Sat,Apr27,2024
ಕನ್ನಡ / English

ಶಾಸಕ ಜಮೀರ್ ಅಹಮ್ಮದ್ ಐಷಾರಾಮಿ ಮನೆ, ಕಚೇರಿಗಳ ಮೇಲೆ ಐಟಿ ದಾಳಿ | ಜನತಾ ನ್ಯೂಸ್

05 Aug 2021
2768

ಬೆಂಗಳೂರು : ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್​ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ.

ಬೆಂಗಳೂರಿನ ಕಂಟೋನ್ಮೆಂಟ್‌ ರೈಲು ನಿಲ್ದಾಣ ಬಳಿಯಿರುವ ಮನೆಯ ಮೇಲೆ ಬೆಳಗ್ಗೆ 6 ಗಂಟೆಗೆ ಐಟಿ ದಾಳಿ ನಡೆದಿದೆ. ಕಂಟೋನ್ಮೆಂಟ್‌ ರೈಲು ನಿಲ್ದಾಣ ಬಳಿಯಿರುವ ಹೊಸ ಮನೆ ಹಾಗೂ ಅವರ ಒಡೆತನದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್​ ಮೇಲೆ ದಾಳಿ ನಡೆದಿದೆ.

ಬೆಂಗಳೂರಿನ ಕಂಟೋನ್ಮೆಂಟ್‌ ರೈಲು ನಿಲ್ದಾಣದ ಬಳಿಯಿರುವ ಮನೆಯ ಮೇಲೆ ಬೆಳಗ್ಗೆ 6 ಗಂಟೆಗೆ ಸುಮಾರು 15 ಮಂದಿ ಐಟಿ ಅಧಿಕಾರಿಗಳು ಆಗಮಿಸಿದ್ದು ಸತತವಾಗಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ರಿಚ್ಮಂಡ್​ ಟೌನ್​ನ ಖಾಸಗಿ ಹೋಟೆಲಿನಲ್ಲಿ ಎರಡು ದಿನಗಳಿಂದ ತಂಗಿದ್ದ ಐಟಿ ಅಧಿಕಾರಿಗಳು 25 ಇನ್ನೋವಾ ಕಾರುಗಳಲ್ಲಿ ಇಂದು ಬೆಳಗಿನ ಜಾವ 5 ಗಂಟೆಗೆ ದಾಳಿ ನಡೆಸಿದ್ದಾರೆ. ತದನಂತರ, ಬೆಂಗಳೂರಿನ ಇತರೆ ಐಟಿ ಅಧಿಕಾರಿಗಳೂ ಇವರಿಗೆ ಕೈಜೋಡಿಸಿದ್ದಾರೆ.

janata

ಐಟಿ ದಾಳಿ ಇಂದು ಮತ್ತು ನಾಳೆಯೂ ನಡೆಯುವ ಅಂದಾಜಿದೆ. ಈ ಮಧ್ಯೆ ಬೆಂಗಳೂರು ಪೊಲೀಸರು ಐಟಿ ಅಧಿಕಾರಿಗಳಿಗೆ ಸಾಥ್​ ನೀಡಿದ್ದು, ಭಾರೀ ಪ್ರಮಾಣದಲ್ಲಿ ಬಿಗಿ ಬಂದೋಬಸ್​ ಮಾಡಲಾಗಿದೆ. ಭದ್ರತೆಗೆ 200ಕ್ಕೂ ಹೆಚ್ಚು CRPF ಪೊಲೀಸರ ನಿಯೋಜನೆ ಮಾಡಲಾಗಿದೆ.

ಜಮೀರ್ ಅಹಮದ್​ ನಗರದ ಹಲವೆಡೆ ಆಸ್ತಿ ಹೊಂದಿದ್ದಾರೆ. ಇನ್ನು ಚಾಮರಾಜಪೇಟೆಯಲ್ಲಿರೋ ಜಮೀರ್ ಅಹ್ಮದ್ ಆಫೀಸ್ ಮೇಲೂ ದಾಳಿ ನಡೆಯುವ ಸಾಧ್ಯತೆ ಇದ್ದು, ಸದ್ಯ ಕಚೇರಿ ಕ್ಲೋಸ್ ಆಗಿದೆ. ಬೆಂಗಳೂರು ಮತ್ತು ದೆಹಲಿಯ ನಾಲ್ಕು ತಂಡಗಳು ಈ ದಾಳಿ ನಡೆಸಿ, ಶೋಧ ಕಾರ್ಯದಲ್ಲಿ ತೊಡಗಿವೆ. ಕಳೆದ ಮೂರು ವರ್ಷಗಳಲ್ಲಿ ಜಮೀರ್ ಕಟ್ಟಿರುವ ತೆರಿಗೆ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

ದೆಹಲಿಯಿಂದ ಬಂದಿರುವ 45 ಐಟಿ ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ. ವಸಂತನಗರದ ಜಮೀರ್ ಹಳೇ ನಿವಾಸ, ಬಂಬೂ ಬಜಾರ್ ನ ನಿವಾಸ, ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದ ಜಮೀರ್ ಆಪ್ತನ ನಿವಾಸ ಹಾಗೂ ಜಮೀರ್ ಪಿ.ಎ ಮನೆ ಸೇರಿ 6 ಕಡೆ ದಾಳಿ ನಡೆದಿದೆ.

RELATED TOPICS:
English summary :Zameer Ahmed Khan

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...