Mon,May06,2024
ಕನ್ನಡ / English

ಪ್ರಾಥಮಿಕ - ಪ್ರೌಢ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ನೇಮಕ ಮಾಡಿ: ಶಿಕ್ಷಣ ಸಚಿವರಿಗೆ ಕ್ರೀಡಾ ಸಚಿವ ನಾರಾಯಣಗೌಡ ಪತ್ರ | ಜನತಾ ನ್ಯೂಸ್

14 Aug 2021
2343

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಅವಕಾಶ ನೀಡಬೇಕು. ಖಾಲಿ ಇರುವ ದೈಹಿಕ ಶಿಕ್ಷಕರ ಹುದ್ದೆ ಭರ್ತಿಯಾಗಬೇಕು. ಶಾಲೆಯಲ್ಲಿ ನಿತ್ಯ ವ್ಯಾಯಾಮ, ಕ್ರೀಡೆಗೆ ಒಂದು ಗಂಟೆ ಸಮಯ ಮೀಸಲಿಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಸಚಿವ ನಾರಾಯಣಗೌಡ ಪತ್ರ ಬರೆದಿದ್ದಾರೆ.

ಕಳೆದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ನಮ್ಮ ದೇಶ ಉತ್ತಮ ಸಾಧನೆ ಮಾಡಿದೆ. ಇನ್ನೂ ಹೆಚ್ಚಿನ ಸಾಧನೆ ಆಗಬೇಕೆಂದರೆ ಈಗಲೇ ಸಿದ್ಧತೆ ಮಾಡಬೇಕು. ಬಾಲ್ಯದಲ್ಲಿಯೇ ಕ್ರೀಡೆಯಲ್ಲಿ ಆಸಕ್ತಿ ಮೂಡುವಂತಾಗಬೇಕು. ಹಾಗಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ದೈಹಿಕ ಶಿಕ್ಷಕರನ್ನು ನೇಮಕ ಮಾಡಿ, ಕನಿಷ್ಠ ಒಂದು ಗಂಟೆ ಕ್ರೀಡೆಗೆ ಮೀಸಲಿಡಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕ್ರೀಡೆಯಲ್ಲಿ ಮಕ್ಕಳಿಗೆ ಸೂಕ್ತ ತರಬೇತಿಯೂ ಸಿಗಬೇಕು. ಆಗ ಮಾತ್ರ ಕ್ರೀಡೆಯಲ್ಲಿ ಸಾಧನೆ ಸಾಧ್ಯ. ಅದಕ್ಕಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಅವಕಾಶ ನೀಡಬೇಕು. ಖಾಲಿ ಇರುವ ದೈಹಿಕ ಶಿಕ್ಷಕರ ಹುದ್ದೆ ಭರ್ತಿಯಾಗಬೇಕು. ಶಾಲೆಯಲ್ಲಿ ಪ್ರತಿ ನಿತ್ಯ ವ್ಯಾಯಾಮ, ಕ್ರೀಡೆಗೆ ಒಂದು ಗಂಟೆ ಸಮಯ ಮೀಸಲಿಡಿ. ವಿದ್ಯಾರ್ಥಿ ದೆಸೆಯಲ್ಲೇ ಕ್ರೀಡೆಯ ತರಬೇತಿ ಆಗಬೇಕು.

ಆಸಕ್ತಿ ಇರುವ ಸಮರ್ಥ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಮುಂದುವರಿಯುತ್ತಾರೆ. ಕ್ರೀಡಾಂಗಣ, ಕ್ರೀಡಾ ಸೌಲಭ್ಯ ಇದ್ದ ಮಾತ್ರಕ್ಕೆ ಸಾಧನೆ ಆಗಲಾರದು. ಬುನಾದಿ ಸರಿಯಾಗಿರಬೇಕು. ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಂತದಲ್ಲೇ ವ್ಯಾಯಾಮ, ಕ್ರೀಡೆ ಬಗ್ಗೆ ಸೂಕ್ತ ತರಬೇತಿ ನೀಡುವ ಪ್ರಕ್ರಿಯೆ ಆರಂಭವಾಗಬೇಕು. ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ 39,308 ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇದೆ ಎಂದು ತಿಳಿಸಿದ್ದಾರೆ.

ಮುಂದಿನ ಒಲಿಂಪಿಕ್ಸ್​ಗೆ ನಮ್ಮ ರಾಜ್ಯದಿಂದ 100 ಕ್ರೀಡಾಪಟುಗಳನ್ನು ಕಳುಹಿಸುವ ಗುರಿ ಹೊಂದಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕ್ರೀಡಾಪಟುಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕಳುಹಿಸಬೇಕೆಂದರೆ ಈಗಿನಿಂದಲೇ ಸಿದ್ಧತೆ ಆಗಬೇಕು.

ದೈಹಿಕ ಶಿಕ್ಷಕರ ನೇಮಕವಾಗಬೇಕು. ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಇದು ಸಹಕಾರಿಯಾಗುತ್ತದೆ. ಶಿಕ್ಷಣ ಸಚಿವರು ಕಡ್ಡಾಯವಾಗಿ ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ತೆಗೆದುಕೊಳ್ಳಿ ಎಂದು ಸಚಿವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

RELATED TOPICS:
English summary :Narayana Gowda

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...