ಸಿಎಂ ಬೊಮ್ಮಾಯಿ ಸಂಪುಟ ರಚನೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ : ನಾಳೆ ಸಂಜೆ 5ಕ್ಕೆ ನೂತನ ಸಚಿವರ ಪ್ರಮಾಣವಚನ | ಜನತಾ ನ್ಯೂಸ್
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಗೆ ಮುಹೂರ್ತ ಕೊನೆಗೂ ನಿಗದಿಯಾಗಿದೆ. ಆಗಸ್ಟ್ 4ರ (ಬುಧವಾರ) ನಾಳೆ ಸಂಜೆ 5 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ಇದೇ ಆಗಸ್ಟ್ 5 ರಂದು ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ ಎಂದು ಹೇಳಲಾಗಿದೆ.
ಒಂದೇ ಬಾರಿಗೆ ಸಂಪುಟ ವಿಸ್ತರಣೆ ಮಾಡಿ ಮುಗಿಸಲು ಹೈಕಮಾಂಡ್ ತೀರ್ಮಾನ ಮಾಡಿದ್ದು ಮೊದಲ ಹಂತದಲ್ಲಿ 25 ರಿಂದ 30 ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದೂ ಹೇಳಲಾಗಿದೆ.
ವರಿಷ್ಠರು ಇಂದೇ ನೂತನ ಸಚಿವರ ಪಟ್ಟಿ ಪ್ರಕಟಿಸುತ್ತಾರೆ. ನಂತರ ಸಚಿವರ ಪ್ರಮಾಣ ವಚನ ದಿನಾಂಕ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕರ್ನಾಟಕ ರಾಜ್ಯದ ನೂತನ ಸಚಿವ ಸಂಪುಟದ ಪಟ್ಟಿ ಕೊನೆಗೂ ಅಂತಿಮಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಷ್ಟ್ರೀಯ ಘಟಕದ ನಾಯಕರು ಸುದೀರ್ಘ ಸಮಾಲೋಚನೆಯ ನಂತರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.