ಪ್ರಯಾಣಿಕರ ಸೋಗಿನಲ್ಲಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳ ಬಂಧನ! | ಜನತಾ ನ್ಯೂಸ್
ಬೆಂಗಳೂರು : ಪ್ರಯಾಣಿಕರ ಸೋಗಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಲಗೇಜ್ ಬ್ಯಾಗ್ ಮೂಲಕ ಹೊರ ರಾಜ್ಯದಿಂದ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ವೇಳೆ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ 6.5 ಲಕ್ಷ ರೂಪಾಯಿ ಮೌಲ್ಯದ 21.5 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.
ಬಂಧಿತರು ತ್ರಿಪುರ ಮತ್ತು ಬಿಹಾರದಿಂದ ಡ್ರಗ್ಸ್ ಸಾಗಾಟ ನಡೆಸುತ್ತಿದ್ದರು. ಗಾಂಜಾವನ್ನು ಪ್ಯಾಕೇಟ್ ಮಾದರಿಯಲ್ಲಿ ಸಿದ್ಧಪಡಿಸಿ ಬಳಿಕ ಆ ಪ್ಯಾಕೇಟ್ಗಳನ್ನು ಲಗೇಜ್ ಬ್ಯಾಗ್ಗಳಲ್ಲಿಟ್ಟು ಸಾಗಾಟ ಮಾಡುತ್ತಿದ್ದರು.
ಪ್ರಯಾಣಿಕರ ಸೋಗಿನಲ್ಲಿ ಹೊರ ರಾಜ್ಯದಿಂದ ಬೆಂಗಳೂರಿಗೆ ಬಂದು ಸಾರ್ವಜನಿಕವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ 6.5 ಲಕ್ಷ ರೂ. ಮೌಲ್ಯದ 21.5 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಈ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.