Sat,May18,2024
ಕನ್ನಡ / English

22 ಅಕ್ರಮ ಕಲ್ಲು ಗಣಿಗಾರಿಕೆಗಳ ಪರವಾನಗಿ ರದ್ದು, 33 ಕ್ರಷರ್‌ ಅನುಮತಿ ರದ್ದು | ಜನತಾ ನ್ಯೂಸ್

03 Aug 2021
2821

ಮಂಡ್ಯ : ಕಲ್ಲು ಗಣಿಗಾರಿಕೆಗೆ ಪರಿಸರ ಅನುಮೋದನಾ ಪತ್ರ ಪಡೆಯದ ಜಿಲ್ಲೆಯ 11 ಗಣಿಗುತ್ತಿಗೆ ಹಾಗೂ ನಿಯಮ ಉಲ್ಲಂಘಿಸಿದ 33 ಕ್ರಷರ್‌ಗಳ ಪರವಾನಗಿ ರದ್ದುಗೊಳಿಸಿ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಹಾಗೂ ಜಿಲ್ಲಾ ಕಲ್ಲುಪುಡಿ ಘಟಕಗಳ ಅನುಮತಿ ಮತ್ತು ನಿಯಂತ್ರಣ ಪ್ರಾಧಿಕಾರ ಆದೇಶ ಹೊರಡಿಸಿವೆ.

ಪಾಂಡವಪುರ ತಾಲ್ಲೂಕು ಬೇಬಿ ಬೆಟ್ಟದ ಕಾವಲು ಗ್ರಾಮದ ವ್ಯಾಪ್ತಿಯಲ್ಲಿನ 11 ಕ್ರಷರ್ ಘಟಕಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ರವರು ಜುಲೈ 28 ರಂದು ನಡೆದ ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಸಭೆಯ ತೀರ್ಮಾನದಂತೆ ರದ್ದುಪಡಿಸಿರುತ್ತಾರೆ.

ಹಿರಿಯ ಭೂವಿಜ್ಞಾನಿ ಮತ್ತು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ಇವರು ಕ್ರಷರ್ ಪರವಾನಿಗೆಗೆ ಸಹಿ ಮಾಡಿ ವಿತರಿಸಿರುವ ಕ್ರಷರ್ ಪರವಾನಿಗೆಗಳನ್ನು ಜುಲೈ 28 ರಂದು ನಡೆದ ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಸಭೆಯಲ್ಲಿ ರದ್ದುಪಡಿಸಲು ತೀರ್ಮಾನಿಸಲಾಗಿದ್ದು, ಅದರಂತೆ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ, ಮಂಡ್ಯ ಜಿಲ್ಲೆ ರವರು 22 ಕ್ರಷರ್‌ಗಳ ಕ್ರಷರ್‌ ಪರವಾನಿಗೆ ( ಫಾರಂ- A ) ಯನ್ನು ರದ್ದುಪಡಿಸಿರುತ್ತಾರೆ .

ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ನಾಗಮಂಗಲ ತಾಲ್ಲೂಕುಗಳಲ್ಲಿ ಅನಧಿಕೃತ ಕಲ್ಲುಗಣಿಗಾರಿಕೆ, ಸಾಗಾಣಿಕೆ ನಿಯಂತ್ರಣ ಸಂಬಂಧ ಚಾಲಿತ ದಳವನ್ನು ರಚಿಸಲಾಗಿದೆ. ಅದರಂತೆ ಚಾಲಿತ ದಳವು ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯಾದ್ಯಂತ 11 ಚೆಕ್‌ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಎಲ್ಲಾ ತಾಲ್ಲೂಕುಗಳಲ್ಲಿ ನಡೆಯುತ್ತಿರುವ ಅನಧಿಕೃತ ಉಪಖನಿಜ ಗಣಿಗಾರಿಕೆ, ಸಾಗಾಣಿಕೆ ಹಾಗೂ ಕ್ರಷರ್ ಘಟಕಗಳ ಕಾರ್ಯನಿರ್ವಹಣೆ ಸಂಬಂಧ ಅತೀ ಹೆಚ್ಚು ದೂರು ಬರುತ್ತಿರುವ ಗ್ರಾಮಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಿ ಕಂದಾಯ, ಅರಣ್ಯ, ಪಂಚಾಯತ್ ರಾಜ್, ಪ್ರಾದೇಶಿಕ ಸಾರಿಗೆ, ಪೊಲೀಸ್ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡಂತೆ ಜಂಟಿ ತಂಡಗಳನ್ನು ರಚನೆ ಮಾಡಲಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಮಂಡ್ಯ ಜಿಲ್ಲೆಯಾದ್ಯಂತ ಅನಧಿಕೃತ ಉಪಖನಿಜ ಗಣಿಗಾರಿಕೆ, ದಾಸ್ತಾನು ಸಂಬಂಧ 12 ಪಿ. ಸಿ.ಆರ್. ಗಳನ್ನು ಸಂಬಂಧಿಸಿದ ನ್ಯಾಯಾಲಯಗಳಲ್ಲಿ ದಾಖಲಿಸಲಾಗಿದ್ದು, ಇನ್ನೂ ಹಲವಾರು ಪ್ರಕರಣಗಳನ್ನು ದಾಖಲಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ. ಅನಧಿಕೃತ ಉಪಖನಿಜ ಸಾಗಾಣಿಕೆ ಸಂಬಂಧ ಏಪ್ರಿಲ್ 2021 ರಿಂದ ಇಲ್ಲಿಯವರೆಗೆ ಒಟ್ಟು 119 ವಾಹನಗಳಿಂದ 33.73 ಲಕ್ಷಗಳನ್ನು ಸಂಗ್ರಹಿಸಲಾಗಿರುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪದ್ಮಜಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED TOPICS:
English summary :Mandya

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...