Wed,May08,2024
ಕನ್ನಡ / English

ರಾಜ್ಯ ಬಿಜೆಪಿಗೆ ಮೇಕೆದಾಟು ಯೋಜನೆಯಲ್ಲಿ ವಿಚಾರದಲ್ಲಿ ಬದ್ಧತೆ ಇದ್ದರೆ ಕೇಂದ್ರದಿಂದ ಅನುಮತಿ ತರಲಿ: ಹೆಚ್​.ಡಿ. ಕುಮಾರಸ್ವಾಮಿ | ಜನತಾ ನ್ಯೂಸ್

30 Jul 2021
2118

ಬೆಂಗಳೂರು : ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡುವ ವಿಚಾರದಲ್ಲಿ ಕರ್ನಾಟಕದ ಪರವಾಗಿ ಇರುವವರು ಯಾರು? ತಮಿಳುನಾಡಿನ ವಿರೋಧ ಪಕ್ಷ ಎಐಎಡಿಎಂಕೆ ಎನ್‌ಡಿಎ ಸರ್ಕಾರದ ಮೇಲೆ ಒತ್ತಡ ಹಾಕಿದೆ. ಆಡಳಿತ ಪಕ್ಷ ಡಿಎಂಕೆ ಕಾಂಗ್ರೆಸ್‌ ಮೇಲೆ ಒತ್ತಡ ಹಾಕಿದೆ. ಕರ್ನಾಟಕದಲ್ಲಿ ಮಾತ್ರ ಎರಡೂ ಪಕ್ಷಗಳು ಯೋಜನೆ ಜಾರಿಯಾಗಬೇಕು ಎನ್ನುತ್ತವೆ? ಯಾರು ಯಾರ ಪರ ಇದ್ದೀರಿ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿಯಾಗದೆಂದು ಕೇಂದ್ರ ಜಲಸಂಪನ್ಮೂಲ ಸಚಿವರು ಭರವಸೆ ನೀಡಿರುವುದಾಗಿ ತಮಿಳುನಾಡಿನ ಆಡಳಿತ ಪಕ್ಷ, ವಿರೋಧ ಪಕ್ಷಗಳೆರಡೂ ನಿನ್ನೆಯಷ್ಟೇ ಪುನರುಚ್ಚರಿಸಿವೆ. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸಿದ್ದ, ತಮಿಳುನಾಡು ಬಿಜೆಪಿ ಮುಖಂಡ, ಮಾಜಿ ಐಪಿಎಸ್‌ ಅಧಿಕಾರಿಯೊಬ್ಬರು ಮೇಕೆದಾಟು ಯೋಜನೆ ವಿರುದ್ಧ ಉಪವಾಸಕ್ಕೂ ಕೂರುತ್ತಿದ್ದಾರೆ.

ಮೇಕೆದಾಟು ಅಣೆಕಟ್ಟು ಯೋಜನೆ ತಮಿಳುನಾಡಿನಲ್ಲಿ ರಾಜಕೀಯ ಒಗ್ಗಟ್ಟು ಪ್ರದರ್ಶನಕ್ಕೆ ಕಾರಣವಾಗಿದ್ದರೆ, ಅದೇ ಮೇಕೆದಾಟು ಯೋಜನೆ ರಾಜ್ಯದಲ್ಲಿನ ಒಡಕುತನವನ್ನು ಸ್ಪಷ್ಟವಾಗಿ ತೋರಿಸುತ್ತಿದೆ. "ನಾವು ಯೋಜನೆ ಪರ ಇದ್ದೇವೆ" ಎಂದು ರಾಜ್ಯದ ಮುಖ್ಯಮಂತ್ರಿಯೊಬ್ಬರೇ ಹೇಳಿದರೆ ಸಾಲದು. ಆಡಳಿತ ಪಕ್ಷ ಇದರ ಪರ ಇರುವುದಾಗಿ ಕೆಲಸದ ಮೂಲಕ ಸಾಬೀತು ಮಾಡಬೇಕು.

ಅಣೆಕಟ್ಟು ನಿರ್ಮಾಣ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದ ಯಡಿಯೂರಪ್ಪ ಅವರು ಕೇಂದ್ರ ಸರ್ಕಾರದ ಅನುಮತಿ ಪಡೆಯಲಿಲ್ಲ. ಈಗ ಬೊಮ್ಮಾಯಿ ಅವರೂ ಯೋಜನೆ ಜಾರಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಇವೆಲ್ಲ ಮಾತಿನಲ್ಲೇ ಉಳಿಯಬಾರದು. ಕೇಂದ್ರದ ಬಳಿಗೆ ಹೋಗಿ ಅನುಮತಿ ಪಡೆಯಲು ಪ್ರಯತ್ನಿಸಬೇಕು. ಈ ಕಾರ್ಯವನ್ನು ಜೆಡಿಎಸ್‌ ಯಾವಾಗಲೂ ಬೆಂಬಲಿಸುತ್ತದೆ.

ಮೇಕೆದಾಟು, ಕೃಷ್ಣಾ, ಮಹದಾಯಿ ಯೋಜನೆಗಳಿಗೆ ಅನುಮತಿ ನೀಡಲು ಆಗ್ರಹಿಸಿ ಜೆಡಿಎಸ್‌ ರಾಜ್ಯಪಾಲರ ಮೂಲಕ ರಾಷ್ಟ್ರಪತಿ, ಪ್ರಧಾನಿಗೆ ಮನವಿ ಸಲ್ಲಿಸಿದೆ. ಈ ವಿಚಾರವಾಗಿ ಪ್ರಧಾನಿಯನ್ನೂ ಭೇಟಿಯಾಗಲು ನಿರ್ಧರಿಸಿದ್ದೇವೆ. ರಾಜ್ಯವನ್ನು ಆಳುತ್ತಿರುವ ಬಿಜೆಪಿಗೆ ಈ ಯೋಜನೆಗಳ ವಿಚಾರದಲ್ಲಿ ಬದ್ಧತೆ ಇದ್ದರೆ ಕೇಂದ್ರದ ಮೇಲೆ ಒತ್ತಡ ಹಾಕಿ ಅನುಮತಿ ತರಲಿ ಎಂದು ಆಗ್ರಹಿಸಿದ್ದಾರೆ.

RELATED TOPICS:
English summary :H D Kumaraswamy

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...