ಸೊರಬ ಶಾಸಕ ಕುಮಾರ್ ಬಂಗಾರಪ್ಪ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ.

"ಜನಪರ ಆಡಳಿತ ನೀಡುವೆ, ನಂಬಿಕೆ ಹುಸಿಗೊಳಿಸಲ್ಲರೈತ, ಬಡವರು, ಹಿಂದುಳಿದವರು, ದೀನ ದಲಿತರ ರಕ್ಷಣೆ ಸರ್ಕಾರದ ಮೇಲಿದೆ. ಕೋವಿಡ್ 19 ಬಗ್ಗೆ ಮೊದಲಿಗೆ ಗಮನ ಹರಿಸಬೇಕಿದೆ" ಎಂದು ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

RELATED TOPICS:
English summary :Karnataka Politics

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...