Sun,May12,2024
ಕನ್ನಡ / English

ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿ ಭೇಟಿ ನೀಡಲು ಅನುಮತಿ ನೀಡಿದ ಸುಪ್ರಿಂಕೋರ್ಟ್ | ಜನತಾ ನ್ಯೂಸ್

19 Aug 2021
2826

ನವದೆಹಲಿ : ಬಹುಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ಕರ್ನಾಟಕದ ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿ ಜಿಲ್ಲೆ ಮತ್ತು ಆಂಧ್ರಪ್ರದೇಶದ ಕಡಪ ಹಾಗೂ ಅನಂತಪುರಂಗೆ ಭೇಟಿ ನೀಡಲು ಮತ್ತು ಉಳಿಯಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

2011ರ ಸೆಪ್ಟೆಂಬರ್‌ನಲ್ಲಿ ಅವರನ್ನು ಬಂಧಿಸಲಾಗಿತ್ತು. ಬಳಿಕ 2015ರಲ್ಲಿ ಅವರಿಗೆ ಜಾಮೀನು ನೀಡಿದ್ದರೂ, ರಾಜ್ಯದ ಗಡಿ ಭಾಗದಲ್ಲಿರುವ ಬಳ್ಳಾರಿಗೆ ಭೇಟಿ ನೀಡದಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಬಳಿಕ ಗಾಲಿ ಜನಾರ್ಧನ್ ರೆಡ್ಡಿ ತಮ್ಮ ಊರಾದ ಬಳ್ಳಾರಿಗೆ ಭೇಟಿ ನೀಡಲು ಅನುಮತಿ ಕೋರಿದ್ದರು, ಅನೇಕ ವರ್ಷಗಳ ನಂತರ ಇಂದು ಅನುಮತಿ ನೀಡಲಾಗಿದೆ.

ಪಟ್ಟಣಕ್ಕೆ ಭೇಟಿ ನೀಡಲು ಅನುಮತಿ ಕೋರಿದ ರೆಡ್ಡಿ ಮನವಿಯನ್ನು, ಬಳ್ಳಾರಿಯ ನಿವಾಸಿಗಳಾದ ಪ್ರಕರಣದ ಎಲ್ಲಾ 47 ಸಾಕ್ಷಿಗಳ ಜೀವಕ್ಕೆ ಗಂಭೀರ ಬೆದರಿಕೆ ಹಾಕುತ್ತಾರೆ, ಎಂದು ಆರೋಪಿಸಿ, ಕೇಂದ್ರ ತನಿಖಾ ದಳವು(ಸಿಬಿಐ) ವಿರೋಧಿಸಿತ್ತು. ಅಲ್ಲದೇ, ಇದು ತನಿಖೆಯ ಮೇಲೆ ಪ್ರಭಾವ ಬೀರುತ್ತದೆ ಎಂದು ಅದು ಹೇಳಿದೆ.

"ಅತ್ಯಂತ ಕುಖ್ಯಾತ ಗಣಿ ಹಗರಣ" ಎಂದು ಕರೆಯಲ್ಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾದ ನಂತರ 2015ರ ಜನವರಿಯಿಂದ ಜಾಮೀನಿನ ಮೇಲೆ ಹೊರಬಂದಿದ್ದ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಇಂದು ಸ್ವಲ್ಪ ಹೆಚ್ಚಿನ ಪರಿಹಾರವನ್ನು ನೀಡಿದೆ. ಅವರ ಜಾಮೀನು ಷರತ್ತುಗಳನ್ನು ಸಡಿಲಿಸಿ, ರಾಜ್ಯ ರಾಜಧಾನಿ ಬೆಂಗಳೂರಿನಿಂದ ಉತ್ತರಕ್ಕೆ 300 ಕಿಲೋಮೀಟರುಗಳಷ್ಟು ದೂರದಲ್ಲಿರುವ ಅವರ ಊರಾದ ಬಳ್ಳಾರಿಯಲ್ಲಿ ಉಳಿಯಲು ನ್ಯಾಯಾಲಯವು ಅನುಮತಿ ನೀಡಿತು.

ಗಣಿಗಾರಿಕೆ ಉದ್ಯಮಿ ಆಗಿರುವ ರಾಜಕಾರಣಿ ಪಟ್ಟಣಕ್ಕೆ ಭೇಟಿ ನೀಡುವಾಗ ಮತ್ತು ಅದನ್ನು ತೊರೆಯುವಾಗ ಪೊಲೀಸ್ ವರಿಷ್ಠಾಧಿಕಾರಿಗೆ ತಿಳಿಸಬೇಕು, ಎಂದು ಸುಪ್ರೀಂ ಕೋರ್ಟ್ ಹೇಳಿದೆ.

"ಪ್ರಕರಣದಲ್ಲಿ ವಿಚಾರಣೆ ಕೂಡ ಆರಂಭವಾಗಿಲ್ಲ ಮತ್ತು ಅರ್ಜಿದಾರರು ಇದುವರೆಗೂ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ. ಆದ್ದರಿಂದ, ಅವರಿಗೆ ಬಳ್ಳಾರಿಗೆ ಹೋಗಲು ಅನುಮತಿ ಇದೆ ... ಏತನ್ಮಧ್ಯೆ, ವಿಚಾರಣಾ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸಬಹುದು" ಎಂದು ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ದಿನೇಶ್ ಮಹೇಶ್ವರಿ ನ್ಯಾಯಾಧೀಶರ ಪೀಠ ಇಂದು ಹೇಳಿದೆ.

RELATED TOPICS:
English summary :Supreme court permits Gali Janardhan Reddy to visit Ballary

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...