Sun,May19,2024
ಕನ್ನಡ / English

ಖೇಲ್ ರತ್ನ ಪ್ರಶಸ್ತಿಯನ್ನು, ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಯಾಗಿ ಮರುನಾಮಕರಣ - ಪ್ರಧಾನಿ ಮೋದಿ | ಜನತಾ ನ್ಯೂಸ್

06 Aug 2021
1294

ನವದೆಹಲಿ : ದೇಶದಲ್ಲಿ ಇನ್ನೂ ಮುಂದೆ ದೇಶದಲ್ಲಿ ಶ್ರೇಷ್ಠ ಆಟಗಾರನ ಹೆಸರಿನ ಪ್ರಶಸ್ತಿಯನ್ನು, ಬೇರೆ ಶ್ರೇಷ್ಠ ಆಟಗಾರರು ಪ್ರಶಸ್ತಿಯಾಗಿ ಸ್ವೀಕಾರ ಮಾಡಲಿದ್ದಾರೆ.

ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರಿನಲ್ಲಿ ಕರೆಯಲ್ಪಡುತ್ತಿದ್ದ, ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ಖೇಲ್ ರತ್ನ ಪ್ರಶಸ್ತಿಯನ್ನು, ಇಂದು ಶುಕ್ರವಾರ "ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ" ಎಂದು ಮರುನಾಮಕರಣ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಇಂದು ಘೋಷಿಸಿದ್ದಾರೆ. ಮರುನಾಮಕರಣವು ಸರ್ವಶ್ರೇಷ್ಠ ಹಾಕಿ ನಾಯಕ ಮತ್ತು ಕ್ರೀಡೆಯ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಗೌರವಾರ್ಥವಾಗಿದೆ. ರಾಷ್ಟ್ರದಾದ್ಯಂತದ ಹಲವಾರು ಮನವಿಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ, ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

"ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಅವರ ಹೆಸರಿಡಲು ನಾನು ಭಾರತದಾದ್ಯಂತ ನಾಗರಿಕರಿಂದ ಅನೇಕ ಮನವಿಗಳನ್ನು ಪಡೆಯುತ್ತಿದ್ದೇನೆ. ಅವರ ಅಭಿಪ್ರಾಯಗಳಿಗಾಗಿ ನಾನು ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ."

"ಅವರ ಭಾವನೆಯನ್ನು ಗೌರವಿಸಿ, ಈ ಮೂಲಕ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತದೆ!" #ಜೈಹಿಂದ್ ಜೊತೆ ಪ್ರಧಾನ ಮಂತ್ರಿ ಟ್ವೀಟ್ ಮಾಡಿದ್ದಾರೆ.

ಒಲಂಪಿಕ್ಸ್2020ನಲ್ಲಿ ಭಾರತದ ಪುರುಷರ ಹಾಗೂ ಮಹಿಳಾ ಹಾಕಿ ತಂಡಗಳು ತಮ್ಮ ಪ್ರದರ್ಶನದಿಂದ ರಾಷ್ಟ್ರದ ಕಲ್ಪನೆಯನ್ನು ಸೆರೆಹಿಡಿದಿರುವ ಸಮಯದಲ್ಲಿ ಈ ಬದಲಾವಣೆ ಬಂದಿದೆ.

ಪುರುಷರು ಮತ್ತು ಮಹಿಳೆಯರ ಹಾಕಿ ತಂಡದ ಅಸಾಧಾರಣ ಪ್ರದರ್ಶನವು ನಮ್ಮ ಇಡೀ ರಾಷ್ಟ್ರದ ಕಲ್ಪನೆಯನ್ನು ಸೆರೆಹಿಡಿದಿದೆ. ಭಾರತದ ಉದ್ದ ಮತ್ತು ಅಗಲದಲ್ಲಿ ಹೊರಹೊಮ್ಮುತ್ತಿರುವ ಹಾಕಿಯ ಕಡೆಗೆ ಹೊಸ ಆಸಕ್ತಿ ಇದೆ. ಮುಂಬರುವ ಸಮಯಕ್ಕೆ ಇದು ಅತ್ಯಂತ ಧನಾತ್ಮಕ ಸಂಕೇತವಾಗಿದೆ, ಎಂದು ಪ್ರಧಾನಿ ಮೋದಿ ಈ ಘೋಷಣೆಗೂ ಮುಂಚೆ ಹೇಳಿದ್ದಾರೆ.

ನಿನ್ನೆ, ಪುರುಷರ ಹಾಕಿ ತಂಡವು 41 ವರ್ಷಗಳ ನಿರಂತರ ಪರಿಶ್ರಮದ ನಂತರ ಬಹುನಿರೀಕ್ಷಿತ ಒಲಂಪಿಕ್ಸ್ ಪದಕವಾಗಿ ಕಂಚು ಪದಕ ಗೆದ್ದಿತು. ಮಹಿಳಾ ಹಾಕಿ ತಂಡವು ಇಂದು ಒಲಿಂಪಿಕ್ಸ್‌ನಲ್ಲಿ ತನ್ನ ಉತ್ಸಾಹಭರಿತ ಪ್ರದರ್ಶನದಲ್ಲಿ ಕಂಚಿನ ಪದಕ ಗಳಿಸುವ ಅವಕಾಶವನ್ನು ಸ್ವಲ್ಪದರಲ್ಲಿ ಕಳೆದುಕೊಂಡಿತು.

RELATED TOPICS:
English summary :Khel Ratna Award will hereby be called the Major Dhyan Chand Khel Ratna Award - PM Modi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...