Thu,May09,2024
ಕನ್ನಡ / English

ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂಸ್

05 Aug 2021
3049

ಶಿವಮೊಗ್ಗ : ಸಿದ್ದರಾಮಯ್ಯ ಕೆಟ್ಟ ಕನಸುಗಾರ. ಎಲ್ಲರಿಗೂ ಒಳ್ಳೆಯ ಕನಸು ಬಿದ್ದರೆ ಸಿದ್ದರಾಮಯ್ಯ ಅವರಿಗೆ ಕೆಟ್ಟ ಕನಸು ಬೀಳುತ್ತದೆ. ಅವರ ಕನಸು ಈ ಜನ್ಮದಲ್ಲಿ‌ ನನಸು ಆಗುವುದಿಲ್ಲ. ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲ್ಲ ಎಂದು ಕೆ.ಎಸ್​ ಈಶ್ವರಪ್ಪ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಪುಟ ರಚನೆ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಸಂಪುಟ ರಚನೆಯ ಎಲ್ಲಾ ಗೊಂದಲ ಬಗೆಹರಿದಿದೆ. ಸಣ್ಣ ಪುಟ್ಟ ಗೊಂದಲಗಳನ್ನು ಪಕ್ಷದ ವರಿಷ್ಠರು ಬಗೆಹರಿಸಲಿದ್ದಾರೆ. ಇನ್ನೆರಡು ದಿನಗಳಲ್ಲಿ ಖಾತೆ ಹಂಚಿಕೆ ಆಗಲಿದೆ. ನಾನು ಇಂತಹುದೇ ಖಾತೆ ಬೇಕು ಎಂದು ಕೇಳುವುದಿಲ್ಲ. ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ಮುಂದಿನ 2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ. ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಒಬ್ಬ ಕೆಟ್ಟ ಕನಸುಗಾರ. ಸರ್ಕಾರ ಬಿದ್ದು ಹೋಗುತ್ತದೆ, ನಾನು ಮತ್ತೆ ಸಿಎಂ ಆಗಬಹುದು ಎಂದು ಅವರು ಕನಸು ಕಂಡಿದ್ದರು. ಆದರೆ ಅದು ಹುಸಿಯಾಗಿದೆ, ಈ ಸರ್ಕಾರ ತನ್ನ ಅವಧಿ ಪೂರ್ಣಗೊಳಿಸಲಿದೆ. ಮತ್ತೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಇನ್ನೆಂದೂ ಅಧಿಕಾರಕ್ಕೆ ಬರುವುದಿಲ್ಲ, ಸಿದ್ದರಾಮಯ್ಯ ಮತ್ತೆ ಸಿಎಂ ಆಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮಾಜಿ ಸಚಿವ ರೋಷನ್ ಬೇಗ್ ಹಾಗೂ ಶಾಸಕ ಜಮೀರ್ ಅಹ್ಮದ್ ಮನೆಗಳ ಮೇಲೆ ಐಟಿ-ಇಡಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಸ್​.ಈಶ್ವರಪ್ಪ, ಅವರ ಹೆಸರು ಐಎಂಎ ಹಗರಣದಲ್ಲಿ ಕೇಳಿ ಬಂದಿದೆ. ಅದು ಸುಖಾಸುಮ್ಮನೆ ಉದ್ದೇಶಪೂರ್ವಕವಾಗಿ ನಡೆದ ದಾಳಿ ಅಲ್ಲ.

ಬಡವರು, ಕೂಲಿ ಕಾರ್ಮಿಕರು, ಐಎಂಎನಲ್ಲಿ ಹಣ ಕಳೆದುಕೊಂಡಿದ್ದಾರೆ, ಅವರಿಗೆ ಶಾಪ ತಟ್ಟಲಿದೆ. ಈ ಹಿಂದೆ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಕೊಲೆ ಆರೋಪದ ಮೇರೆಗೆ ಬಂಧಿಸಿದಾಗಲೂ ಕಾಂಗ್ರೆಸ್ಸಿಗರು ಅದರಲ್ಲೂ ವಿಶೇಷವಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೀಗೆ ಹೇಳಿದ್ದರು.

ನಂತರ ಏನಾಯಿತು. ಅವರಿಗೆ ಇನ್ನೂ ಜಾಮೀನು ಸಿಕ್ಕಿಲ್ಲ. ಹಾಗಾಗಿ ಜಮೀರ್ ಅಹ್ಮದ್ ಹಾಗೂ ರೋಷನ್ ಬೇಗ್ ಅವರು ಐಎಂಎ ಹಗರಣದಲ್ಲಿ ತಮ್ಮ ಪಾತ್ರ ಇಲ್ಲ ಎಂದು ಸಾಬೀತುಪಡಿಸಲಿ ಎಂದು ಸವಾಲೆಸೆದರು.

RELATED TOPICS:
English summary :Eshwarappa

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...