Sun,May05,2024
ಕನ್ನಡ / English

41 ವರ್ಷಗಳ ಬಳಿಕ ಇತಿಹಾಸ ಬರೆದ ಭಾರತ, ಜರ್ಮನಿ ಮಣಿಸಿ ಕಂಚಿನ ಪದಕ ಗೆದ್ದ ಭಾರತ ಪುರುಷರ ಹಾಕಿ ತಂಡ! | ಜನತಾ ನ್ಯೂಸ್

05 Aug 2021
2481

ಟೋಕಿಯೋ : ಭಾರತದ ಪುರುಷರ ಹಾಕಿ ತಂಡ 41 ವರ್ಷದ ಬಳಿಕ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದುಕೊಂಡಿದೆ. ಜರ್ಮನಿ ತಂಡವನ್ನು 5-4 ಅಂತರದಿಂದ ಸೋಲಿಸಿ ಕಂಚಿನ ಪದಕವನ್ನು ತನ್ನದಾಗಿಸಿಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದೆ.

ಬರೋಬ್ಬರಿ ನಾಲ್ಕು ದಶಕಗಳ ಬಳಿಕ ಒಲಿಂಪಿಕ್ಸ್ ಪುರುಷ ಹಾಕಿ ವಿಭಾಗದಲ್ಲಿ ಭಾರತ ಪದಕ ಗೆದ್ದ ಸಾಧನೆ ಮಾಡಿದ್ದು, ಜರ್ಮನಿ ತಂಡವನ್ನು ಮಣಿಸಿ ಕಂಚಿನ ಪದಕಕ್ಕೆ ಮುತ್ತಿಟ್ಟಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಗುರುವಾರ ನಡೆದ ಮೂರನೇ ಸ್ಥಾನಕ್ಕಾಗಿ ಹೋರಾಟದಲ್ಲಿ ಭಾರತ ತಂಡವು ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸಿ ಕಂಚಿನ ಪದಕ ಜಯಿಸಿದೆ.

1980ರ ಮಾಸ್ಕೋದಲ್ಲಿ ನಡೆದ ಒಲಿಂಪಿಕ್ಸ್ ಭಾರತ ಪದಕ ಪಡೆದುಕೊಂಡಿತ್ತು. ಅಂದು ವಾಸುದೇವನ್ ಭಾಸ್ಕರ್ ನಾಯಕತ್ವದಲ್ಲಿ ಆಡಿದ್ದ ಟೀಂ ಇಂಡಿಯಾ ಚಿನ್ನಕ್ಕೆ ಮುತ್ತಿಕ್ಕಿತ್ತು. ಇಂದು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

ಟೋಕಿಯೊ ಒಲಂಪಿಕ್ಸ್ ನಲ್ಲಿ ಜರ್ಮನಿ ತಂಡವನ್ನು ಮಣಿಸಿ 41 ವರ್ಷದ ಬಳಿಕ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಶುಭ ಹಾರೈಸಿದ್ದಾರೆ.

ಇತಿಹಾಸ ನಿರ್ಮಿಸಿರುವ ಭಾರತ ತಂಡಕ್ಕೆ ಶುಭ ಕೋರಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿ "41 ವರ್ಷಗಳ ನಂತರ ಹಾಕಿಯಲ್ಲಿ ಒಲಿಂಪಿಕ್ ಪದಕ ಗೆದ್ದ ಪುರುಷರ ಹಾಕಿ ತಂಡಕ್ಕೆ ಅಭಿನಂದನೆಗಳು. ತಂಡವು ಅಸಾಧಾರಣ ಕೌಶಲ್ಯ, ಮತ್ತು ಗೆಲ್ಲುವ ದೃಢ ನಿರ್ಧಾರವನ್ನು ತೋರಿಸಿದೆ. ಈ ಐತಿಹಾಸಿಕ ವಿಜಯವು ಹಾಕಿಯಲ್ಲಿ ಹೊಸ ಯುಗವನ್ನು ಪ್ರಾರಂಭಿಸುತ್ತದೆ ಮತ್ತು ಯುವಜನರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಸ್ಫೂರ್ತಿ ನೀಡುತ್ತದೆ" ಎಂದು ಹೇಳಿದ್ದಾರೆ. .

ಇನ್ನು ಪ್ರಧಾನಿ ಮೋದಿ ಟ್ವೀಟ್ ಮಾಡಿ, ಐತಿಹಾಸಿಕ! ಪ್ರತಿಯೊಬ್ಬ ಭಾರತೀಯನ ನೆನಪಿನಲ್ಲಿ ಉಳಿಯುವಂತಹ ದಿನ. ಕಂಚಿ ಪದಕವನ್ನು ಮನೆಗೆ ತಂದ ನಮ್ಮ ಪುರುಷರ ಹಾಕಿ ತಂಡಕ್ಕೆ ಅಭಿನಂದನೆಗಳು. ನಮ್ಮ ಹಾಕಿ ತಂಡದ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತ್ವಯೇತ್ ಮಾಡಿ ನಾಲ್ಕು ದಶಕಗಳ ನಂತರ, ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪುರುಷರ ಹಾಕಿಯಲ್ಲಿ ದೇಶಕ್ಕೆ ಕಂಚಿನ ಪದಕ ಗೆದ್ದ ಭಾರತೀಯ ಹಾಕಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು! ಕಠಿಣ ಜಾಗತಿಕ ಪರಿಸ್ಥಿತಿಗಳಲ್ಲಿಯೂ, ನೀವು ಕಷ್ಟಪಟ್ಟು ಕೆಲಸ ಮಾಡಿದ್ದೀರಿ, ತರಬೇತಿ ಪಡೆದಿದ್ದೀರಿ, ದೇಶವು ನಿಮ್ಮ ನುರಿತ ಮತ್ತು ಹೋರಾಟದ ಆಟದ ಬಗ್ಗೆ ಹೆಮ್ಮೆ ಪಡುತ್ತದೆ. ನನ್ನ ಶುಭಾಶಯಗಳು ಎಂದು ಹೇಳಿದ್ದಾರೆ.

RELATED TOPICS:
English summary :Congratulations Team India on rewriting history! An Olympic medal after 41 years! What a match, what a comeback! #Tokyo2020

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...