Thu,May02,2024
ಕನ್ನಡ / English

ಚೀನಾದೊಂದಿಗಿನ ಗಡಿ ವಿವಾದ ಮಾತುಕತೆ ಮೂಲಕ ಪರಿಹಾರ: ಏಕಪಕ್ಷಿಯ ಕ್ರಮಕ್ಕೆ ಅವಕಾಶ ನೀಡುವುದಿಲ್ಲ - ರಾಜನಾಥ್ ಸಿಂಗ್ | ಜನತಾ ನ್ಯೂಸ್

31 Aug 2021
1365

ನವದೆಹಲಿ : ಚೀನಾದೊಂದಿಗಿನ ಗಡಿ ವಿವಾದಗಳಿಗೆ ಮಾತುಕತೆಯ ಮೂಲಕ ಪರಿಹಾರವನ್ನು ಭಾರತ ಬಯಸುತ್ತದೆ, ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಪುನರ್ರುಚ್ಚರಿಸಿದ್ದಾರೆ. ಸಿಂಗ್ ರಾಷ್ಟ್ರೀಯ ಭದ್ರತೆಯ ವಿಷಯವಾಗಿ ಪಂಜಾಬ್ ವಿಶ್ವವಿದ್ಯಾಲಯವು ಆಯೋಜಿಸಿದ ಮೂರನೇ ಬಲರಾಮ್‌ಜಿ ದಾಸ್ ಟಂಡನ್ ಸ್ಮಾರಕ ಉಪನ್ಯಾಸದಲ್ಲಿ ಮಾತನಾಡುತ್ತಿದ್ದರು.

ಗಡಿಗಳ ಪಾವಿತ್ರ್ಯತೆಯನ್ನು ಉಲ್ಲಂಘಿಸಲು ಸರ್ಕಾರ ಎಂದಿಗೂ ಅನುಮತಿಸುವುದಿಲ್ಲ, ಎಂದು ಪ್ರತಿಪಾದಿಸಿದ ರಕ್ಷಣಾ ಸಚಿವರು ಇದೇ ಸಂದರ್ಭದಲ್ಲಿ, ವಾಸ್ತವ ನಿಯಂತ್ರಣ ರೇಖೆ(ಎಲ್‌ಎಸಿ)ಯಲ್ಲಿ ಯಾವುದೇ ರೀತಿಯ ಏಕಪಕ್ಷೀಯ ಕ್ರಮವನ್ನು ನಿರ್ಲಕ್ಷಿಸಬಾರದು ಎಂದು ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಸರ್ಕಾರವು ಸ್ಪಷ್ಟಪಡಿಸಿದೆ, ಎಂದು ಅವರು ಹೇಳಿದ್ದಾರೆ.

ಭಾರತವು ಚೀನಾದೊಂದಿಗಿನ ಗಡಿ ವಿವಾದಕ್ಕೆ ಮಾತುಕತೆಯ ಮೂಲಕ ಪರಿಹಾರವನ್ನು ಬಯಸುತ್ತದೆ, ಎಂದು ರಕ್ಷಣಾ ಸಚಿವರು ಹೇಳಿದರು ಮತ್ತು "ದೇಶದ ಗಡಿ, ದೇಶದ ಗೌರವ ಮತ್ತು ಸ್ವಾಭಿಮಾನ" ವಿಷಯಗಳಲ್ಲಿ ಸರ್ಕಾರ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ, ಎಂದು ಪ್ರತಿಪಾದಿಸಿದರು. ಗಡಿಗಳ ಪಾವಿತ್ರ್ಯವನ್ನು ಉಲ್ಲಂಘಿಸಲು ನಾವು ಎಂದಿಗೂ ಅನುಮತಿಸುವುದಿಲ್ಲ, ಎಂದು ಅವರು ಸ್ಪಷ್ಟವಾಗಿ ಹೇಳಿದರು.

ಚೀನಾದ ಗಡಿಯಲ್ಲಿ ಗ್ರಹಿಕೆ ವ್ಯತ್ಯಾಸಗಳಿವೆ ಇದರ ಹೊರತಾಗಿಯೂ, ಕೆಲವು ಒಪ್ಪಂದಗಳು, ಪ್ರೋಟೋಕಾಲ್‌ಗಳಿವೆ, ಇದನ್ನು ಎರಡೂ ದೇಶಗಳ ಸೇನೆಗಳು ಗಸ್ತು ನಡೆಸಲು ಅನುಸರಿಸುತ್ತವೆ, ಎಂದು ರಕ್ಷಣಾ ಸಚಿವರು ಹೇಳಿದರು.

ಕಳೆದ ವರ್ಷ ಪೂರ್ವ ಲಡಾಖ್ ನಲ್ಲಿ ನಡೆದ ಘರ್ಷಣೆಗಳನ್ನು ಉಲ್ಲೇಖಿಸಿ, ಚೀನಾ ಪಡೆಗಳು ಒಪ್ಪಿಕೊಂಡ ಪ್ರೋಟೋಕಾಲ್ ಗಳನ್ನು ಕಡೆಗಣಿಸಿವೆ, ಎಂದು ಸಿಂಗ್ ಹೇಳಿದರು.

"ಯಾವುದೇ ಸಂದರ್ಭದಲ್ಲಿಯೂ ಚೀನೀ ಸೇನೆ(ಪಿಎಲ್‌ಎ)ಗೆ ಏಕಪಕ್ಷೀಯವಾಗಿ ಎಲ್‌ಎಸಿಯಲ್ಲಿ ಕಾರ್ಯನಿರ್ವಹಿಸಲು ನಾವು ಅನುಮತಿಸುವುದಿಲ್ಲ. ಆ ದಿನ ಭಾರತೀಯ ಸೇನೆಯು ಗಲ್ವಾನ್‌ನಲ್ಲಿ ಅದನ್ನೇ ಮಾಡಿದೆ ಮತ್ತು ಪಿಎಲ್‌ಎ ಸೈನಿಕರನ್ನು ಧೈರ್ಯದಿಂದ ಎದುರಿಸಿ ಅವರನ್ನು ಹಿಮ್ಮೆಟ್ಟುವಂತೆ ಒತ್ತಾಯಿಸಿತು, ಎಂದು ಸ್ಮರಿಸಿದ ಅವರು ಇದನ್ನು "ಐತಿಹಾಸಿಕ ಘಟನೆ" ಎಂದು ಕರೆದರು.

RELATED TOPICS:
English summary :Solution for border disputes through dialogues : Unilateral action will not be allowed - Rajnath Singh

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...