Sat,May18,2024
ಕನ್ನಡ / English

ಪೊಲೀಸ್ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವು; ಪೊಲೀಸ್ ಠಾಣೆ ಮುಂದೆ ಧರಣಿ,ಆಕ್ರೋಶ | ಜನತಾ ನ್ಯೂಸ್

02 Aug 2021
2412

ಬೆಂಗಳೂರು : ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿ ಜೆ.ಸಿ.ನಗರ ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆಯೋರ್ವ ಸಾವನ್ನಪ್ಪಿದ್ದಾನೆ. ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾನೆ.

ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಆಫ್ರಿಕನ್ ಪ್ರಜೆ ಏಕಾಏಕಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಆತನ ಸ್ನೇಹಿತರು, ಸಂಬಂಧಿಕರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನ ಜೆ.ಸಿ. ನಗರ ಠಾಣೆ ಎದುರು ನಡೆದಿದೆ.

janata


ಪೊಲೀಸರ ದೌರ್ಜನ್ಯದಿಂದಲೇ ತಮ್ಮ ಸ್ನೇಹಿತ ಹಾಗೂ ಸಂಬಂಧಿ ಸಾವನ್ನಪ್ಪಿದ್ದಾನೆ. ಪೊಲೀಸರು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿ ಆಫ್ರಿಕನ್ ಪ್ರಜೆಗಳು ಜೆ.ಸಿ ನಗರ ಠಾಣೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಡ್ರಗ್ಸ್​ ಕೇಸ್​ನಲ್ಲಿ ವಿದೇಶಿ ಪ್ರಜೆ ಜೋಯೆಲ್ ಮಲು ಎಂಬಾತನನ್ನು ಜೆಸಿ ನಗರ ಪೊಲೀಸರು, 5ಗ್ರಾಂ ಎಂಡಿಎಂ ಡ್ರಗ್ಸ್ ಜೊತೆಗೆ ಆಫ್ರಿಕನ್ ಪ್ರಜೆಯನ್ನು ವಶಕ್ಕೆ ಪಡೆದಿದ್ದರು ಈ ವೇಳೆ ಎದೆ ನೋವು, ಶೀತ ಅಂತ ಹೇಳಿದ್ದ ಜೋಯೆಲ್​ ಹೇಳಿದ್ದಕ್ಕೆ ಕೂಡಲೇ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಅಷ್ಟರಲ್ಲಿ ಆತ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು.

ಮೃತ ಜೋಯೆಲ್ ಮಲು ಕೆ.ಆರ್ ಪುರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. 2015ರ ಜುಲೈ 20ರಂದು ಸ್ಟೂಡೆಂಟ್ ವೀಸಾ ಪಡೆದು ಇಲ್ಲಿಗೆ ಬಂದಿದ್ದ. ಆದರೆ, 2017ರ ಡಿಸೆಂಬರ್​ 13ರಂದು ವೀಸಾ ಅವಧಿ ಮುಕ್ತಾಯವಾಗಿದೆ ಎಂದು ಗೊತ್ತಾಗಿದೆ ಎನ್ನಲಾಗಿದೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...