Fri,May03,2024
ಕನ್ನಡ / English

ಖಾತೆ ಬೇಕು ಅಂತಾ ಬಯಸಿ, ಅಸಮಾಧಾನ ಸಹಜ.. ಆದರೆ ಕೊಟ್ಟ ಖಾತೆಯಲ್ಲಿ ಕೆಲಸ ಮಾಡಬೇಕು: ಬಿ.ಸಿ.ಪಾಟೀಲ್ | ಜನತಾ ನ್ಯೂಸ್

09 Aug 2021
2544

ಬೆಂಗಳೂರು : ನಿರ್ದಿಷ್ಟವಾಗಿ ಇಂತಹುದೇ ಖಾತೆ ಬೇಕು ಎಂಬ ಬೇಡಿಕೆಯಿಟ್ಟು, ಅಸಮಾಧಾನ ವ್ಯಕ್ತಪಡಿಸಿರುವುದು ಸರಿಯಲ್ಲ. ಕೊಟ್ಟಿರುವ ಖಾತೆಯನ್ನು ನಿಭಾಯಿಸಬೇಕು ಎಂದು ಸಚಿವರಾದ ಎಂ.ಟಿ.ಬಿ.ನಾಗರಾಜ್ ಮತ್ತು ಆನಂದ್ ಸಿಂಗ್ ಅವರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಪರೋಕ್ಷವಾಗಿ ಕುಟುಕಿದ್ದಾರೆ.

ಕೃಷಿ ಸಚಿವ ಬಿ.ಸಿ.ಪಾಟೀಲ್​ ಇಂದು ಕಚೇರಿಗೆ ಪೂಜೆ ಮಾಡಿ, ಅಧಿಕೃತವಾಗಿ ಕೆಲಸ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನ ಕೆಲಸವನ್ನು ಆರಂಭಿಸಿದ್ದೇನೆ. ನನಗೆ ಯಾವ ಖಾತೆ ಕೊಡುತ್ತೀರಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಕೇಳಿದ್ದೆ. ಕೃಷಿಗೆ ನಿನ್ನನ್ನು ಬಿಟ್ಟರೆ ಬೇರೆ ಯಾರೂ ಕಾಣುತ್ತಿಲ್ಲ ಅಂದಿದ್ದರು. ಸಂತೋಷದಿಂದ ನಾನು ಕೃಷಿ ಖಾತೆ ವಹಿಸಿಕೊಂಡಿದ್ದೇನೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.

"ಕೆಲವರು ತಮಗೆ ಇಂತಹದ್ದೇ ಖಾತೆ ಬೇಕು ಅಂತಾ ಬಯಸಿರುತ್ತಾರೆ. ಸಿಗದೇ ಇದ್ದಾಗ ಅಸಮಾಧಾನ ಸಹಜ. ಆದರೆ ಕೊಟ್ಟ ಖಾತೆಯಲ್ಲಿ ಕೆಲಸ ಮಾಡಬೇಕು" ಎಂದರು.

ನಾವು ಯಾವ ಖಾತೆಯಲ್ಲಿದ್ದರೂ ಅದು ಸರ್ಕಾರದ ಕೆಲಸ. ಆನಂದ್ ಸಿಂಗ್‌ಗೆ ಮೊದಲು ದೊಡ್ಡ ಖಾತೆಯನ್ನು ಕೊಟ್ಟಿದ್ದರು. ಆ ಖಾತೆಯನ್ನು ಕಿತ್ತುಕೊಂಡಿದ್ದಕ್ಕೆ ಅಸಮಾಧಾನವಾಗಿದೆ. ಖಾತೆ ದೊಡ್ಡದು ಅಂದರೆ ಹೆಚ್ಚು ಕೆಲಸ ಇರುತ್ತದೆ. ಅರಣ್ಯ ಖಾತೆ ಬಗ್ಗೆ ಏನು ಕನಸು ಕಂಡಿದ್ದರೆಂದು ಗೊತ್ತಿಲ್ಲ. 115+17 ಎರಡೂ ಸೇರಿದ್ದಕ್ಕೆ ಸರ್ಕಾರ ಸುಸೂತ್ರವಾಗಿದೆ. ಎರಡಕ್ಕೂ ಅಷ್ಟೇ ಪ್ರಾಮುಖ್ಯತೆ ಇದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್ ಅಸಮಾಧಾನ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು, ಖಾತೆ ಹಂಚಿಕೆ ವೇಳೆ ಅಸಮಾಧಾನ ಸಹಜವಾಗಿ ಇರುತ್ತದೆ. ಸಿಎಂ ಬೊಮ್ಮಾಯಿ ಅಸಮಾಧಾನವನ್ನು ಸರಿಪಡಿಸುತ್ತಾರೆ. ಎಲ್ಲದಕ್ಕೂ ಸದ್ಯದಲ್ಲಿಯೇ ತೆರೆಬೀಳುತ್ತದೆ. ನಮ್ಮ ಮಿತ್ರಮಂಡಳಿಯಲ್ಲಿ ಯಾವುದೇ ಬಿರುಕು ಇಲ್ಲ. ಸಚಿವ ಆನಂದ್ ಸಿಂಗ್ ಜತೆ ನಾನು ಚರ್ಚೆ ಮಾಡಿದ್ದೇನೆ. ಸದ್ಯದಲ್ಲಿಯೇ ಎಲ್ಲಾ ಅಸಮಾಧಾನ ಬಗೆಹರಿಯುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

RELATED TOPICS:
English summary :BC Patil

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...