Fri,May03,2024
ಕನ್ನಡ / English

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂಸ್

05 Aug 2021
2104

ಚಿಕ್ಕಬಳ್ಳಾಪುರ : ತಮ್ಮ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ಶ್ರೀ ಸಾಯಿ ಕೃಷ್ಣ ಚಾರಿಟಬಲ್ ಟ್ರಸ್ಟ್‌ನಿಂದ "ಆಸರೆ" ಕಾರ್ಯಕ್ರಮದಡಿ 1 ಲಕ್ಷ ರೂ. ಸಹಾಯಧನ ವಿತರಣೆ ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ. ಸುಧಾಕರ್ ಭಾಗವಹಿಸಿ, ಕೋವಿಡ್‌ನಿಂದ ನೊಂದ ಕುಟುಂಬಗಳ ಮನೆಗೆ ಭೇಟಿ ನೀಡಿ, ಪರಿಹಾರದ ಮೊತ್ತವನ್ನು ವಿತರಿಸಿ ಸಾಂತ್ವನ ಹೇಳಿದರು.

ನಂತರ ಮಾತನಾಡಿದ ಅವರು, "ಚಿಕ್ಕಬಳ್ಳಾಪುರ ಜನತೆಯ ಆಶೀರ್ವಾದದಿಂದ ಎರಡನೇ ಬಾರಿ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿದೆ. ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಕೋವಿಡ್ ನಿಯಂತ್ರಿಸುವ ಜವಾಬ್ದಾರಿ ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಭೆ ನಡೆಸಲಾಗಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಚಿಕ್ಕಬಳ್ಳಾಪುರದಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ. ಕಳೆದ 14 ದಿನಗಳಿಂದ ಪಾಸಿಟಿವಿಟಿ ದರ ಎರಡಂಕಿಯನ್ನೂ ದಾಟಿಲ್ಲ. ಮೂರನೇ ಅಲೆ ಆರಂಭದ ಮುನ್ಸೂಚನೆ ಕೆಲ ಜಿಲ್ಲೆಗಳಲ್ಲಿ ಕಂಡುಬರುತ್ತಿದೆ. ಆದರೆ ಅಂತಹ ಆತಂಕ ಪರಿಸ್ಥಿತಿ ಚಿಕ್ಕಬಳ್ಳಾಪುರದಲ್ಲಿ ಇಲ್ಲ" ಎಂದು ತಿಳಿಸಿದರು.

ಜಿಲ್ಲೆಯ ಗುಡಿಬಂಡೆ, ಬಾಗೇಪಲ್ಲಿ, ಚಿಂತಾಮಣಿ, ಗೌರಿಬಿದನೂರು, ಶಿಡ್ಲಘಟ್ಟ ತಾಲೂಕು ಕೇಂದ್ರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಆಕ್ಸಿಜನ್ ಘಟಕ ನಿರ್ಮಿಸಲಾಗಿದೆ. ಜಿಲ್ಲಾ ಕೇಂದ್ರದ ಹೊಸ ಆಸ್ಪತ್ರೆ ಹಾಗೂ ಹಳೆ ಆಸ್ಪತ್ರೆಯಲ್ಲಿ ಒಟ್ಟು ಎರಡು ಘಟಕ ಆರಂಭಿಸಲಾಗುತ್ತಿದೆ.

ಮಕ್ಕಳ ವಿಶೇಷ ನಿಗಾ ಘಟಕವನ್ನು ಜಿಲ್ಲೆಯಲ್ಲಿ ಆರಂಭಿಸಲು ಸಿದ್ಧತೆ ನಡೆದಿದ್ದು, ಅದಕ್ಕೆ ಬೇಕಾದ ವೆಂಟಿಲೇಟರ್‌ಗಳನ್ನು ಒಂದೆರಡು ದಿನಗಳಲ್ಲಿ ನೀಡಲಾಗುವುದು. ವೈದ್ಯರ ನೇರ ನೇಮಕಾತಿ ಮಾಡಿರುವುದರಿಂದ ಶೇ.90 ರಷ್ಟು ವೈದ್ಯರ ಕೊರತೆ ನೀಗಿದೆ, ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೂರದೃಷ್ಟಿಯ ನಾಯಕತ್ವ ಗುಣ ಹೊಂದಿದ್ದು, ರಾಜ್ಯವನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿಪಡಿಸುವ ಕನಸನ್ನು ಬಿಚ್ಚಿಟ್ಟಿದ್ದಾರೆ. ಈ ಸರ್ಕಾರದಿಂದ ಆರೋಗ್ಯ, ಶಿಕ್ಷಣ, ಕೈಗಾರಿಕೆಯ ಅಭಿವೃದ್ಧಿ, ಬಡವರ ಕಲ್ಯಾಣ, ಉದ್ಯೋಗ ಸೃಷ್ಟಿಯಾಗಲಿದೆ.

ಮೊದಲ ದಿನ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಘೋಷಿಸಿರುವುದೇ ಮುಖ್ಯಮಂತ್ರಿಗಳ ರೈತಪರ ಕಾಳಜಿ ತೋರಿಸಿದೆ. ಅದೇ ರೀತಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ವೇತನ ಹೆಚ್ಚಳದಿಂದ ಸಾಮಾಜಿಕ ಭದ್ರತೆ ದೊರೆತಿದೆ, ಎಂದು ಸಚಿವ ಕೆ.ಸುಧಾಕರ್ ಹೇಳಿದರು.

RELATED TOPICS:
English summary :Sudhakar

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...