Fri,May17,2024
ಕನ್ನಡ / English

ಮೇಕೆದಾಟು ವಸ್ತುಸ್ಥಿತಿ ಮನವರಿಕೆ ಮಾಡ್ತೇನೆ, ಶೀಘ್ರವೇ ದೆಹಲಿಗೆ ಹೋಗುವೆ: ಮೈಸೂರಿನಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ | ಜನತಾ ನ್ಯೂಸ್

09 Aug 2021
2033

ಮೈಸೂರು : ಮೈಸೂರಿನ‌ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಡಿಪಿಆರ್ ತಯಾರಾಗಿದ್ದು, ಶೀಘ್ರದಲ್ಲೇ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದ ಪ್ರಮುಖರನ್ನ ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಾನು ಸಿಎಂ ಆದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದಿದ್ದೇನೆ. ನಾಡಿನಲ್ಲಿ ಉತ್ತಮ ಮಳೆ, ಬೆಳೆಯಾಗಲಿ, ರಾಜ್ಯ ಕೊರೊನಾದಿಂದ ಮುಕ್ತವಾಗಬೇಕೆಂದು ಪ್ರಾರ್ಥಿಸಿದ್ದೇನೆ ಎಂದರು.

ಹಾಗೂ ಮೇಕೆದಾಟು ಯೋಜನೆಗೆ ಕೆಲವು ಪ್ರಕ್ರಿಯೆ ಮುಗಿಯಬೇಕಿದೆ. ಅದಾದ ಬಳಿಕ ಯೋಜನೆಯನ್ನು ಆರಂಭ ಮಾಡಲಾಗುವುದು. ಮೇಕೆದಾಟು ಯೋಜನೆ ಸಂಬಂಧ ದೆಹಲಿಗೆ ಹೋಗಬೇಕಿದೆ. ಯೋಜನೆಯ ವಸ್ತುಸ್ಥಿತಿಯನ್ನು ಅವರಿಗೆ ಮನವರಿಕೆ ಮಾಡ್ತೇನೆ. ವಕೀಲರ ತಂಡದ ಜೊತೆ ದೆಹಲಿಗೆ ತೆರಳಿ ಚರ್ಚಿಸುತ್ತೇನೆ. ನಮ್ಮ ಹಕ್ಕು ಪಡೆದು ಮೇಕೆದಾಟು ಯೋಜನೆ ಆರಂಭಿಸ್ತೇವೆ ಎಂದು ಚಾಮುಂಡಿ ಬೆಟ್ಟದಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಕಾವೇರಿ ಕೊಳ್ಳದಲ್ಲಿ ಲಭ್ಯವಾಗುವ ಗರಿಷ್ಠ ಪ್ರಮಾಣದ ನೀರಿನ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಮೇಕೆದಾಟು ಯೋಜನೆಗೆ ಈಗಾಗಲೇ ಡಿಪಿಆರ್ ತಯಾರಾಗಿದೆ. ಶೀಘ್ರದಲ್ಲೇ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದ ಪ್ರಮುಖರನ್ನ ಭೇಟಿ ಮಾಡುತ್ತೇನೆ. ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಕಾನೂನಾತ್ಮಕವಾಗಿ ನಮಗೆ ಇರುವ ಅವಕಾಶಗಳ ಬಗ್ಗೆ ಮನವರಿಕೆ ಮಾಡಿಕೊಳ್ಳುತ್ತೇನೆ ಎಂದರು.

ಇನ್ನೂ ಸಚಿವ ಸಂಪುಟ ರಚನೆ ವಿಚಾರದಲ್ಲಿ ಉಂಟಾಗಿರುವ ಗೊಂದಲದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಚಿವರಿಗೆ ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ರೀತಿಯ ಅಸಮಾಧಾನವಿಲ್ಲ ಎಂದ ಅವರು, ಸಚಿವ ಸಂಪುಟ ರಚನೆಯಾಗಿದ್ದು, ಎಲ್ಲರೂ ಸಹಕಾರ ಕೊಡುತ್ತಿದ್ದಾರೆ. ಸಣ್ಣಪುಟ್ಟ ಅಸಮಾಧಾನ ಇರಬಹುದು. ಅದನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಸದ್ಯ ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಬಗ್ಗೆ ಮಾಹಿತಿಯನ್ನು ಪಡೆಯುತ್ತೇನೆ. ಎಲ್ಲ ಗಡಿ ಜಿಲ್ಲೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತೇನೆ. ಕೊರೊನಾ ನಿಯಂತ್ರಣಕ್ಕೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ತೇನೆ ಎಂದರು.

RELATED TOPICS:
English summary :Mysuru

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...