Sun,May19,2024
ಕನ್ನಡ / English

ಕರಾವಳಿ ಸೇರಿ ಹತ್ತು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1 ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ! | ಜನತಾ ನ್ಯೂಸ್

29 Aug 2021
2234

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಂಡ ಹಿನ್ನೆಲೆಯಲ್ಲಿ ನಾಳೆ(ಆ.30)ಯಿಂದ ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಹೀಗಾಗಿ, ಮುಂದಿನ 48 ಗಂಟೆಗಳ ವರೆಗೆ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯ ಹವಾಮಾನ ಇಲಾಖೆ ಭಾನುವಾರ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮೂರ್ನಾಲ್ಕು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೆರಡು ದಿನ ಬೆಂಗಳೂರು ಕರಾವಳಿಯ 3 ಜಿಲ್ಲೆಗಳು ಸೇರಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರದಲ್ಲಿ ಮಳೆ ಹೆಚ್ಚಳ ಆಗಲಿದೆ ಎಂದು ಹೇಳಿದೆ.

ಆಂಧ್ರ ಕರಾವಳಿ ಮತ್ತು ಓರಿಸ್ಸಾ ಭಾಗಗಳ ಕಡಿಮೆ ಒತ್ತಡ ಮತ್ತು ವಾಯುಭಾರ ಕುಸಿತ ರಾಜ್ಯದ ಮೇಲೆ ಪರಿಣಾಮ ಬೀರಿದ್ದು, ದಕ್ಷಿಣ ಕನ್ನಡ ಮುಖ್ಯವಾಗಿ ಸುಬ್ರಹ್ಮಣ್ಯ, ಮಂಗಳೂರು, ಬಂಟ್ವಾಳ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಇದು ಸೆಪ್ಟೆಂಬರ್ 1 ರ ವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಕಳೆದ 2 ವಾರಗಳಿಂದ ಭಾರೀ ಮಳೆಯಾಗುತ್ತಿದ್ದು, ಆಗಸ್ಟ್ 29 ರಂದು ಆರೇಂಜ್ ಆಲರ್ಟ್ ಘೋಷಣೆ ಮಾಡಲಾಗಿದೆ. ಮತ್ತು ಆಗಸ್ಟ್ 30ರಂದು ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಕೂಡ ಕಳೆದ 2 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ಮಳೆಯಾಗುವ ಸಾಧ್ಯತೆ ಇದೆ.

ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಆಗಸ್ಟ್ 29 ರಿಂದ ಸೆಪ್ಟೆಂಬರ್ 1 ರ ವರೆಗೆ ಭಾರೀ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

RELATED TOPICS:
English summary :Weather Report

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...