Sun,May19,2024
ಕನ್ನಡ / English

ಭ್ರಷ್ಟಾಚಾರ ಆರೋಪ: ಬಿಎಸ್‌ವೈ, ವಿಜಯೇಂದ್ರ ಸೇರಿ ಮತ್ತಿತರರಿಗೆ ಹೈಕೋರ್ಟ್‌ ನೋಟಿಸ್‌ | ಜನತಾ ನ್ಯೂಸ್

03 Aug 2021
1883

ಬೆಂಗಳೂರು : ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಪುತ್ರ ಬಿ.ವೈ. ವಿಜಯೇಂದ್ರ ಹಾಗೂ ಮತ್ತಿತರರ ವಿರುದ್ಧ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಭ್ರಷ್ಟಾಚಾರ ಕುರಿತಂತೆ ತನಿಖೆ ಕೋರಿ ಸಲ್ಲಿಸಿದ್ದ ಖಾಸಗಿ ದೂರನ್ನು ವಜಾಗೊಳಿಸಿರುವ ಜನಪ್ರತಿನಿಧಿಗಳ ವಿಚಾರಣಾ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೂರುದಾರ ಟಿ.ಜೆ. ಅಬ್ರಹಾಂ ಹೈಕೋರ್ಟ್‍ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಇಂದು ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ, ಸುನಿಲ್ ದತ್ ಯಾದವ್ ಅವರಿದ್ದ ಪೀಠ ಮಾಜಿ ಸಿಎಂ ಬಿಎಸ್ ವೈ, ಪುತ್ರ ವಿಜಯೇಂದ್ರ, ಆಪ್ತರಾದ ಶಶಿಧರ್ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಎಸ್.ಟಿ.ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ.ಸಿ.ಪ್ರಕಾಶ್, ಕೆ. ರವಿ ಹಾಗೂ ವಿರೂಪಾಕ್ಷಪ್ಪ ಯಮಕನಮರಡಿ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಆಗಸ್ಟ್ ಎರಡನೆ ವಾರಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ :
ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಹಾಗೂ ಇತರೆ ಆಪ್ತರು ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸಿಎಂ ಕುಟುಂಬದವರು ನಕಲಿ ಕಂಪೆನಿಗಳಲ್ಲಿ ಹೂಡಿಕೆ ಮಾಡಿದ್ದಾರೆ.

ಸರಕಾರದ ವಿವಿಧ ಯೋಜನೆಗಳಲ್ಲಿ ಕೋಟ್ಯಂತರ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಆರೋಪಿಸಿದ್ದರು. ಅಲ್ಲದೇ, ಇವರ ವಿರುದ್ಧ ತನಿಖೆ ನಡೆಸುವಂತೆ 2020ರ ನವೆಂಬರ್ 19ರಂದುಭ್ರಷ್ಟಾಚಾರನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದ್ದರು. ಆದರೆ, ಎಸಿಬಿ ಅಧಿಕಾರಿಗಳು 2020ರ ಡಿಸೆಂಬರ್ 15ರಂದು ದೂರು ಕೈಬಿಟ್ಟಿದ್ದರು.

ಆ ಬಳಿಕ 2021ರ ಜೂನ್ 6ರಂದು ವಿಶೇಷ ನ್ಯಾಯಾಲಯದಲ್ಲಿ ಪಿಸಿಆರ್ ದಾಖಲಿಸಿದ್ದ ಟಿ.ಜೆ.ಅಬ್ರಹಾಂ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಬಿ.ವೈ.ವಿಜಯೇಂದ್ರ ಹಾಗೂ ಆಪ್ತರಾದ ಶಶಿಧರ ಮರಡಿ, ವಿರೂಪಾಕ್ಷಪ್ಪ ಯಮಕನಮರಡಿ, ಸಂಜಯಶ್ರೀ, ಚಂದ್ರಕಾಂತ್ ರಾಮಲಿಂಗಂ, ಸಚಿವ ಎಸ್.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ ಡಾ.ಜಿ.ಸಿ ಪ್ರಕಾಶ್, ಕ್ರೆಸೆಂಟ್ ಹೊಟೇಲ್ ಮಾಲಕರಾದ ಕೆ.ರವಿ ವಿರುದ್ಧಭ್ರಷ್ಟಾಚಾರತಡೆ ಕಾಯ್ದೆಯ ಸೆಕ್ಷನ್ 7, 8, 9, 10, 13 ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 383, 384, 415, 418, 420 ಹಾಗೂ 120 ಬಿ ಅಡಿ ಎಫ್‍ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸೂಕ್ತ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಕೋರಿದ್ದರು. ಆದರೆ, ವಿಶೇಷ ನ್ಯಾಯಾಲಯ ಆರೋಪಿತರಾದ ಬಿಎಸ್‍ವೈ ಮತ್ತಿತರರ ವಿರುದ್ಧ ತನಿಖೆಗೆ ಪೂರ್ವಾನುಮತಿ ಪಡೆದಿಲ್ಲವೆಂದು ಅರ್ಜಿಯನ್ನು ವಜಾಗೊಳಿಸಿತ್ತು.

RELATED TOPICS:
English summary :BSYediyurappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...