Tue,May07,2024
ಕನ್ನಡ / English

ಬರಗೆಟ್ಟ ಪಾಕಿಸ್ತಾನ : ಪ್ರಧಾನಿ ಅಧಿಕೃತ ನಿವಾಸ ಬಾಡಿಗೆಗೆ ನೀಡಲು ಇಮ್ರಾನ್ ಖಾನ್ ಸರ್ಕಾರ ಆದೇಶ | ಜನತಾ ನ್ಯೂಸ್

03 Aug 2021
2282

ಇಸ್ಲಾಮಾಬಾದ್ : ಯಾವಾಗಲೂ ಭಾರತದ ವಿರುದ್ಧ ದ್ವೇಷದಿಂದ ಷಡ್ಯಂತ್ರ ರಚಿಸುತ್ತ, ಭಯೋತ್ಪಾದಕ ಚಟುವಟಿಕೆಗೆ ಹಾಗೂ ಶಸ್ತ್ರಾಸ್ತ್ರಗಳ ಪೂರೈಕೆಗೆ ಹಣದ ಹೊಳೆ ಹರಿಸುವ ಪಾಕಿಸ್ತಾನದ ರಾಜಕೀಯ ನಾಯಕರ ಭೃಷ್ಟಾಚಾರದಿಂದ ದಿನೇದಿನೇ ತೀವ್ರ ಅರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದೆ.

ಪ್ರಧಾನಿ ಅಧೀಕೃತ ನಿವಾಸವನ್ನೇ ಬಾಡಿಗೆಗೆ ನೀಡುವ ಮೂಲಕ ಖಾಲಿಯಾಗಿರುವ ಖಜಾನೆಗೆ ಒಂದಷ್ಟು ಹಣ ಹೊಂದಿಸುವ ಹಾಗೂ ಹಣಕಾಸು ವ್ಯವಸ್ಥೆ ಸರಿದೂಗಿಸಲು ಪ್ರಯತ್ನ ನಡೆಸಿದೆ.

ಭಾರೀ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಹಣವನ್ನು ಕಲ್ಯಾಣ ಯೋಜನೆಗಳಿಗೆ ಬಳಸಿಕೊಳ್ಳಲು, ಪಿಟಿಐ ಸರ್ಕಾರ ಇಮ್ರಾನ್ ಖಾನ್ ಪಿಎಂ ಹೌಸ್ ನಲ್ಲಿ ವಾಸಿಸುವುದಿಲ್ಲ ಮತ್ತು ರಾಜ್ಯಪಾಲರು ರಾಜ್ಯಪಾಲರ ಮನೆಗಳಲ್ಲಿ ಉಳಿಯುವುದಿಲ್ಲ, ಎಂದು ಘೋಷಿಸಿದೆ.

ಬದಲಿಗೆ, ಪಾಕಿಸ್ತಾನ ಪ್ರಧಾನಿ ನಿವಾಸವನ್ನು ಬಾಡಿಗೆಗೆ ನೀಡುವುದಾಗಿ, ಪ್ರಧಾನಿ ಕಾರ್ಯಾಲಯ ಹೊಸದಾಗಿ ಹೊರಡಿಸಿರುವ ಪ್ರಕಟಣೆಯಲ್ಲಿ ಹೇಳಿದೆ. ಆರ್ಥಿಕ ಸಂಕಷ್ಟ ಸರಿದೂಗಿಸಲು ಪಾಕಿಸ್ತಾನ ಸರ್ಕಾರ ಈ ರೀತಿ ತಂತ್ರಕ್ಕೆ ಇಳಿದಿರುವುದು ಇದೇ ಮೊದಲಲ್ಲ. ಕತ್ತೆ ವ್ಯಾಪಾರ ಸೇರಿದಂತೆ ಹಲವು ಮೂಲಗಳಿಂದ ಹಣ ಹೊಂದಿಸುವ ಕಾರ್ಯಕ್ಕೆ ಕೈಹಾಕಿದೆ. ಇದೀಗ ಬಾಡಿಗೆ ಮೂಲಕ ಹಣ ಪಡೆಯಲು ಮುಂದಾಗಿದೆ.

ಶಿಕ್ಷಣ ಸಚಿವ ಶಫ್ಕತ್ ಮೆಹಮೂದ್ ಅವರು ಪಿಎಂ ಮನೆಯನ್ನು ನಿರ್ವಹಿಸಲು 470 ಮಿಲಿಯನ್ ವೆಚ್ಚವಾಗಿದೆ ಎಂದು ತಿಳಿಸಿದ್ದರು, ಹಾಗಾಗಿ ಖಾನ್ ನಿವೇಶನಗಳನ್ನು ಖಾಲಿ ಮಾಡಲು ನಿರ್ಧರಿಸಿದರು ಮತ್ತು ಸದನವನ್ನು ಉನ್ನತ ಮಟ್ಟದ ಶಿಕ್ಷಣ ಸಂಸ್ಥೆಯನ್ನಾಗಿ ಮಾಡಲು ಆದೇಶಿಸಿದರು.

