Mon,May06,2024
ಕನ್ನಡ / English

ಜನರ ಜೀವ, ಜೀವನಕ್ಕೆ ಅಡಚಣೆ ಉಂಟಾಗಬಾರದು, ಕೋವಿಡ್ ಹೆಚ್ಚಾಗದಂತೆ ಕ್ರಮ: ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

14 Aug 2021
2084

ಬೆಂಗಳೂರು : ಜನರ ಜೀವ, ಜೀವನಕ್ಕೆ ಅಡಚಣೆ ಉಂಟಾಗಬಾರದು, ಜನರಿಗೆ ತೊಂದರೆ ಕೊಡೋದು ನಮ್ಮ ಉದ್ದೇಶ ಅಲ್ಲ, ಆದರೆ ಕೋವಿಡ್ ಹೆಚ್ಚಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಇವತ್ತು ಕೋವಿಡ್ ಪರಿಸ್ಥಿತಿ ಇದೆ. ಕೋವಿಡ್ ನಿರ್ವಹಣೆಯಲ್ಲಿ ಹಲವಾರು ಬದಲಾವಣೆ ಮಾಡುವ ಚಿಂತನೆ ಇದೆ. ಕರೊನಾ ಮೊದಲ ಹಾಗೂ ಎರಡನೇ ಅನುಭವದ ಆಧಾರದಲ್ಲಿ ಮೂರನೇ ಅಲೆ ನಿಯಂತ್ರಣ ನಿಟ್ಟಿನಲ್ಲಿ ಗಮನಹರಿಸಿದ್ದು, ತಜ್ಞರು ನಿರಂತರ ಶ್ರಮಿಸಿ ಸಹಕರಿಸುತ್ತಿದ್ದಾರೆ.

ಸೋಂಕು ಉಲ್ಬಣಿಸಿದ ನಂತರ ಹತೋಟಿಗೆ ಪ್ರಯತ್ನಿಸುವ ಬದಲಿಗೆ ಮುಂಜಾಗ್ರತಾ ಕ್ರಮಗಳಿಗೆ ಒತ್ತು ನೀಡಲಾಗುತ್ತದೆ. ಪ್ರಿವೆನ್ಷನ್ ಬೆಟರ್ ದೆನ್ ಕ್ಯೂರ್ ರೀತಿಯಲ್ಲಿ ಸರ್ಕಾರ ಮುತುವರ್ಜಿವಹಿಸಿದ್ದು, ವೈಜ್ಞಾನಿಕ ನಿಯಂತ್ರಣ ಹಾಗೂ ನಿರ್ವಹಣೆಗೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ನಾಳೆ 75 ನೇ ವರ್ಷದ ಸ್ವಾತಂತ್ರ್ಯ ದಿನ ಆಚರಣೆ ಸೌಭಾಗ್ಯ ಬಂದಿದೆ. ಹಲವು ಸವಾಲುಗಳನ್ನು ರಾಜ್ಯ ಎದುರಿಸಿದೆ. ಹಲವು ಸವಾಲೆದುರಿಸಿ ಇಡೀ ದೇಶಕ್ಕೆ ನಮ್ಮ ರಾಜ್ಯ ದೇಶಕ್ಕೆ ಮಾದರಿಯಾಗಿದೆ. ಕೋವಿಡ್ ಸಂದರ್ಭ ಇದೆ ಇವತ್ತು. ಕೋವಿಡ್ ನಿರ್ವಹಣೆಯ ಅನುಭವದ ಹಿನ್ನೆಲೆಯಲ್ಲಿ ಹಲವು ಬದಲಾವಣೆ ಮಾಡುವ ಚಿಂತನೆ ಇದೆ. ಕೊರೊನಾ ಹೆಚ್ಚಾದಾಗ ಕ್ರಮ ಕೈಗೊಳ್ಳುವ ಬದಲು ಮುಂಚೆಯೇ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದರು.

ನಾಡು, ನುಡಿ, ನೆಲ-ಜಲ, ಸಾಹಿತ್ಯ-ಸಂಸ್ಕೃತಿ, ಆಡಳಿತ, ತಂತ್ರಜ್ಞಾನ, ಉದ್ಯಮ-ವ್ಯವಹಾರ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಬಿಂಬಿಸುವ ಕಾರ್ಯಕ್ರಮ ವರ್ಷಪೂರ್ತಿ ನಡೆಯಲಿದ್ದು, ಕರೊನಾ ಮುನ್ನೆಚ್ಚರಿಕೆ ನಿಯಮಗಳ ಪಾಲನೆಯೊಂದಿಗೆ ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಿಸಲಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ‌ ತಿಳಿಸಿದರು.

RELATED TOPICS:
English summary :Basavaraj bommai

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...