Mon,May13,2024
ಕನ್ನಡ / English

ಉತ್ತರ ಕನ್ನಡ ಪ್ರವಾಹ: ನೊಂದವರಿಗೆ ಶೀಘ್ರ ಪರಿಹಾರ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ | ಜನತಾ ನ್ಯೂಸ್

29 Jul 2021
1572

ಉತ್ತರ ಕನ್ನಡ : ಉತ್ತರ ಕನ್ನಡದಲ್ಲಿ ಈ ವರ್ಷ ಮಳೆಯ ಆರ್ಭಟ ಹೆಚ್ಚಾಗಿದ್ದು, ಸಾಕಷ್ಟು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ಗುರುವಾರದಂದು ಜಿಲ್ಲೆಗೆ ಭೇಟಿ ನೀಡಿದ ನೂತನ ಸಿಎಂ ಬಸವರಾಜ ಬೊಮ್ಮಾಯಿ, ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆ ನಡೆಸಿದರು.

ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಭೂಕುಸಿತಕ್ಕೊಳಗಾದ ಕಳಚೆ‌ ಗ್ರಾಮದಲ್ಲಿ ಪರಿಹಾರ ನೀಡಿದರೂ ಮನೆ ಕಟ್ಟಲು ಅಸಾಧ್ಯವಾಗಿದೆ. ಹೀಗಾಗಿ ಗ್ರಾಮವನ್ನು ಸಂಪೂರ್ಣ ಸ್ಥಳಾಂತರಿಸಿ. ನಾಳೆಯಿಂದಲೇ ಕೆಲಸ ಮಾಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಈ ಸ್ಥಳಾಂತರಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಪೂರ್ಣ ಬಿದ್ದ ಮನೆಗಳಿಗೆ 5 ಲಕ್ಷ , ಭಾಗಶಃ ಬಿದ್ದ ಮನೆಗಳಿಗೆ ಲಕ್ಷ, ಸ್ವಲ್ಪ ಹಾನಿಯಾಗಿದ್ದರೆ 50 ಸಾವಿರ ಪರಿಹಾರವನ್ನು ಸಿಎಂ ಘೋಷಿಸಿದರು. ಎಂದು ಸಿಎಂ ಆದೇಶಿಸಿದರು. ಜತೆಗೆ ಕಳಚೆ ಗ್ರಾಮಸ್ಥರ ಪುರ್ವಸತಿಗೆ 15 ಎಕರೆ ಜಮೀನು ಹುಡುಕಲು ಜಿಲ್ಲಾಧಿಕಾರಿಗೆ ಸೂಚಿಸಿದರು. ಅರಬೈಲ್ ಘಾಟ್ ರಸ್ತೆ , ಕಳಚೆ ರಸ್ತೆ , ಘಟ್ಟ ಕುಸಿದ ಸ್ಥಳ ರಿಪೇರಿಗೆ 10 ಕೋಟಿ‌ ಘೋಷಿಸಿದರು.

ಇನ್ನು ಸುಫಾ ಕದ್ರಾ ಕೆಪಿಸಿ ಹಾಗೂ ಜಿಲ್ಲಾಡಳಿತ ಸಮನ್ವಯತೆಯಿಂದ ಹಂತ ಹಂತವಾಗಿ ನೀರು ಬಿಡಿ ಎಂದು ಸೂಚಿಸಿದ ಮುಖ್ಯಮಂತ್ರಿಗಳು, ಅರಬೈಲ್ ಘಾಟ್ ರಸ್ತೆ , ಕಳಚೆ ರಸ್ತೆ ಘಟ್ಟ ಕುಸಿದ ರಿಪೇರಿಗೆ ೧೦ ಕೋಟಿ ವೆಚ್ಚದಲ್ಲಿ ಸುಧಾರಿಸಿ. 6000 ಮೀನುಗಾರರಿಗೆ ವ್ಯಾಕ್ಸಿನೇಷನ್‌ ಕ್ಯಾಂಪ್ ಮಾಡಿ. ರೈತರ ಬೆಳೆ ಹಾನಿ ಪರಿಹಾರಕ್ಕೆ ಕ್ರಮ ಕೈಕೊಳ್ಳತ್ತೇನೆ. ನೆರೆ ಪರಿಹಾರ ತಕ್ಷಣ ನೀಡಿ ಎಂದು ಜಿಲ್ಲಾಧಿಕಾರಿ ಮುಗಿಲನ್ ಗೆ ಸಿಎಂ ಬೊಮ್ಮಾಯಿ ಸೂಚಿಸಿದರು.

ಎನ್​ಡಿಆರ್​ಎಫ್ ನಿಯಮದಂತೆ ಆರೈಕೆ ಕೇಂದ್ರದಲ್ಲಿನ ಜನರಿಗೆ 3800 ಪರಿಹಾರವನ್ನು ಕಳೆದ ವರ್ಷ ನೀಡಲಾಗಿತ್ತು. ಇದೀಗ ರಾಜ್ಯ ಸರಕಾರದಿಂದ ತಲಾ 10 ಸಾವಿರ ಪರಿಹಾರ ನೀಡಲು ನಿರ್ಧರಿಸಲಾಗಿದ್ದು, ಉಳಿದ 6200 ರೂ. ಹಣವನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬಿದ್ದ ಮನೆಗಳ ಸರ್ವೆ ನಡೆಸಿ ಕಳೆದ ವರ್ಷದ ಮಾದರಿಯಲ್ಲಿಯೇ ಪರಿಹಾರ ನೀಡಲು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಬವರಾಜ ಬೊಮ್ಮಾಯಿ ತಿಳಿಸಿದರು.

ಯಲ್ಲಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಬಳಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವೆಡೆ ಊರುಗಳೇ ನೆರೆಯ ಹೊಡೆತಕ್ಕೆ ಸಿಲುಕಿವೆ. ಗುಡ್ಡಗಳು ಕುಸಿದು ಮನೆಗಳೇ ನೆಲಸಮವಾಗಿವೆ. ದಾರಿಗಳು ಹಾಳಾಗಿದ್ದು, ನಲುಗಿ ಹೋದ ಸಂತ್ರಸ್ತರಿಗೆ ಮತ್ತೆ ಬದುಕು ಕಟ್ಟಿಕೊಡುವ ಕಾರ್ಯ ಆಗಬೇಕಾಗಿದೆ ಎಂದು ಹೇಳಿದ್ದಾರೆ.

ಸದ್ಯ ಎನ್.ಡಿ.ಆರ್.ಎಫ್ ನಿಧಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗುವುದು. ಪ್ರವಾಹದಿಂದ ಉಂಟಾದ ಹಾನಿಯ ಸಮೀಕ್ಷೆ ನಡೆಸಿ, ನಂತರ ಹೆಚ್ಚಿನ ಅನುದಾನ ಕೇಳಲಾಗುವುದು ಎಂದರು. ಶಾಸಕ ಶಿವರಾಮ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ವಾ.ಕ.ರ.ಸಾ ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ ಇತರರಿದ್ದರು.

RELATED TOPICS:
English summary :Uttara Kannada Flood

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...