ಲಾಹೋರ್‌ನಲ್ಲಿರುವ ಗವರ್ನರ್ ಹೌಸ್ ಅನ್ನು ಮ್ಯೂಸಿಯಂ ಮತ್ತು ಆರ್ಟ್ ಗ್ಯಾಲರಿಯನ್ನಾಗಿ ಮಾಡಲಾಗುವುದು, ಮುರ್ರಿಯಲ್ಲಿರುವ ಪಂಜಾಬ್ ಹೌಸ್ ಅನ್ನು ಪ್ರವಾಸಿ ಸಂಕೀರ್ಣವಾಗಿ ಮತ್ತು ಕರಾಚಿಯಲ್ಲಿರುವ ಗವರ್ನರ್ ಹೌಸ್ ಅನ್ನು ಮ್ಯೂಸಿಯಂ ಆಗಿ ಬಳಸಲಾಗುವುದು ಎಂದು ಮೆಹಮೂದ್ ಮಾಹಿತಿ ನೀಡಿದ್ದರು.

ಪ್ರಧಾನಿ ನಿವಾಸವನ್ನು ವಿದ್ಯಾಸಂಸ್ಥೆಯನ್ನಾಗಿ ಪರಿವರ್ತಿಸಲು ಪಾಕಿಸ್ತಾನ ಸರ್ಕಾರ ಹಣದ ಕೊರತೆ ಎದುರಿಸಿತು. ಹೀಗಾಗಿ 2019ರಲ್ಲಿ ಈ ನಿವಾಸವನ್ನು ಮದುವೆ ಸೇರಿದಂತೆ ಸಮಾರಂಭಗಳ ಹಾಲ್ ಆಗಿ ಪರಿವರ್ತಿಸಲಾಯಿತು. 2019ರಲ್ಲಿ ಪಾಕಿಸ್ತಾನ ಸೇನಾ ಬ್ರಿಗೇಡಿಯರ್ ವಾಸೀಮ್ ಪುತ್ರಿ ಮದುವೆ ಸೇರಿದಂತೆ ಹಲವು ರಾಜಕೀಯ ನಾಯಕರ ಮದುವೆಗೆ ಪಾಕಿಸ್ತಾನಿ ಪ್ರಧಾನಿ ನಿವಾಸ ಸಾಕ್ಷಿಯಾಗಿತ್ತು.

2019ರಲ್ಲಿ ಪ್ರಧಾನಿ ನಿವಾಸ ಒಂದಷ್ಟು ಆದಾಯ ತಂದಿದ್ದು ಸುಳ್ಳಲ್ಲ. ಆದರೆ 2020ರಲ್ಲಿ ಕೊರೋನಾ ವಕ್ಕರಿಸಿತು. ಪರಿಣಾಮ ಮದುವೆ ಸಮಾರಂಭಗಳೆಲ್ಲಾ ನಿಂತು ಹೋಯಿತು. ಇತ್ತ ಪ್ರಧಾನಿ ನಿವಾಸದಿಂದ ಬರುತ್ತಿದ್ದ ಆದಾಯವೂ ನಿಂತು ಹೋಯಿತು. ಕಳೆದೊಂದು ವರ್ಷದಿಂದ ಪ್ರಧಾನಿ ನಿವಾಸದಲ್ಲಿ ಯಾವ ಸಮಾರಂಭ ನಡೆದಿಲ್ಲ.

ಬರುತ್ತಿದ್ದ ಆದಾಯಕ್ಕೆ ಕತ್ತರಿ ಬಿದ್ದ ಕಾರಣ ಇದೀಗ ಪ್ರಧಾನಿ ನಿವಾಸವನ್ನು ಬಾಡಿಗೆಗೆ ನೀಡಲು ಪ್ರಧಾನಿ ಇಮ್ರಾನ್ ಖಾನ್ ನಿರ್ಧರಿಸಿದ್ದಾರೆ. ಈಗಾಗಲೇ ಬಾಡಿಗೆಗೆ ಪ್ರಕಟಣೆ ಹೊರಡಿಸಲಾಗಿದೆ. ಕೊರೋನಾ ಸಂಕಷ್ಟದಲ್ಲಿ ದುಬಾರಿ ಮೊತ್ತಕ್ಕೆ ಯಾರು ಬಾಡಿಗೆ ಪಡೆಯುತ್ತಾರೆ ಅನ್ನೋ ಪ್ರಶ್ನೆಯೂ ಇದೀಗ ಎದುರಾಗಿದೆ.

RELATED TOPICS:
English summary :bankrupt Pakistan : Imran Khan govt ordered to rent PM residence

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...